ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ : ಸಿಎಂ

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ : ಸಿಎಂ

ಬೆಳಗಾವಿ, ಡಿ.16- ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದ ಅವರು, ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಬಟ್ಟೆ/ಸೀರೆಗಳನ್ನು ನೇಕಾರರ ಸಾಮಥ್ರ್ಯಕ್ಕನುಗುಣವಾಗಿ ಖರೀದಿಸಲು ಪ್ರಮಾಣವನ್ನು ನಿಗದಿಪಡಿಸಲಾಗುವುದು.

ಇದರೊಂದಿಗೆ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ ಕೈಮಗ್ಗದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯಲ್ಲೂ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದುತಿಳಿಸಿದರು.

# ಸಭೆಯಲ್ಲಿ ಕೈಗೊಳ್ಳಲಾದ ಇತರ ನಿರ್ಧಾರಗಳು:
ಗಿರಿಜನ ಉಪ ಯೋಜನೆಯ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೆ ಸಹಾಯಧನ ನೀಡುವ ಬೇಡಿಕೆಯ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸಕಾರಾತ್ಮಕವಾಗಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲಿ ವೃತ್ತಿಪರ ಕೂಲಿ ನೇಕಾರರಿಗೂ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಉದ್ಯಮಗಳಿಗೆ ಅಲ್ಪ ಪ್ರಮಾಣದ ಸೆಸ್ ವಿಸುವ ಮೂಲಕ ನೆರವು ನೀಡಲು ಚಿಂತನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನೇಕಾರರು ವಾಸಿಸುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ, ಕಾಲೋನಿಗಳನ್ನಾಗಿ ಪರಿವರ್ತಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಕಾರಿಗಳಿಗೆ ಸೂಚಿಸಿದರು.

ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯುವ ಪ್ರಕ್ರಿಯೆ ಕುರಿತು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಿ, ನೇಕಾರರ ಕಿರುಕುಳ ತಪ್ಪಿಸಲು ಕ್ರಮ ವಹಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಕಾರಿಗಳಿಗೆ ತಿಳಿಸಿದರು.

ನೇಕಾರರಿಗೆ ಸಂಬಂಸಿದ ಮೂರು ನಿಗಮಗಳನ್ನು ಒಗ್ಗೂಡಿಸಿ ಬಲಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸೌಲಭ್ಯ ಒದಗಿಸುವ ಬೇಡಿಕೆ ಈಡೇರಿಸಲು ಸಮ್ಮತಿಸಿದ ಸಿಎಂ, ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಹಾಗೂ ಬಡ್ಡಿ ಸಹಾಯ ಧನ ನೀಡುವ ಯೋಜನೆಯ ಮೊತ್ತ ಹೆಚ್ಚಿಸುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲಾಕ್‍ಡೌನ್ ನಂತರ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನೇಕಾರರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಮ್ಮತಿಸಿದರು.ಮಹಾರಾಷ್ಟ್ರ ಹಾಗೂ ತಮಿಳು ನಾಡು ರಾಜ್ಯಗಳಲ್ಲಿ ನೇಕಾರರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ವರದಿ ತರಿಸಿಕೊಂಡು ರಾಜ್ಯದ ನೇಕಾರರ ಹಿತಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸುವುದಾಗಿ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Thu Dec 16 , 2021
ಬೆಳಗಾವಿ, ಡಿಸೆಂಬರ್ 16: ರಾಜ್ಯ ಬಿಜೆಪಿ ಸರಕಾರದ 40 % ಕಮಿಷನ್ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿಯಿಂದ ಬೆಳಗಾವಿಯ ಸುವರ್ಣ ಸೌಧದ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು. ಟ್ರ್ಯಾಕ್ಟರ್, ಆಟೋ ಮತ್ತು ಎತ್ತಿನ ಬಂಡಿಗಳಲ್ಲಿ ಬಂದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕತರು ಸುವರ್ಣ ಸೌಧದೊಳಗೆ ನುಗ್ಗಲು ಮುಂದಾದಾಗ ಪೊಲೀಸರು ಗೇಟ್‌ ಬಳಿಯೇ ತಡೆಹಿಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಬ್ಯಾರಿಕೇಡ್ ದಾಟಿ ಒಳನುಗ್ಗಲು ಪ್ರಯತ್ನಿಸಿದಾಗ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. […]

Advertisement

Wordpress Social Share Plugin powered by Ultimatelysocial