ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ.

 

 

 

ಡಿಕೇರಿ: ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಲದ ಸುಂದರ ಬನ್‌ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ಮುಖವಾಡವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫ‌ಲಪ್ರದವಾಗಿದೆ. ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್‌ ಸಿ.ಪಿ. ಮುತ್ತಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಬ್ರಹ್ಮಪುತ್ರ ನದಿ ಸಮುದ್ರ ವನ್ನು ಸೇರುವ ಸುಂದರಬನ್‌ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖ ವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣ ಗಳು ಇಳಿಮುಖವಾಗಿದೆ. ಈ ಮುಖ ವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖ ದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು. ಪ್ರಸ್ತಾವನೆ ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಬ್ಬರ್‌ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು. ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರೂ ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು. ದಾಳಿಯಿಂದ ಮೃತ ಹಸುಗಳನ್ನು ಹಾಗೇ ಬಿಡಿ ಹುಲಿ ಜಾನುವಾರುಗಳನ್ನು ಕೊಂದು, ಒಂದಷ್ಟು ತಿಂದು ತೆರಳುತ್ತದೆ. ಹಸಿವಾದಾಗ ಮತ್ತೆ ಅದೇ ಸ್ಥಳಕ್ಕೆ ಉಳಿದ ಭಾಗವನ್ನು ಭಕ್ಷಿಸಲು ಬರುತ್ತದೆ. ಈ ಹಿನ್ನೆಲೆಯಲ್ಲಿ ಸತ್ತ ಜಾನುವಾರುಗಳನ್ನು ಅಲ್ಲೇ ಬಿಟ್ಟು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ, ಮತ್ತೆ ಹುಲಿ ಆ ಸ್ಥಳಕ್ಕೆ ಬಂದಾಗ ಸೆರೆ ಹಿಡಿಯಲು ಅನುಕೂಲವಾಗುತ್ತದೆ. ಸತ್ತ ಜಾನುವಾರನ್ನು ಮಾಲಕರು ಕೊಂಡೊಯ್ದಲ್ಲಿ ಹುಲಿಯು ಆಹಾರಕ್ಕಾಗಿ ಮತ್ತೆ ಬೇರೊಂದನ್ನು ಹುಡುಕಲು ಮುಂದಾಗುತ್ತದೆ ಎಂದು ತಿಳಿಸಿದರು. ಹುಲಿ ಹಾವಳಿ ಹೆಚ್ಚಾಗಿರುವ ಪ್ರದೇಶದ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಬೇಕು. ಪಾಳು ಬಿದ್ದ ಗದ್ದೆಗಳಲ್ಲಿ ಕಾಡು ಹಂದಿ ಸೇರಿಕೊಳ್ಳುವುದರಿಂದ ಅದನ್ನು ಬೇಟೆಯಾಡಲು ಹುಲಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗದ್ದೆಗಳಲ್ಲಿ, ಕಾಫಿ ತೋಟಗಳಲ್ಲಿ ಕಾಡು ಪೊದೆ ಬೆಳೆಯಲು ಅವಕಾಶ ಮಾಡಿಕೊಡಬಾರದೆಂದು ಕರ್ನಲ್‌ ಮುತ್ತಣ್ಣ ಸಲಹೆ ನೀಡಿದರು.  ಹುಲಿ ದಾಳಿಯಿಂದ ಜಾನುವಾರುಗಳು ಮೃತಪಟ್ಟಲ್ಲಿ ನಮ್ಮ ಸಂಸ್ಥೆಯಿಂದ ವರ್ಲ್ಡ್ ವೈಲ್ಡ್‌ ಲೈಫ್ ಫ‌ಂಡ್‌ನಿಂದ ಲಭ್ಯ ಅನುದಾನದಲ್ಲಿ ತತ್‌ಕ್ಷಣ 5 ಸಾವಿರ ರೂ. ಪರಿಹಾರವನ್ನು ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿತ್ಯ ಮೊಟ್ಟೆ ಸೇವಿಸಿದರೂ ಬರುವುದು ಹಾರ್ಟ್ ಅಟ್ಯಾಕ್ .!

Thu Jan 12 , 2023
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಅತಿ ಕಿರಿಯ ವಯಸ್ಸಿನವರು ಕೂಡಾ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದ್ದಕ್ಕಿದ್ದಂತೆಯೇ ಕುಸಿದು ಬೀಳುವುದು, ಆಟವಾಡುತ್ತಿದ್ದಂತೆಯೇ ಉಸಿರು ನಿಲ್ಲುವುದು, ಡಾನ್ಸ್ ಮಾಡುತ್ತಿರುವಾಗ ಹೃದಯ ಸ್ತಬ್ಧವಾಗುವುದು ಇಂಥ ಘಟನೆಗಳನ್ನು ಪದೇ ಪದೇ ಕೇಳುತ್ತಿರುತ್ತೇವೆ. ಈ ಸಂದರ್ಭಗಳಲ್ಲಿ ಮನಸ್ಸಿನಲ್ಲಿ ನಾನಾ ಪ್ರಶ್ನೆಗಳು ಓಡಾಡುತ್ತವೆ. ಹೃದಯಾಘಾತಕ್ಕೆ ಕಾರಣ ಹಲವು ಇರಬಹುದು. ಅದರಲ್ಲಿ ನಾವು ಸೇವಿಸುವ ಆಹಾರ ಕೂಡಾ ಸೇರಿದೆ. ಯಾವ ರೀತಿಯ ಆಹಾರ ಹೃದಯಾಘಾತಕ್ಕೆ ಕಾರಣವಾಗುತ್ತದೆ ಎನ್ನುವುದನ್ನು […]

Advertisement

Wordpress Social Share Plugin powered by Ultimatelysocial