ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ.

ಬೆಂಗಳೂರು: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ.

ದೊಡ್ಡ ಜವಾಬ್ದಾರಿ ಇರುವ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ.

ಹೀಗಾಗಿ, ಪ್ರಧಾನಿ ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ ಎಂದು ಹೇಳಿದ್ದಾರೆ.

ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುತ್ತಿಲ್ಲ ಎಂದು ಜಸಿಂಡಾ ಅವರು ದಿಢೀರ್ ನಿರ್ಧಾರ ಪ್ರಕಟಿಸಿದ್ದು, ಪಕ್ಷದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು ನಿರ್ವಹಿಸುವುದು ಕೂಡ ಸುಲಭವಲ್ಲ. ಅಂತಹ ಹುದ್ದೆಗೆ ಸೂಕ್ತ ವ್ಯಕ್ತಿ ಇದ್ದರೆ ಚೆನ್ನ. ನನಗೆ ಪ್ರಧಾನಿ ಹುದ್ದೆ ನಿಭಾಯಿಸಲು, ಪದವಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಸಿಂಡಾ ಹೇಳಿಕೆ ನೀಡಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈ ಟಿಕೆಟ್‌ಗಾಗಿ ಅಲ್ಪಸಂಖ್ಯಾತರಿಂದ ಹೆಚ್ಚಿದ ಒತ್ತಡ.

Thu Jan 19 , 2023
ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಲೇಬೇಕೆಂದು ಪಟ್ಟು. ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರನ್ನ ಭೇಟಿ ‌ಮಾಡಿದ ನಿಯೋಗ. ನಿನ್ನೆ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌‌ಗೆ ಮನವಿ ಸಲ್ಲಿಸಿದ ನಿಯೋಗ. ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಮೌಲ್ವಿಗಳು, ಸಮಾಜದ ಮುಖಂಡರನ್ನೊಳಗೊಂಡ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಕೆ. ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿಯಾದ್ರೂ ಟಿಕೆಟ್‌ ನೀಡಬೇಕೆಂದು ಒತ್ತಡ.. ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ […]

Advertisement

Wordpress Social Share Plugin powered by Ultimatelysocial