ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳು.

ವಿಶ್ವದ ಕಾರು ತಯಾರಕರ ದೊಡ್ಡ ಮಾರುಕಟ್ಟೆಯಲ್ಲಿ ಭಾರತದ ವಾಹನ ಮಾರುಕಟ್ಟೆಯು ಕೂಡ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಕಾರುಗಳು ಮಾರಾಟವಾಗುತ್ತಿವೆ. ಕಡಿಮೆ ಬೆಲೆಯ ಕಾರುಗಳಿಂದ ಬಹುಕೋಟಿ ಬೆಲೆಯ ಸೂಪರ್ ಕಾರುಗಳು ಕೂಡ ಮಾರಾಟವಾಗುತ್ತಿವೆ.ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ವಿಭಾಗದ ಹೊಸ ಕಾರುಗಳು ಬಿಡುಗಡೆಯಾಗಲಿದೆ, ಫೆಬ್ರವರಿ ತಿಂಗಳಿನಲ್ಲಿ ಪ್ರೀಮಿಯಂ ಮತ್ತು ಬಜೆಟ್ ಬೆಲೆಯ ಹೊಸ ಕಾರು ಬಿಡುಗಡೆಯಾಗಲಿದೆ. ಇದರಿಂದ ಭಾರತೀಯ ಕಾರು ಪ್ರೀಯರ ಆಯ್ಕೆಯು ಹೆಚ್ಚಾಗಲಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.ಆಡಿ ಕ್ಯೂ7 ಫೇಸ್‌ಲಿಫ್ಟ್
ಆಡಿ ಇಂಡಿಯಾ (Audi India) ಕಂಪನಿಯು ಹೊಸ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ (Audi Q7 facelift) ಎಸ್‍ಯುವಿಯು ಫೆಬ್ರವರಿ 3 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ,ಆಡಿ ಕಂಪನಿಯು 2022ರ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯ ಖರೀದಿಗಾಗಿ ಅಧಿಕೃತವಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ, ಈ ಐಷಾರಾಮಿ ಎಸ್‍ಯುವಿಯನ್ನು ಖರೀದಿಸಲು ಬಯಸುವವರು ಟೋಕನ್ ಮೊತ್ತ ರೂ,5 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಆಡಿ ಕ್ಯೂ7 ಫೇಸ್‌ಲಿಫ್ಟ್ ಅನ್ನು ಪ್ರೀಮಿಯಂ ಪ್ಲಸ್ ಮತ್ತು ಟೆಕ್ನಾಲಜಿ ಸೇರಿದಂತೆ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ.ಈ ಎರಡು ರೂಪಾಂತರಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ. ನವೀಕರಿಸಿದ ಎಸ್‍ಯುವಿಯಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯು 250 ಕಿಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ, ಬ್ರ್ಯಾಂಡ್‌ನ ಕ್ವಾಟ್ರೊ ಆಲ್-ವೀಲ್-ಡ್ರೈವ್ ಸಿಸ್ಟಂ ಸಹ ಈ ಎಸ್‍ಯುವಿಯಲ್ಲಿ ಹೊಂದಿರುತ್ತದೆ2022ರ ಮಾರುತಿ ಬಲೆನೊ
ಈ ಹೊಸ ಮಾರುತಿ ಬಲೆನೊ ಕಾರನ್ನು ಫೆಬ್ರವರಿ 10 ರಂದು ಬಿಡುಗಡೆಯಾಗಲಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಗುಜರಾತ್ ಮೂಲದ ಸ್ಥಾವರದಲ್ಲಿ ಹೊಸ 2022ರ ಮಾರುತಿ ಬಲೆನೊ ಕಾರಿನ ಉತ್ಪಾದನೆಯನ್ನು ಈಗಾಗಲೇ ಪ್ರಾರಂಭಿಸಿದೆ. ಈ ಹ್ಯಾಚ್‌ಬ್ಯಾಕ್‌ನ ಮೊದಲ ಯುನಿಟ್ ಅನ್ನು ಇದೇ ತಿಂಗಳ 24 ರಂದು ಹೊರತರಲಾಯಿತು. ಇದರ ಚಿತ್ರಗಳು ಈಗಾಗಲೇ ಇಂಟರ್ನೆಟ್‌ನಲ್ಲಿ ಸೋರಿಕೆಯಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಲ್.ಆರ್. ಶಿವರಾಮೇಗೌಡರನ್ನು ನೋಟಿಸ್ ಕೊಟ್ಟು ಪಕ್ಷದಿಂದ ಹೊರ ಹಾಕಿದ :ಮಾಜಿ ಸಿಎಂ ಕುಮಾರಸ್ವಾಮಿ

Mon Jan 31 , 2022
ಬೆಂಗಳೂರು: ದಿವಂಗತ ಮಾದೇಗೌಡ ವಿರುದ್ಧ ಆಡಿಯೋ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸೋಮವಾರ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಿರುದ್ಧ ಗುಡುಗಿದ್ದು, ನೋಟಿಸ್ ಕೊಟ್ಟು ಪಕ್ಷದಿಂದ ಹೊರ ಹಾಕಲಾಗುವುದು, ಈ ಬಗ್ಗೆ ಪಕ್ಷದ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ ಎಂದಿದ್ದಾರೆ. ಜೆಪಿ ಭವನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಸಭೆ ಸಂಧರ್ಭ ಮಾತನಾಡಿದ ಹೆಚ್ ಡಿಕೆ, ನಿನ್ನೆ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ನೋಡಿದ್ದೇನೆ, ಶಿವರಾಮೇಗೌಡರ ದೂರವಾಣಿ ರೆಕಾರ್ಡ್ ವೈರಲ್ ಆಗಿದೆ. ಸಂಬಂಧ […]

Advertisement

Wordpress Social Share Plugin powered by Ultimatelysocial