ಅಕ್ರಮ ಸಂಬಂಧ ನೋಡಿದ ಪುತ್ರನ ಜೀವ ತೆಗೆದ ತಾಯಿ, ಪ್ರಿಯಕರನೊಂದಿಗೆ ಸೇರಿ ಕೊಲೆ

 

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

22 ವರ್ಷದ ಬಸವರಾಜ ನಾಪತ್ತೆಯಾಗಿರುವುದಾಗಿ ಆತನ ಮಾವ ಶರಣಪ್ಪಗೌಡ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಬಸವರಾಜ ಕೊಲೆಯಾಗಿರುವುದು ಗೊತ್ತಾಗಿದೆ.

ತಾಯಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಅಮರಪ್ಪನೊಂದಿಗೆ ಬಸವರಾಜ ಜಗಳವಾಡಿದ್ದಾನೆ. ಬಳಿಕ ತಾಯಿ ಅಮರಪ್ಪ ಮತ್ತು ಅಮರೇಶ ಸೇರಿಕೊಂಡು ದೊಣ್ಣೆಯಿಂದ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ತಾವರಗೇರಾ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್-19: ದೇಶದಲ್ಲಿಂದು 7,554 ಹೊಸ ಕೇಸ್ ಪತ್ತೆ, 223 ಮಂದಿ ಸಾವು

Wed Mar 2 , 2022
ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 7,554 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 223 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,14,066ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,680ಕ್ಕೆ ತಲುಪಿದೆ. ಈ ನಡುವೆ […]

Advertisement

Wordpress Social Share Plugin powered by Ultimatelysocial