ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ,

ಬೆಂಗಳೂರು: ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಇಂದು (ಮೇ.31) ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಬಿಎಸ್​ವೈ ಮಾತನಾಡಿ ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕದಿಂದ ರಾಜ್ಯಸಭೆಗೆ ಅಯ್ಕೆಯಾಗುವ ನಾಲ್ಕನೇ ಅಭ್ಯರ್ಥಿ

Tue May 31 , 2022
ಬೆಂಗಳೂರು, ಮೇ. 20 : ಕರ್ನಾಟಕದಿಂದ ರಾಜ್ಯಸಭೆಗೆ ಅಯ್ಕೆಯಾಗುವ ನಾಲ್ಕನೇ ಅಭ್ಯರ್ಥಿ ರಾಜ್ಯ ರಾಜಕೀಯದಲ್ಲಿ ಚದುರಂಗ ಆಟಕ್ಕೆ ನಾಂದಿ ಹಾಡಿದೆ. ರಾಜ್ಯಸಭೆಗೆ ಕರ್ನಾಟಕದಿಂದ ನಾಲ್ಕನೇ ಅಭ್ಯರ್ಥಿ ಆಯ್ಕೆ ಸಂಬಂಧ ಮೂರು ರಾಜಕೀಯ ಪಕ್ಷಗಳು ಗೆಲುವಿಗಾಗಿ ಸೆಣಸಾಣ ನಡೆಸುತ್ತಿವೆ. ಮೂರು ಪಕ್ಷಗಳು ತಮ್ಮದೇ ತಂತ್ರಗಳನ್ನು ರೂಪಿಸಿವೆ. ಕರ್ನಾಟಕದ ವಿಧಾನಸಭೆ ಸದಸ್ಯರ ಬಲದಿಂದ ನಾಲ್ಕು ರಾಜ್ಯ ಸಭೆ ಸದಸ್ಯರ ಆಯ್ಕೆಗೆ ಅವಕಾಶವಿದೆ. ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ನಿಂದ ಒಬ್ಬರು ಸಲೀಸಾಗಿ ಆಯ್ಕೆಯಾಗಲು ಅವಕಾಶವಿದೆ. […]

Advertisement

Wordpress Social Share Plugin powered by Ultimatelysocial