ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ.

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್.

ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ.

“ನಿರ್ಮುಕ್ತ” ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ.

ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೊ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು. ಸಂಗೀತ ಕ್ಷೇತ್ರದಲ್ಲಿ ಅವರದೇ ಹೆಸರು. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು ಸುಮಲತಾ ಅಂಬರೀಶ್.

ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು.

ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೆಜಿಎಫ್ ಅಧ್ಯಾಯ 2 ಬಾಕ್ಸ್ ಆಫೀಸ್:ಯಶ್ ಚಿತ್ರವು ವಿಶ್ವಾದ್ಯಂತ ₹ 1000 ಕೋಟಿ ಗಳಿಸಿದೆ,ಈ ಸಾಧನೆ ಮಾಡಿದ 4 ನೇ ಭಾರತೀಯ ಚಿತ್ರವಾಗಿದೆ!

Sat Apr 30 , 2022
ಯಶ್ ನಾಯಕನಾಗಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ವಿಶ್ವದಾದ್ಯಂತ ಒಟ್ಟು ಕಲೆಕ್ಷನ್‌ನಲ್ಲಿ ₹1000 ಕೋಟಿ ದಾಟಿದೆ. ಈ ಚಿತ್ರವು RRR, ದಂಗಲ್ ಮತ್ತು ಬಾಹುಬಲಿ:ದಿ ಕನ್‌ಕ್ಲೂಷನ್ ನಂತರ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಚಲನಚಿತ್ರವಾಗಿದೆ.ಕೆಜಿಎಫ್ 2 ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್,ಶ್ರೀನಿಧಿ ಶೆಟ್ಟಿ ಮತ್ತು ಪ್ರಕಾಶ್ ರಾಜ್ ಕೂಡ ನಟಿಸಿದ್ದಾರೆ. ಇದನ್ನೂ ಓದಿ: ನಿರ್ದೇಶಕ ಪ್ರಶಾಂತ್ ನೀಲ್,ನಿರ್ಮಾಪಕರೊಂದಿಗೆ ಕೆಜಿಎಫ್ ಅಧ್ಯಾಯ 2 ಯಶಸ್ಸನ್ನು ಆಚರಿಸುತ್ತಿರುವಾಗ ಯಶ್ ಮುತ್ತಿನ […]

Advertisement

Wordpress Social Share Plugin powered by Ultimatelysocial