ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ನಿಸ್ಸಾನ್ ಮ್ಯಾಗ್ನೈಟ್;

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ಕಾರು ಮಾದರಿಯು ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗೆ ಕಾರಣವಾಗಿದ್ದು, ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಬರೋಬ್ಬರಿ 78 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಇದುವರೆಗೆ ಸುಮಾರು 78 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ದಾಖಲಾಗಿದ್ದು, ಇದರಲ್ಲಿ 40 ಸಾವಿರ ಯುನಿಟ್ ಕಾರುಗಳನ್ನು ಈಗಾಗಲೇ ವಿತರಣೆ ಮಾಡಿದೆ.

ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮ್ಯಾಗ್ನೈಟ್ ಕಾರು ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿಯೇ ನಿರ್ಮಾಣ ಮಾಡಿ ವಿಶ್ವದ ಪ್ರಮುಖ 15 ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಭಾರತದಿಂದ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಬ್ರೂನೈ, ಉಗಾಂಡಾ, ಕೀನ್ಯಾ, ಸೀಶೆಲ್ಸ್, ಮೊಜಾಂಬಿಕ್, ಜಾಂಬಿಯಾ, ಮಾರಿಷಸ್, ತಾಂಜಾನಿಯಾ, ಮಲಾವಿ ದೇಶಗಳಿಗೆ ರಫ್ತುಗೊಳ್ಳುತ್ತಿದೆ.

ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.76 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.15 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ನಂತರ ಹಲವು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್‌ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್‌ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್‌ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್‌ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ವರನು ತನ್ನ ಮೇಲೆ ವರ್ಮಲಾವನ್ನು ಎಸೆದ ನಂತರ ಯುಪಿ ವಧು ಮದುವೆಯನ್ನು ರದ್ದುಗೊಳಿಸಿದಳು

Sat Jan 29 , 2022
ಸಂಪ್ರದಾಯದಂತೆ ವರನು ತನ್ನ ಕೊರಳಿಗೆ ಹಾಕುವ ಬದಲು ವರ್ಮಲವನ್ನು ಎಸೆದ ನಂತರ ಉತ್ತರ ಪ್ರದೇಶದ ವಧು ತನ್ನ ಮದುವೆಯನ್ನು ರದ್ದುಗೊಳಿಸಿದಳು. ಔರೈಯಾ ಜಿಲ್ಲೆಯ ವಧು, ವರನ ವರ್ತನೆಯಿಂದ ಅಸಮಾಧಾನಗೊಂಡ ನಂತರ ಅವರನ್ನು ಮದುವೆಯಾಗಲು ನಿರಾಕರಿಸಿದರು. ಬಿದುನಾ ಪೊಲೀಸ್ ವೃತ್ತದ ವ್ಯಾಪ್ತಿಯ ನವೀನ್ ಬಸ್ತಿಯಲ್ಲಿ ಘಟನೆ ವರದಿಯಾಗಿದೆ. ವಧು ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಎರಡೂ ಮನೆಯವರು ಜಗಳ ಮಾಡಿಕೊಂಡಿದ್ದಾರೆ. ವರನು ವರ್ಮಲವನ್ನು ಎಸೆದಿರುವುದನ್ನು ನಿರಾಕರಿಸಿದನು. ಮದುವೆಯ ವಿಧಿವಿಧಾನಗಳನ್ನು ಮುಂದುವರಿಸಲು ವಧುವಿನ ಮನವೊಲಿಸಲು […]

Advertisement

Wordpress Social Share Plugin powered by Ultimatelysocial