ಒಂದು ಹೆಜ್ಜೆ ಹಿಂದೆಕ್ಕೆ ಹೋಗಿರಬಹುದು.ಆದರೆ ಮತ್ತೆ ಮುನ್ನುಗ್ಗುತ್ತೇವೆ’: ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವರ ಅಚ್ಚರಿ ಹೇಳಿಕೆ…

 

ವಿವಾದಿತ ಕೃಷಿ ಕಾಯ್ದೆ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನರೇಂದ್ರ ಸಿಂಗ್ ತೋಮರ್ ಅವರು, ‘ಕೃಷಿ ಕಾಯ್ದೆ ವಿಚಾರವಾಗಿ ಒಂದು ಹೆಜ್ಜೆ ಹಿಂದೆ ಹೋಗಿರಬಹುದು. ಆದರೆ ಮತ್ತೆ ಮುನ್ನುಗ್ಗುತ್ತೇವೆ ಎಂದು ಹೇಳಿದ್ದಾರೆ.

 

 

ಸಂಸತ್ತಿನಲ್ಲಿ ಚರ್ಚೆಯ ಕೊರತೆಯಿಂದ ಆ ಮಹತ್ವದ ಕಾಯ್ದೆಯನ್ನು ರದ್ದುಗೊಳಿಸಲಾಯಿತು.  ಸ್ವಾತಂತ್ರ್ಯ ಬಂದು  70 ವರ್ಷಗಳ ಬಳಿಕ ಕೃಷಿ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ದಿಗಾಗಿ ನಮ್ಮ ಸರ್ಕಾರ ಕ್ರಾಂತಿಕಾರಿ ಕಾನೂನು ತರಲು ಮುಂದಾಗಿತ್ತು.

ಇದು ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಹಿಡಿಸಲಿಲ್ಲ. ಹೀಗಾಗಿ ಕಾಯ್ದೆಗಳ ಕುರಿತು ಅಪಪ್ರಚಾರ ಮಾಡಿ ಅವುಗಳ ವಿರುದ್ಧ ಪ್ರತಿಭಟಿಸುವಂತೆ ಮಾಡಿದರು. ಆದರೆ ಅವರಿಗೆ ನೆನಪಿರಲಿ.. ಸರ್ಕಾರ ಇದರಿಂದ ನಿರಾಶೆಗೊಂಡಿಲ್ಲ.

‘ರೈತರ ಅನುಕೂಲಕ್ಕಾಗಿ ನಾವು ಒಂದು ಹೆಜ್ಜೆ ಹಿಂದೆ ಇರಿಸಿದ್ದೇವೆ. ಭವಿಷ್ಯದಲ್ಲಿ ಮತ್ತೆ ಮುಂದಕ್ಕೆ ತೆರಳಲಿದ್ದೇವೆ. ಕೃಷಿ ಕಾನೂನುಗಳಲ್ಲಿ ಅಗತ್ಯ ಬದಲಾವಣೆಮಾಡಿ ಮತ್ತೆ ತರಲಿದ್ದೇವೆ ಎಂದು ತೋಮರ್ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.ಇದು ದೇಶದಲ್ಲಿ ಸಂಚಲನಮೂಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡಿಸೆಂಬರ್‌ 31ಕ್ಕೆ ಕರ್ನಾಟಕ ಬಂದ್:‌ ದಿನಾಂಕ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದ ವಾಟಾಳ್‌ ನಾಗರಾಜ್

Sat Dec 25 , 2021
‌ ಎಂಇಎಸ್ ಪುಂಡಾಟದ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ದಿನಾಂಕ ಬದಲಾವಣೆ ಇಲ್ಲ, 31ರಂದು ಬಂದ್ ಮಾಡೇ ಮಾಡ್ತೀವಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಸೂಚಿಸಿವೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಸೂಚಿಸಿದ್ದಾರೆ. ಆದರೆ ನಮಗೆ ಯಾವುದೇ ನೈತಿಕ ಬೆಂಬಲ ನೀಡುವ ಅಗತ್ಯವಿಲ್ಲ. ಇದು […]

Advertisement

Wordpress Social Share Plugin powered by Ultimatelysocial