ನಿತಿನ್ ಗಡ್ಕರಿ, ದೇವೇಂದ್ರ ಫಡ್ನವೀಸ್ ತವರು ನೆಲದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!

ಮುಂಬೈ ಫೆಬ್ರವರಿ 3: ನಿತಿನ್ ಗಡ್ಕರಿ, ದೇವೇಂದ್ರ ಫಡ್ನವೀಸ್ ಅವರ ತವರು ನೆಲದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಗುರುವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಒಕ್ಕೂಟದ ಅಭ್ಯರ್ಥಿ ಬಿಜೆಪಿ ಪಕ್ಷದ ಸ್ಪರ್ಧಿಯನ್ನು ಸೋಲಿಸಿದ್ದಾರೆ.

ಹೀಗಾಗಿ ತನ್ನ ಭದ್ರಕೋಟೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ನಾಗ್ಪರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನ ಕೇಂದ್ರ ಕಚೇರಿಯನ್ನು ಹೊಂದಿದೆ. ಜೊತೆಗೆ ಇದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ರಂತಹ ಪ್ರಮುಖ ನಾಯಕರ ತವರು ಕ್ಷೇತ್ರವಾಗಿದೆ.

ರಾಜ್ಯದಲ್ಲಿ ನಡೆದ ಪ್ರಮುಖ ಸ್ಪರ್ಧೆ ಇದಾಗಿದೆ. ಚುನಾವಣೆಯಲ್ಲಿ ಎಂವಿಎಯ ಸುಧಾಕರ್ ಅಡ್ಬಲೆ ಗೆಲುವು ಸಾಧಿಸಿ ಬಿಜೆಪಿ ಬೆಂಬಲಿತ ನಾಗೋ ಗನಾರ್ ಅವರನ್ನು ಸೋಲಿಸಿದರು. ರಾಜ್ಯ ಶಾಸಕಾಂಗದ ಮೇಲ್ಮನೆಗೆ ದ್ವೈವಾರ್ಷಿಕ ಚುನಾವಣೆಗಳು ಮುಖ್ಯವಾಗಿ ಬಿಜೆಪಿ ಮತ್ತು ಶಿಂಧೆ ಅವರ ಶಿವಸೇನೆ ಬಣದ ಆಡಳಿತದ ಮೈತ್ರಿ ಮತ್ತು ಶ್ರೀ ಠಾಕ್ರೆ ಅವರ ಶಿವಸೇನಾ ಶಿಬಿರ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಒಳಗೊಂಡಿರುವ ಎಂವಿಎ ಬೆಂಬಲಿತ ಅಭ್ಯರ್ಥಿಗಳ ನಡುವೆ ನಡೆಯಿತು.

ಮೂರು ಶಿಕ್ಷಕರು ಮತ್ತು ಇಬ್ಬರು ಪದವೀಧರ ಕ್ಷೇತ್ರಗಳ ಐದು ಕೌನ್ಸಿಲ್ ಸದಸ್ಯರ 6 ವರ್ಷಗಳ ಅವಧಿ ಫೆಬ್ರವರಿ 7 ರಂದು ಮುಕ್ತಾಯಗೊಳ್ಳುತ್ತಿದ್ದು, ಈ ಹಿನ್ನೆಲೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸೋಮವಾರ ಮತದಾನ ನಡೆದಿದೆ. ಕೊಂಕಣ ಶಿಕ್ಷಕರ ಕ್ಷೇತ್ರದಲ್ಲಿ ಶೇ.91.02 ಅತಿ ಹೆಚ್ಚು ಮತದಾನವಾಗಿದ್ದು, ನಾಸಿಕ್ ವಿಭಾಗದ ಪದವೀಧರರ ಸ್ಥಾನವು ಅತಿ ಕಡಿಮೆ ಶೇ.49.28ರಷ್ಟು ಮತದಾನವಾಗಿದೆ.

ಔರಂಗಾಬಾದ್, ನಾಗ್ಪುರ ಮತ್ತು ಕೊಂಕಣ ವಿಭಾಗದ ಶಿಕ್ಷಕರ ಕ್ಷೇತ್ರಗಳಲ್ಲಿ ಕ್ರಮವಾಗಿ ಶೇ.86, ಶೇ.86.23 ಮತ್ತು ಶೇ.91.02ರಷ್ಟು ಮತದಾನವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಟೆಲಿವಿಷನ್ ಪ್ರಿಮಿಯರ್ ಲೀಗ್ -2

Fri Feb 3 , 2023
ಮಾರ್ಚ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಟೆಲಿವಿಷನ್ ಪ್ರಿಮಿಯರ್ ಲೀಗ್ -2 ಹಿರಿಯ ಕಲಾವಿದರು, ತಂತ್ರಜ್ಞರ ಬದುಕಿಗೆ ಆಸೆಯಾಗಬೇಕೆನ್ನುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2 ಲೋಗೋ ಬಿಡುಗಡೆ ಹಾಗೂ ಸುದ್ದಿಗೋಷ್ಟಿ ಗುರುವಾರ ರಾತ್ರಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಪುನೀತ್ ರಾಜ್‍ಕುಮಾರ್ ಅವರನ್ನು ಸ್ಮರಿಸಿ ಆ ಬಳಿಕ ಆ ತಂಡಗಳ ಮಾಲೀಕರು ಹಾಗೂ ಅಂಬಾಸಿಡರ್ ಗಳ ಸಮ್ಮುಖದಲ್ಲಿ ಲೋಗೋ ಬಿಡುಗಡೆ […]

Advertisement

Wordpress Social Share Plugin powered by Ultimatelysocial