ನೂರಸಾಬ್ ಎಂಬ ವ್ಯಕ್ತಿಯೇ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

 

ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ನವಲಗುಂದ ರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್ ವೊಂದು ಏಕಾಏಕಿ ವ್ಯಕ್ತಿಯೋರ್ವನಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಥಳದಲ್ಲಿಯೇ ಅಸುನೀಗಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ನೂರಸಾಬ್ ಕಿರೇಸೂರ ಎಂಬ ವ್ಯಕ್ತಿಯೇ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಜರುಗಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮೃತ ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದ್ದು ಬಂದಿತ್ತು. ರಸ್ತೆ ತಡೆ ನಡೆಸಿದ ಗ್ರಾಮಸ್ಥರು ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಂತೆ ಒಂದು ಗಂಟೆ ಕಲ ರಸ್ತೆ ತಡೆ ನಡೆಸಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಹಶಿಲ್ದಾರ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು‌. ನಂತರ ಈ ಮುಖ್ಯ ರಸ್ತೆಯಲ್ಲಿ ರಸ್ತೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.ಇನ್ನೂ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಟಿ ಹೆಚ್ಚು ಖರ್ಚು ಮಾಡುತ್ತೇವೆ ಸಭೆಯಲ್ಲೇ ರಮೇಶ ಜಾರಕಿಹೊಳಿ ಘೋಷಣೆ.

Sat Jan 21 , 2023
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.ಸುಳೇಬಾವಿಯಲ್ಲಿ ಶುಕ್ರವಾರ ಸಂಜೆ ನಡೆದ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.ನಾವು ಮೊದಲು ಸಂಘಟನೆ […]

Advertisement

Wordpress Social Share Plugin powered by Ultimatelysocial