ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು..!

ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ ಮಾಡಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ. ಚೀನಾ ಜತೆಗಿನ ವ್ಯಾಪಾರ, ವಹಿವಾಟು ಬಂದ್ ಮಾಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಉತ್ತರಕೊರಿಯಾದಲ್ಲಿ ಬಿರುಗಾಳಿ ಮತ್ತು ಪ್ರವಾಹದಿಂದಾಗಿ ಬೆಳೆಗಳು ನಾಶವಾದ ಪರಿಣಾಮ ಆಹಾರ ಬಿಕ್ಕಟ್ಟು ವಿಕೋಪಕ್ಕೆ ಹೋಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

 

‌ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುಜರಾತ್‌ಗೆ ರಾಷ್ಟ್ರಪತಿ ಮೂರು ದಿನಗಳ ಭೇಟಿ...!!

Thu Oct 28 , 2021
ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 29 ರಂದು ಭಾವನಗರ ಜಿಲ್ಲೆಯಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆ ಉದ್ಘಾಟಿಸಿ, ನಂತರ ಅವರು ಅಹಮದಾಬಾದ್‌ಗೆ ತೆರಳಿ ನಂತರ ಮಹುವಾಗೆ ಹೊಗಲಿದ್ದಾರೆ. ಅವರನ್ನು ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಬರಮಾಡಿಕೊಳ್ಳಲಿದ್ದು, ಅಲ್ಲಿಂದಭಾವನಗರ ಜಿಲ್ಲೆಯ ತಲಗಜರಡಾದಲ್ಲಿರುವ ಮೊರಾರಿ ಬಾಬು ಅವರ ಆಶ್ರಮವಾದ ಶ್ರೀ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial