(NPS) ಕುರಿತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಮಹತ್ವದ ಹೇಳಿಕೆ.

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.ಹೊಸ ಪಿಂಚಣಿ ವ್ಯವಸ್ಥೆ ಜಾರಿಯಾಗಿರುವ ಕಾರಣ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಯಾವುದೇ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮರು ಜಾರಿಗೊಳಿಸಬೇಕು ಎಂದು ಈ ಹೋರಾಟ ನಡೆದಿದ್ದು, ಇದರ ಮಧ್ಯೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಹತ್ವದ ಹೇಳಿಕೆ ನೀಡಿದ್ದಾರೆ.ಇತ್ತೀಚೆಗೆ ನಡೆದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಂದರ್ಭದಲ್ಲಿ ಮಾತನಾಡಿದ ಅವರು, ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದುಗೊಳಿಸಲು ಆಗ್ರಹಿಸಿ ಏಪ್ರಿಲ್ ನಿಂದ ನಿರ್ಣಾಯಕ ಹೋರಾಟ ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಇದು ನೆಹರೂ ಭಾರತವಲ್ಲ, ಬಿಜೆಪಿ ತಿರುಗೇಟು!

Sat Dec 17 , 2022
ನವದೆಹಲಿ(ಡಿ.17): ಅರುಣಾಚಲ ಪ್ರದೇಶದ (Arunachal Pradesh) ತವಾಂಗ್‌ನಲ್ಲಿ (Tawang) ಭಾರತ ಮತ್ತು ಚೀನಾ ಸೈನಿಕರ (China Army)ನಡುವಿನ ಘರ್ಷಣೆ ಬಳಿಕ ದೇಶದಲ್ಲಿ ಕೋಲಾಹಲ ಎದ್ದಿದೆ. ಮೊನ್ನೆಯಷ್ಟೇ ಸಂಸತ್ತಿನಲ್ಲಿ ಈ ವಿಷಯವನ್ನು ಏರುದನಿಯಲ್ಲಿ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುತ್ತಿಗೆ ಹಾಕಿದ್ದವು. ಇದೀಗ ಶುಕ್ರವಾರ (ಡಿಸೆಂಬರ್ 16) ಈ ವಿಚಾರವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆ ಬಳಿಕ ಗದ್ದಲ ಎದ್ದಿದೆ. ಚೀನಾದೊಂದಿಗಿನ ಯುದ್ಧದ ಬೆದರಿಕೆಯನ್ನು ಭಾರತ ನಿರ್ಲಕ್ಷಿಸುತ್ತಿದೆ ಎಂದು ರಾಹುಲ್ ಗಾಂಧಿ […]

Advertisement

Wordpress Social Share Plugin powered by Ultimatelysocial