‘ಖ್ಯಾತ ಹಾಸ್ಯನಟ ಸುನೀಲ್ ಗ್ರೋವರ್’ ಎದೆನೋವಿನಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ಜನಪ್ರಿಯ ಹಾಸ್ಯನಟ ಮತ್ತು ನಟ ಸುನಿಲ್ ಗ್ರೋವರ್ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ. 44 ವರ್ಷದ ನಟ ಎದೆ ನೋವಿನಿಂದ ಬಳಲುತ್ತಿದ್ದು, ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಇದೀಗ ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.ನಟನ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.ಈ ಕುರಿತಂತೆ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಸುನೀಲ್ ಗ್ರೋವರ್ ಅವರು ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಳಿಕ ಅವರು ಆರೋಗ್ಯವಾಗಿರೋದಾಗಿ ಹೇಳಿದ್ದಾರೆ.ಅಂದಹಾಗೇ ನಟ ಸುನೀಲ್ ಗ್ರೋವರ್ ವೆಬ್ ಸರಣಿ ಚಿತ್ರೀಕರಣದಲ್ಲಿ ಮುಂಬೈನಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ಕೆಎಲ್ ರಾಹುಲ್ ನಾಯಕತ್ವದಿಂದ ಕೆಳಗಿಳಿದರೆ ರೋಹಿತ್ ಶರ್ಮಾ ವೃತ್ತಿಜೀವನ ಅಂತ್ಯ;

Wed Feb 2 , 2022
ನವದೆಹಲಿ : ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ರಾಹುಲ್ ನಾಯಕತ್ವದಲ್ಲಿ ಭಾರತ ಆಫ್ರಿಕಾ ತಂಡದ ವಿರುದ್ಧ 3-0 ಅಂತರದ ಸೋಲನ್ನು ಎದುರಿಸಬೇಕಾಯಿತು. ಇದೀಗ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ತಂಡವನ್ನು ಪ್ರಕಟಿಸಿದ್ದು, ತಂಡದ ಭರ್ಜರಿ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ವಾಪಸಾಗಿದ್ದಾರೆ. ರೋಹಿತ್ ಕಮ್ ಬ್ಯಾಕ್ ಮಾಡಿದ ಮೇಲೆ ಮಾರಕ ಬೌಲರ್ ಗೆ ತಂಡದಲ್ಲಿ ಸ್ಥಾನ […]

Advertisement

Wordpress Social Share Plugin powered by Ultimatelysocial