ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್

 

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್ ಆರೀಫ್ ನನ್ನು ಗುರುವಾರ ಬಂಧಿಸಿದ್ದಾರೆ. ಗಲಭೆಗೆ ಪ್ರಚೋದನೆ ಹಾಗೂ ಭಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್ ಮೈಂಡ್‌ ಮಂಟೂರ ರಸ್ತೆ ಮಿಲ್ಲತ್ ನಗರದ ಲಾರಿ ಚಾಲಕ, ಮೌಲ್ವಿ ವೇಷಧಾರಿ ಹೈದರಾಬಾದ್ ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೆ ತೆರಳಿದೆ.

ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯ ವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬುಧವಾರ 11 ಜನರನ್ನು ಬಂಧಿಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿ 127 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ!

Thu Apr 21 , 2022
  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ನಡುವೆ ಆಣೆಪ್ರಮಾಣದ ರಾಜಕೀಯ ವೇಗ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು ಮಗನ ಪರವಾಗಿ ಸ್ವಾಭಾವಿಕವಾಗಿ ನಿಂತಿದ್ದಾರೆ. ಕುಮಾರಸ್ವಾಮಿಯವರ ಜನತಾ ಜಲಧಾರೆ ಮತ್ತು ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆಯನ್ನು ಉಲ್ಲೇಖಿಸಿ ಮಾತನಾಡಿದ ಗೌಡ್ರು, ರಾಜ್ಯದ ನೀರಿಗಾಗಿ ಹೋರಾಟದಲ್ಲಿ ತಮ್ಮ ಹಿಂದಿನ ಅನುಭವಗಳನ್ನು ಮಾಧ್ಯಮದವರೊಂದಿಗೆ ಮೆಲುಕು ಹಾಕಿಕೊಂಡಿದ್ದಾರೆ. ಜಲಧಾರೆಯಿಂದ ಏನಾಗಿ ಬಿಡುತ್ತೆ, ರಾಜ್ಯದ ಪಾಲಿನ ನೀರನ್ನು ಕೊಟ್ಟುಬಿಡುತ್ತಾರಾ ಎನ್ನುವ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial