5 ವರ್ಷಗಳ ಹಿಂದೆ ನಡೆದ ಒಂದು ಅಪಘಾತದಿಂದ ಮೂಕನಾಗಿದ್ದವನಿಗೆ ಕೊರೊನಾ ವ್ಯಾಕ್ಸಿನ್ನ ಪಾವಡದಿಂದ ಮಾತು ಬಂದಿದೆ

 ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಮಾತು ಪುನಃ ಬಂದಿದೆ . ಹೌದು ಇಡೀ ಪ್ರಪಂಚದ ಜನರ ನೆಮ್ಮದಿ ಹಾಳು ಮಾಡಿದ ಕೊರೊನಾಗೆ ದೇಶದಲ್ಲಿ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್​ ಲಸಿಕೆ ನೀಡಲಾಗ್ತಿದೆ.

ಈಗಾಗಲೇ ಕೋಟ್ಯಂತರ ಜನರು ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ.

ಜಾರ್ಖಂಡ್​ನ  ಬೊಕಾರೊದಲ್ಲಿ  ಕೋವಿಶೀಲ್ಡ್​ ಲಸಿಕೆ ಪಡೆದ ವಾರದ ನಂತರ ವ್ಯಕ್ತಿಒಬ್ಬನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದೆ.  ಐದು ವರ್ಷಗಳ ನಂತರ ಆತನಿಗೆ ಮಾತು ಪುನ: ಮರಳಿ ಬಂದಿದೆ. ಅಷ್ಟೇ ಅಲ್ಲ, ಆತನ ದೇಹದ ಕೆಲವೊಂದು ಮೂಳೆಗಳು ಕೆಲಸ ಮಾಡಲು ಶುರು ಮಾಡಿವೆ. ಕೆಲವೇ ವಾರಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು, ನರ್ಸ್​ ಜೊತೆ ಸೇರಿ 55 ವರ್ಷದ ದುಲರ್​ ಚಂದ್​ ಮುಂಡಾ ಅವರಿಗೆ ಕೋವಿಶೀಲ್ಡ್​​ ವ್ಯಾಕ್ಸಿನ್​ ನೀಡಿದ್ದರು. ವ್ಯಾಕ್ಸಿನ್ ಪಡೆದ  ಬಳಿಕ ಈ ಎಲ್ಲ ಬದಲಾವಣೆಗಳು ಕಂಡು ಬಂದಿವೆಯಂತೆ.

ಸಲ್ಗಡಿ ಗ್ರಾಮದ ದುಲರ್​ಚಂದ್ ಮುಂಡಾ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರು ಚಿಕಿತ್ಸೆಯ ನಂತರ ಗುಣಮುಖರಾಗಿದ್ದರೂ ದೈಹಿಕ ನ್ಯೂನತೆಗಳಿಂದಾಗಿ ಹಾಸಿಗೆ ಹಿಡಿದಿದ್ದರು. ದಿನದಿಂದ ದಿನಕ್ಕೆ ಅವರ ಧ್ವನಿಯೂ ಕ್ಷೀಣಿಸಿ  ಮಾತನಾಡಲು ತೊದಲುತ್ತಿದ್ದರು. ಜನವರಿ 4ರಂದು ಇವರಿಗೆ ಕೋವಿಡ್ ಮೊದಲ ಡೋಸ್ ಆಗಿ​ ಕೋವಿಶೀಲ್ಡ್ ಲಸಿಕೆ​​ ನೀಡಲಾಗಿದೆ. ಇದಾದ ಬಳಿಕ ದೇಹದಲ್ಲಿ ಅನೇಕ ರೀತಿಯ ಬದಲಾವಣೆ ಕಾಣಿಸಿಕೊಂಡಿದ್ದು, ಸ್ಪಷ್ಟವಾಗಿ ಮಾತನಾಡುವುದರ ಜೊತೆಗೆ ಆತನ ದೇಹದ ಕೆಲವೊಂದು ಮೂಳೆಗಳು  ಸಹಾ ಕೆಲಸ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಇಂದಿನ ರಾಶಿ ಭವಿಷ್ಯ-14-01-2022

Fri Jan 14 , 2022
ಮೇಷ ರಾಶಿಯ ದೈನಂದಿನ ಜಾತಕ – ಮೇಷ ರಾಶಿ ಇಂದು ಶುಕ್ರವಾರ, ಜನವರಿ 14, 2022 ಉತ್ತೇಜಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ನಿಮ್ಮನ್ನು ಆರಾಮವಾಗಿರಿ. ಹೊಸ ಹಣ ಸಂಪಾದನೆಯ ಅವಕಾಶಗಳು ಲಾಭದಾಯಕವಾಗುತ್ತವೆ. ಇಂದು ನೀವು ಪ್ರಯೋಜನ ಪಡೆಯುತ್ತೀರಿ – ಕುಟುಂಬದ ಸದಸ್ಯರು ನಿಮಗೆ ಸಕಾರಾತ್ಮಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ. ವೃಷಭ ರಾಶಿ ಇಂದಿನ ಜಾತಕ ಶುಕ್ರವಾರ, ಜನವರಿ 14, 2022 ನಿಮ್ಮ ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ನೀವು ಕೆಲವು ಕ್ರೀಡಾ ಚಟುವಟಿಕೆಗಳನ್ನು […]

Advertisement

Wordpress Social Share Plugin powered by Ultimatelysocial