ಲೋಕಸಭಾ ಸ್ಪೀಕರ್ ಬಿರ್ಲಾ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿ; ಮೂವರ ಬಂಧನ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆಯನ್ನು ಕ್ರಿಯೇಟ್ ಮಾಡಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಲೋಕಸಭಾ ಸ್ಪೀಕರ್ ಕಚೇರಿ ತಿಳಿಸಿದೆ.

ಕೆಲ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಪ್ರೊಫೈಲ್ ಫೋಟೊ ಹಾಕಿ, ನಕಲಿ ಖಾತೆ ಸೃಷ್ಟಿಸಿದ್ದು, ಅದರ ಮೂಲಕ ಸಂಸದರು ಮತ್ತು ಇತರ ಅಧಿಕಾರಿಗಳಿಗೆ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ದಯವಿಟ್ಟು ಈ ನಂಬರ್ ಗಳಿಂದ ಬಂದ ಕರೆ ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ, ಈ ಬಗ್ಗೆ ನಮ್ಮ ಕಚೇರಿಗೆ ಮಾಹಿತಿ ನೀಡಿ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಕ್ರಿಯೇಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.

ಕಳೆದ ತಿಂಗಳು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಎಂದು ಬಿಂಬಿಸಿಕೊಂಡು ವಿಐಪಿಗಳಿಗೆ ಸಂದೇಶ ಕಳುಹಿಸಿ ಹಣಕಾಸಿನ ನೆರವು ಕೇಳಿದ್ದ ಪ್ರಕರಣ ನಡೆದಿತ್ತು. ಈ ಬಗ್ಗೆ ವಿಷಯ ತಿಳಿದ ನಾಯ್ಡು ಕಚೇರಿ ಗೃಹ ಸಚಿವಾಲಯಕ್ಕೆ ದೂರು ನೀಡಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ 'ಕೋವಿಡ್ ರೂಪಾಂತರಿ ಪತ್ತೆ'ಗೆ ಮಹತ್ವದ ಕ್ರಮ:

Thu May 5 , 2022
ಬೆಂಗಳೂರು: ಕೊರೋನಾ ಬಳಿಕ, ಈಗ ಕೋವಿಡ್ ರೂಪಾಂತರಿ ( Covid19 variant ) ಆಂತಕ ನಗರದಲ್ಲಿ ಹೆಚ್ಚಾಗಿದೆ. ಈ ಕೊರೋನಾ ರೂಪಾಂತರಿ ಪತ್ತೆಗೆ ಮಹತ್ವ ಹೆಚ್ಚೆಯನ್ನು ಬಿಬಿಎಂಪಿ ( BBMP ) ಇರಿಸಿದ್ದು, ಪಾಲಿಕೆ ವ್ಯಾಪ್ತಿಯ 34 ಎಸ್ ಟಿ ಪಿ ಕೊಳಚೆ ನೀರನ್ನು ಪರೀಕ್ಷೆಸೋದಕ್ಕೆ ಇಂದಿನಿಂದ ಆರಂಭಿಸಲಿದೆ. ಈ ಬಗ್ಗೆ ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ ಚಂದ್ರ ನೇತೃತ್ವದಲ್ಲಿ ಜಲ ಮಂಡಳಿ, ಖಾಸಗೀ ಪ್ರಯೋಗಗಳ […]

Advertisement

Wordpress Social Share Plugin powered by Ultimatelysocial