ತಮಿಳುನಾಡಿಲ್ಲಿ ಓಮಿಕ್ರಾನ್ ರೂಪಾಂತರಿಯ ಉಪತಳಿ BA4 ಸೋಂಕು ಪತ್ತೆ..!

 

ನವದೆಹಲಿ, ಮೇ 21- ಕೋವಿಡ್ ಸೋಂಕುಗಳ ಏರಿಳಿತದ ನಡುವೆ ಓಮಿಕ್ರಾನ್ ರೂಪಾಂತರಿಯ ಉಪತಳಿ ಬಿಎ.4 ಸೋಂಕಿನ ಎರಡನೆ ಪ್ರಕರಣ ತಮಿಳುನಾಡಿಲ್ಲಿ ಪತ್ತೆಯಾಗಿದೆ. ಅತ್ಯಂತ ವೇಗವಾಗಿ ಹರಡುವ ಸಾಮಥ್ರ್ಯ ಹೊಂದಿರುವ ಹಾಗೂ ಲಸಿಕೆ ಪ್ರತಿರೋಧವನ್ನು ಮೆಟ್ಟಿ ಹಾನಿ ಮಾಡಬಹುದು ಎಂದು ವಿಶ್ಲೇಷಿಸಲಾಗುವ ಬಿಎ.4 ಉಪತಳಿ ಚೆನೈನಿಂದ 30 ಕಿಲೋ ಮೀಟರ್ ದೂರದಲ್ಲಿರುವ ಚೆಂಗ್ಲಪಟ್ಟು ಜಿಲ್ಲೆಯ ನವಲೂರಿನ ನಿವಾಸಿಯೊಬ್ಬರಲ್ಲಿ ಪತ್ತೆಯಾಗಿದೆ ಎಂದು ತಮಿಳುನಾಡಿನ ಆರೋಗ್ಯ ಸಚಿವ ಮಾ ಸುಬ್ರಮಣ್ಯ ತಿಳಿಸಿದ್ದಾರೆ.

ಮೇ 20ರಂದು ಹೈದರಾಬಾದ್‍ನಲ್ಲಿ ಮೊದಲ ಪ್ರಕರಣ ವರದಿಯಾಗಿತ್ತು. ನಂತರದಲ್ಲಿ ಚನೈನಲ್ಲಿ ಎರಡನೇ ಪ್ರಕರಣ ಪತ್ತೆಯಾಗಿದೆ. ಉಪ ತಳಿ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಸಂಪರ್ಕಿತರ ಪತ್ತೆ, ಚಿಕಿತ್ಸೆಗೆ ಕಾಳಜಿ ವಹಿಸಿದೆ. ಸೋಂಕಿತ ವ್ಯಕ್ತಿ ದಕ್ಷಿಣ ಆಫ್ರಿಕಾದಿಂದ ಹೈದರಾಬಾದ್ ಮೂಲಕ ಚನೈಗೆ ಪ್ರಯಾಣ ಮಾಡಿದ್ದ. ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗಾಗಿ ಮೇ 9ರಂದು ಮಾದರಿ ಸಂಗ್ರಹಿಸಲಾಗಿತ್ತು.

ಸೋಂಕಿತ ವ್ಯಕ್ತಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ. 2022ರ ಜನವರಿ 10ರಂದು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಬಿಎ.4 ಉಪತಳಿ ವಿದೇಶಗಳಲ್ಲಿ ಸಾಕಷ್ಟು ಹಾನಿ ಮಾಡಿದೆ. ಬಿಎ.4 ಮತ್ತು ಬಿಎ.5 ಉಪತಳಿಯ ಸೋಂಕುಗಳು ಗಂಭೀರ ಪರಿಣಾಮ ಉಂಟು ಮಾಡಲಿವೆ ಎಂಬ ಮುನ್ಸೂಚನೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

Sat May 21 , 2022
ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ‌ನಮ್ಮ ದೇವೇಗೌಡರು […]

Advertisement

Wordpress Social Share Plugin powered by Ultimatelysocial