ಹುಲ್ಲೂರು ಶ್ರೀನಿವಾಸ ಜೋಯಿಸರು | On the birth anniversary of great Historian and writer Hullur Sreenivasa Jois |

 
ಹುಲ್ಲೂರು ಶ್ರೀನಿವಾಸ ಜೋಯಿಸರು ನಮ್ಮ ನಾಡಿನ ಮಹಾನ್ ಸಂಶೋಧಕರಾಗಿ, ರಾಷ್ಟ್ರಪ್ರೇಮಿಗಳಾಗಿ, ಕರ್ನಾಟಕ ಏಕೀಕರಣಕ್ಕೆ ದುಡಿದವರಾಗಿ ಅಮರರಾಗಿದ್ದಾರೆ.
ಹುಲ್ಲೂರು ಶ್ರೀನಿವಾಸ ಜೋಯಿಸರು 1892ರ ಮಾರ್ಚ್ 29ರಂದು ಜನಿಸಿದರು. ಅವರ ಕುಟುಂಬದ ಹಿರಿಯರು ಸುಮಾರು ಮೂರು ನೂರು ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಬಳಿಯ ಅಂಬಳೆ ಗ್ರಾಮದಿಂದ ಚಿತ್ರದುರ್ಗ ಜಿಲ್ಲೆಯ ಹುಲ್ಲೂರಿಗೆ ವಲಸೆ ಬಂದವರು. ತಂದೆ ಪಾಂಡುರಂಗ ಜೋಯಿಸ್. ತಾಯಿ ಪಾರ್ವತಮ್ಮ. ಶ್ರೀನಿವಾಸ ಜೋಯಿಸರು ಪ್ರಾಥಮಿಕ ಶಿಕ್ಷಣ ಪಡೆದುದು ಚಿತ್ರದುರ್ಗದಲ್ಲಿ. ಮೆಟ್ರಿಕ್ ಪಾಸು ಮಾಡಿದ ನಂತರ ಅವರು ಕೆಲಕಾಲ ನೌಕರಿಯಲ್ಲಿದ್ದರು. ನಂತರದಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿಯನ್ನು ಆರಂಭಿಸಿದರು.
ಶ್ರೀನಿವಾಸ ಜೋಯಿಸರು ವೃತ್ತಿಯಲ್ಲಿ ವಕೀಲರಾಗಿದ್ದರೂ ಅಧ್ಯಯನಶೀಲರಾಗಿದ್ದು ಇತಿಹಾಸ ಸಂಶೋಧನೆಯಲ್ಲಿ ಪ್ರಾವೀಣ್ಯತೆ ಪಡೆದಿದ್ದರು. ಅವರು ಕರ್ನಾಟಕ ಏಕೀಕರಣ, ಸ್ವಾತಂತ್ರ್ಯ ಹೋರಾಟಗಳಲ್ಲೂ ಸಕ್ರಿಯರಾಗಿ ಪಾಲ್ಗೊಂಡಿದ್ದರು. ಚಿತ್ರದುರ್ಗದ ಇತಿಹಾಸದ ಜೊತೆಗೆ ಕರ್ನಾಟಕದ ಇತಿಹಾಸದ ಬಗ್ಗೆ ನೂರಾರು ಲೇಖನಗಳನ್ನು ಬರೆದಿದ್ದಾರೆ. ಐತಿಹಾಸಿಕ ಸ್ಥಳಗಳು, ವ್ಯಕ್ತಿಗಳು, ಘಟನೆಗೆ ಸಂಬಂಧಿಸಿದಂತೆ, ಭಾಷೆ, ಧರ್ಮ, ಸಂಸ್ಕೃತಿ, ಶೌರ್ಯ, ಸಾತ್ವಿಕತೆ, ಆದರ್ಶ, ಉದಾರತೆ ಮೊದಲಾದ ಗುಣಗಳನ್ನು ಚಿತ್ರಿಸುವ ಉದ್ದೇಶದಿಂದ ಅವರು ಇಪ್ಪತ್ತೈದು ವರ್ಷಗಳ ಕಾಲ ಸುಮಾರು ಮುನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದು ಕನ್ನಡಿಗರ ಕಣ್ಣು ತೆರೆಸಿದ್ದಾರೆ.
ಹುಲ್ಲೂರು ಶ್ರೀನಿವಾಸ ಜೋಯಿಸರು ರಚಿಸಿರುವ ಹತ್ತು ಪುಸ್ತಕಗಳಲ್ಲಿ ಗಂಡುಗಲಿ ಕುಮಾರರಾಮ, ಕನ್ನಡ ಕಲಿ ಸಿರುಮನ ಚರಿತೆ ಬಹುಮುಖ್ಯವಾದುವು. ‘ಚಿತ್ರದುರ್ಗದ ಬಖೈರು’ ಇವರು ಸಂಪಾದಿಸಿ ಪ್ರಕಟಿಸಿದ ಅಮೂಲ್ಯ ಐತಿಹಾಸಿಕ ದಾಖಲೆಯ ಕೃತಿ.
ತ.ರಾ.ಸು. ಮತ್ತು ಜಿ. ವರದರಾಜರಾಯರು ಕ್ರಮವಾಗಿ ಹಂಸಗೀತೆ ಮತ್ತು ಕುಮಾರರಾಮನ ಸಾಂಗತ್ಯ ಕೃತಿಗಳನ್ನು ಶ್ರೀನಿವಾಸ ಜೋಯಿಸರಿಗೆ ಅರ್ಪಿಸಿ ಗೌರವ ತೋರಿದ್ದಾರೆ.
ಹುಲ್ಲೂರು ಶ್ರೀನಿವಾಸ ಜೋಯಿಸರು ಪತ್ರಿಕಾ ವರದಿಗಾರರಾಗಿ, ಚಿತ್ರದುರ್ಗ ಜಿಲ್ಲೆಯ ಪತ್ರಿಕೋದ್ಯಮಿಗಳ ಸಂಘದ ಅಧ್ಯಕ್ಷರಾಗಿ, ಮೈಸೂರು ಸಂಸ್ಥಾನ ಪತ್ರಿಕೋದ್ಯೋಗಿಗಳ ಸಂಘ, ಮೈಸೂರು ಪ್ರಾದೇಶಿಕ, ಐತಿಹಾಸಿಕ ಪತ್ರಗಳ ಶೋಧನಾ ಸಮಿತಿ, ಯೋಜನಾ ಸಮಿತಿಗಳ ಸದಸ್ಯರಾಗಿ ಸಹಾ ಮಹತ್ವದ ಸೇವೆ ಸಲ್ಲಿಸಿದವರು.
ಶ್ರೀನಿವಾಸ ಜೋಯಿಸರಿಗೆ ‘ಇತಿಹಾಸ ಸಂಶೋಧನಾ ಪ್ರಸಕ್ತ’, ‘ಐತಿಹ್ಯ ವಿಮರ್ಶನ ವಿಚಕ್ಷಣ’ ಮುಂತಾದ ಬಿರುದು ಗೌರವಗಳು ಅರ್ಪಿತವಾಗಿದ್ದವು.
2000 ವರ್ಷದಷ್ಟು ದೀರ್ಘ ಇತಿಹಾಸ ದಾಖಲಿಸಿರುವ ಹುಲ್ಲೂರು ಶ್ರೀನಿವಾಸ ಜೋಯಿಸರು, ತಾವೇ ಸ್ಥಾಪಿಸಿದ ಚಿತ್ರದುರ್ಗದ ಪ್ರಾಚ್ಯವಸ್ತು ಸಂಗ್ರಹಾಲಯದ ಗೌರವ ಕ್ಯೂರೇಟರಾಗಿಯೂ ಸೇವೆ ಸಲ್ಲಿಸಿದ್ದರು.
ಈ ಮಹಾನ್ ಸಾಧಕರು 1956ರ ನವೆಂಬರ್ 8ರಂದು ಈ ಲೋಕವನ್ನಗಲಿದರು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಶವ ಹೆಗಡೆ ಕೊಳಗಿ | On the birth day of Yakshagana artiste Keshava Hegde Kolagi |

Tue Mar 29 , 2022
  ಶುದ್ಧ ಸಾಂಪ್ರದಾಯಿಕ ಮಟ್ಟಿನಲ್ಲಿ ಶುದ್ಧ ಭಾವದಲ್ಲಿ, ಪದ್ಯದ ಶಬ್ಧ, ಬಂಧಕ್ಕೆ ಚ್ಯುತಿ ಬಾರದಂತೆ ಪದ್ಯ ಹೇಳುವ ಭಾಗವತರಲ್ಲಿ ಒಬ್ಬರೆಂದು ಹೆಸರಾದವರು ಕೇಶವ ಹೆಗಡೆ ಕೊಳಗಿ ಅವರು.‍ ಅಡಿಕೆ ಬೇಸಾಯದ ಜೊತೆ ಯಕ್ಷ ಕೃಷಿ ಮಾಡುತ್ತಾ ಸಾಗಿರುವ ಒಬ್ಬ ವಿಶಿಷ್ಟ ಕಲಾವಿದರು. ಸರಳತೆ, ಮೃದುಭಾವದವರಾದ ಕೇಶವ ಹೆಗಡೆ ಅವರು ಶ್ರುತಿ ಪೆಟ್ಟಿಗೆ, ತಾಳಗಳ ಜೊತೆ ವೇದಿಕೆಗೆ ಬಂದರೆ ಪ್ರೇಕ್ಷಕರಿಂದ ಕರತಾಡನ. ಭೀಷ್ಮ ಪರ್ವದ ಶ್ರೀಮನೋಹರ ಸ್ವಾಮಿ ಫ‌ರಾಕು, ಶ್ರೀಕೃಷ್ಣ ಸಂಧಾನದ […]

Advertisement

Wordpress Social Share Plugin powered by Ultimatelysocial