ಅಸಾದುದ್ದೀನ್ ಓವೈಸಿ ಅವರು ಗೃಹ ಸಚಿವಾಲಯ ನೀಡಿದ ಝಡ್ ಕೆಟಗರಿ ಭದ್ರತೆಯನ್ನು ತಿರಸ್ಕರಿಸಿದ್ದಾರೆ.

ಲಕ್ನೋ ಫೆಬ್ರವರಿ 04: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್  ಎಐಎಂಐಎಂ  ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಗೃಹ ಸಚಿವಾಲಯ ನೀಡಿದ ಝಡ್ ಕೆಟಗರಿ ಭದ್ರತೆಯನ್ನು ತಿರಸ್ಕರಿಸಿದ್ದಾರೆ.ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿತ್ತು.ರಾಷ್ಟ್ರೀಯ ಹೆದ್ದಾರಿ 24ರಲ್ಲಿನ ಹಪೂರ್- ಗಾಜಿಯಾಬಾದ್ ಮಾರ್ಗದ ಛಿಜರ್ಸಿ ಟೋಲ್ ಪ್ಲಾಜಾ ಬಳಿ ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿರುವುದಾಗಿ ಓವೈಸಿ ಅವರು ಹೇಳಿಕೊಂಡಿದ್ದಾರೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಓವೈಸಿ, ಪೊಲೀಸರು ಶೂಟರ್‌ಗಳಲ್ಲಿ ಇಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಓವೈಸಿ ಒತ್ತಾಯಿಸಿದರು.ಘಟನೆ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಯ Z ಕೆಟಗರಿ ಭದ್ರತೆಯನ್ನು ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಈ ಭದ್ರತೆಯನ್ನು ಓವೈಸಿ ನಿರಾಕರಿಸಿದ್ದಾರೆ.ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಸಚಿನ್ ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣವಿದೆ. ತಾನು ಕಾನೂನು ಪದವಿ ಪಡೆದಿದ್ದೇನೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದು, ಪೊಲೀಸರು ಅದನ್ನು ಪರಿಶೀಲಿಸುತ್ತಿದ್ದಾರೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ, ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆತನ ಹೇಳಿಕೆಯನ್ನು ತನಿಖೆ ಮಾಡುತ್ತಿದ್ದಾರೆ.ಮತ್ತೋರ್ವ ಆರೋಪಿ ಸಹಾರನ್‌ಪುರದ ರೈತ ಶುಭಂ ಎಂದು ಗುರುತಿಸಲಾಗಿದೆ. ಈತ ಅಪರಾಧ ದಾಖಲೆ ಹೊಂದಿಲ್ಲ. ಪೋಲೀಸರ ಪ್ರಕಾರ, ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ. ಹೀಗಾಗಿ ಅವರ ಮೇಲೆ ದಾಳಿ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.ಇವರಿಂದ ಇತ್ತೀಚೆಗೆ ಖರೀದಿಸಿದ್ದ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಬಂದೂಕು ಖರೀದಿಸಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಟೋಲ್ ಪ್ಲಾಜಾದಿಂದ ಓವೈಸಿ ಅವರು ಟ್ವೀಟ್ ಮಾಡಿದ ಫೋಟೋಗಳಲ್ಲಿ ಅವರ ಬಿಳಿ SUV ಕಾರಿನ ಮೇಲೆ ಬುಲೆಟ್ ದಾಳಿಯಿಂದಾದ ಹಾನಿಯನ್ನು ಕಾಣಬಹುದು. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ. ಹೀಗಾಗಿ ಸಂಸದರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

KIA:ಕಿಯಾ ಕ್ಯಾರೆನ್ಸ್ ಇಂಡಿಯಾ ಬಿಡುಗಡೆ ದಿನಾಂಕ ಬಹಿರಂಗಗೊಂಡಿದೆ;

Sat Feb 5 , 2022
ಮೂರು-ಸಾಲು MPV, ಕ್ಯಾರೆನ್ಸ್ ಅನ್ನು ಡಿಸೆಂಬರ್ 2021 ರಲ್ಲಿ ಭಾರತದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಕಳೆದ ತಿಂಗಳು ಆರ್ಡರ್‌ಗಳಿಗೆ ಲಭ್ಯವಾಯಿತು. ಮುಂಬರುವ Kia ಮೂರು-ಸಾಲಿನ ವಾಹನವನ್ನು ಬುಕ್ ಮಾಡಲು ಆಸಕ್ತಿ ಹೊಂದಿರುವವರು ಕಾರ್ ತಯಾರಕರ ಇಂಡಿಯಾ ವೆಬ್‌ಸೈಟ್ ಮೂಲಕ ಅಥವಾ Kia ಡೀಲರ್‌ಶಿಪ್‌ಗೆ ಭೇಟಿ ನೀಡುವ ಮೂಲಕ ಮಾಡಬಹುದು. ಪ್ರೀಮಿಯಂ, ಪ್ರೆಸ್ಟೀಜ್, ಪ್ರೆಸ್ಟೀಜ್ ಪ್ಲಸ್, ಐಷಾರಾಮಿ ಮತ್ತು ಐಷಾರಾಮಿ ಪ್ಲಸ್ ಎಂಬ ಐದು ರೂಪಾಂತರಗಳಲ್ಲಿ ಕ್ಯಾರೆನ್ಸ್ ಲಭ್ಯವಿರುತ್ತದೆ – ಆದರೆ ಐಷಾರಾಮಿ […]

Advertisement

Wordpress Social Share Plugin powered by Ultimatelysocial