ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು,

ಉಡುಪಿ: ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಹಾಗೂ ರೇಷಂ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ.

ಉಡುಪಿಯ ಮಹಿಳಾ ಸರ್ಕಾರಿ ಕಾಲೇಜಿನ 6 ಹಿಜಾಬ್ ಹೋರಾಟಗಾರ್ತಿಯರ ಪೈಕಿ ಇಂದು ಕಾಮರ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿನಿಯರಾದ ಆಲಿಯಾ ಹಾಗೂ ರೇಷಂ ಪರೀಕ್ಷೆ ಬರೆಯಲು ಮುಂದಾಗಿದ್ದು, ಇದೀಗ ಕೊನೆ ಘಳಿಗೆಯಲ್ಲಿ ಹಾಲ್ ಟಿಕೆಟ್ ಪಡೆದುಕೊಂಡಿದ್ದಾರೆ.

ಹಿಜಾಬ್ ಧರಿಸಿಯೇ ಪರೀಕ್ಷಾ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಉಡುಪಿ ತಹಶೀಲ್ದಾರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದ್ದಾರೆ. ಒಂದೆಡೆ ಪರೀಕ್ಷೆ ಆರಂಭವಾಗಿದ್ದು, ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶಕೊಡುವಂತೆ ವಾದಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಯಂ ಸರ್ವೇ ಮಾಡಿಕೊಳ್ಳಲು ಸರ್ಕಾರ !

Fri Apr 22 , 2022
ಬೆಂಗಳೂರು,ಏ.22-ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಯಂ ಸರ್ವೇ ಮಾಡಿಕೊಳ್ಳಲು ಸರ್ಕಾರ ಅವಕಾಶ ಮಾಡಿ ಮಾಡಿಕೊಟ್ಟಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಹೇಳಿದ್ದಾರೆ. ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ನಾಗರಿಕರು ಈ ಕೆಳಕಂಡ ಕಾರಣಗಳಿಗಾಗಿ ಭೂಮಾಪನ ಇಲಾಖೆಗೆ […]

Advertisement

Wordpress Social Share Plugin powered by Ultimatelysocial