ಲಡಾಖ್ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಚೀನಾದ ವಿರುದ್ಧ ಅತ್ಯಂತ ಗಟ್ಟಿಯ ನಿಲುವು ತೆಳೆದರು ಇದು ಹೆಮ್ಮೆಯ ಸಂಗತಿ ಎಂದು ಅಮೆರಿಕದ ಸಂಸತ್ ಸದಸ್ಯ ಜಾನ್ ಕೆನಡಿ ಹೇಳಿದ್ದಾರೆ.ಲಡಾಖ್ನಲ್ಲಿ ಬಿಕ್ಕಟ್ಟು ಉಂಟಾಗಿ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾದ ಯೋಧರ ನಡುವೆ ಜೂ.೧೫ರಂದು ರಕ್ತಸಿಕ್ತ ಘರ್ಷಣೆ ನಡೆದು ಭಾರತದ ೨೦ ಯೋಧರು ಹುತಾತ್ಮರಾದ ಹಲವು ದಿನಗಳ ಬಳಿಕ ಕೆನಡಿ ಈ ಹೇಳಿಕೆ ನೀಡಿದ್ದಾರೆ. ಜತೆಗೆ ಚೀನಾ ವಿರುದ್ಧದ […]

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಿವ್ಯಾ ಸಾರಾ ಥಾಮಸ್ ಅವರು ಅಧಿಕಾರ ಸ್ವೀಕರಿಸಿದರು. ದಿವ್ಯಾ ಅವರು ಜಿಲ್ಲೆಯ ಮೊದಲ ಮಹಿಳಾ ಎಸ್ಪಿಯಾಗಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಚ್.ಡಿ. ಆನಂದಕುಮಾರ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಇದುವರೆಗೂ ಮೂವ್‌ಮೆಂಟ್ ಆರ್ಡರ್ ನೀಡಿರಲಿಲ್ಲ. ಪೊಲೀಸ್ ಮಹಾ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ದಿವ್ಯಾ ಸಾರಾ ಥಾಮಸ್ ಹಾಗೂ ಆನಂದ್‌ಕುಮಾರ್ ಅವರಿಗೆ ಸೂಚಿಸಿರುವ ಸ್ಥಳದಲ್ಲಿ ಅಧಿಕಾರ ವಹಿಸಿಕೊಳ್ಳುವಂತೆ ಮೂವ್‌ಮೆಂಟ್ ಆರ್ಡರ್ ಹೊರಡಿಸಿದ್ದರು.ಹಾಗಾಗಿ […]

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು ಎಂದು ಹೇಳಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್‌ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ […]

ಬಿಹಾರದ ಪಶ್ಚಿಮದ ಚಂಪಾರಣ್ ಜಿಲ್ಲೆಯಲ್ಲಿ ಪೋಲಿಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು, ೩ ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ್ದ ಸಶಸ್ತ್ರ ಸೀಮಾ ಬಲ ಹಾಗೂ ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. […]

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ  ಜಮೀನು ಸರ್ವೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಮತ್ತು ತಹಶೀಲ್ದಾರರಾದ ಚಂದ್ರಮೌಳೇಶ್ವರ ನಡುವೆ ಮಾತಿಗೆ ಚಕಮಕಿ ನಡೆದು ದುರ್ಷ್ಕಮಿ ತಹಶೀಲ್ದಾರರಿಗೆ ಚಾಕುವಿನಿಂದ ಇರಿದಿದ್ದನು. ತ್ರೀವ ಗಂಭೀರ ಸ್ಥಿತಿಯಲ್ಲಿದ್ದ ತಹಶಿಲ್ದಾರರನ್ನು ಹೆಚ್ಚಿನ ಚಿಕೆತ್ಸೆಗಾಗಿ ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಈ ಘಟನೆಯನ್ನು ಸ್ಥಳೀಯ ಶಾಸಕ ಎಸ್. ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ […]

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೋಕಿನ ಕವಿತಾಳ್ ಪಟ್ಟಣದಲ್ಲಿ ಟಾಸ್ಕ್ ಫೋರ್ಸ್ ಬ್ಲೋಕ್ ಲೇವಲ್ ಕಮಿಟಿ ನಿರ್ಮಾಣ ಮಾಡಲು ಪೂರ್ವ ಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾದ ಸ್ವಾತಿ ದರಗಿ, ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯ. ಸಮುದಾಯದ ಎಲ್ಲಾ ಜನರು ಸಹಕಾರ ಕೂಡ ಅಷ್ಟೇ ಅಗತ್ಯವಾಗಿರುತ್ತದೆ ಎಂದು ಹೇಳಿದರು.     ಇದೇ […]

ಕೊರೋನಾ ಭೀತಿಯಿಂದಾಗಿ ಈ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಆದರೆ, ಅಕ್ಟೋಬರ್‌ 01 ರಿಂದ ಕಾಲೇಜುಗಳು ತೆರೆಯಲಿವೆ, ಎಂದಿನಂತೆ ತರಗತಿಗಳು ಪ್ರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೊರೊನಾ ಶುರುವಾದ ನಂತರ ಆನ್‌ಲೈನ್‌ ತರಗತಿ ಕುರಿತು ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಕೆಲವರು ಆನ್‌ಲೈನ್ ತರಗತಿಗಳು ಬೇಕು ಎಂದರೆ, ಕೆಲವರು ಆನ್‌ಲೈನ್‌ ತರಗತಿಯನ್ನು ವಿರೋಧಪಡಿಸುತ್ತಿದ್ದಾರೆ. ಆದರೆ, ಈ ಎಲ್ಲಾ ಅನುಮಾನಗಳಿಗೆ ರಾಜ್ಯ ಸರ್ಕಾರ […]

ಸರ್ವೇ ನಡೆಸಲು ಹೋದ ತಹಶಿಲ್ದಾರಗೆ ಚಾಕು ಇರಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ನಡೆದಿದೆ.ಬಂಗಾರಪೇಟೆಯ ಚಂದ್ರಮೌಳೇಶ್ವರ ಚಾಕು ಇರಿತಕ್ಕೆ ಒಳಗಾದ ತಹಶಿಲ್ದಾರ ಎಂದು ತಿಳಿದು ಬಂದಿದೆ. ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಎಂಬ ದುರ್ಷ್ಕಮಿಯಿಂದ ಹಲ್ಲೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.     ಈ ಸಂಬಂಧ ಕಾಮಸಮುದ್ರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನತೆ ತತ್ತರಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಕುರಿತು ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ಉಳಿದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಶುರುವಾಗಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. […]

ಪ್ರತಿ ತಿಂಗಳ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ ಅಗತ್ಯ ರಕ್ಷಣಾ ಸಾಧನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು. ಚಪ್ಪಾಳೆ ತಟ್ಡುವ ಮೂಲಕ ಗೌರವ ಸಲ್ಲಿಸುತ್ತಿರುವುದು ಸಂತಸ ತಂದಿದೆ. ಆದರೆ, ಜೀವ ಪಣಕ್ಕಿಟ್ಡು ಕೆಲಸ ಮಾಡುತ್ತಿರುವ ನಮಗೆ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ […]

Advertisement

Wordpress Social Share Plugin powered by Ultimatelysocial