ಅರಸೀಕೆರೆ ತಾಲೂಕಿಗೆ ಸೇರಿದೆ ಗೇರ್‌ಮರ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಮುಂದೆ ಕುಡಿದ ಮತ್ತಲ್ಲಿ ಇಬ್ಬರು ಜಗಳ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಕುಡಿದ ಮತ್ತಲ್ಲಿ ಮದ್ಯ ಸೇವಿಸಿದ ವ್ಯಕ್ತಿ ಹಾಗೂ ಟಿಟಿ ಗಾಡಿಯ ಮಾಲೀಕನ ಮದ್ಯ ಮಾರಾಮಾರಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಇಂತಹ ಊರುಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ಸೂಕ್ತ ಭದ್ರತೆಯನ್ನು ನೀಡಬೇಕು. ಈಗಿರುವ ಪೊಲೀಸರು ವಿಜಿಟಿಂಗ್ ನೀಡಲು ಮಾತ್ರ ಬರುತ್ತಾರೆ ಎಂದು […]

ಬಾಗೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಕುಟುಂಬಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಬಾಗೂರು ಗ್ರಾಮದ ಮಹಿಳೆಯರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ದೂರು ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಮದ್ಯ ಮಾರಾಟ ನಿಂತಿತ್ತು. ಆದರೆ ಕಳೆದ ಆರು ತಿಂಗಳಿAದ ಮತ್ತೆ ಅಕ್ರಮವಾಗಿ ಮದ್ಯ ಮಾರಾಟ ಶುರುವಾಗಿದೆ. ಇದರಿಂದ ನಮ್ಮ ಗಂಡAದಿರು […]

ಕೇಂದ್ರ ಸರಕಾರದ ಮರ‍್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸರಕಾರದ ಮರ‍್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.ಸಭೆಯಲ್ಲಿ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. […]

ನವದೆಹಲಿ: ಸುಪ್ರೀಂ ಕೋರ್ಟ್ ವಲಸೆ ಕಾರ್ಮಿಕರ ಕುರಿತಂತೆ ಮಹತ್ವದ ಸೂಚನೆ ನೀಡಿದೆ. ವಲಸೆ ಕಾರ್ಮಿಕರನ್ನು ೧೫ ದಿನದೊಳಗೆ ಅವರ ಊರಿಗೆ ವಾಪಸ್ ಕಳುಹಿಸಲು ಎಲ್ಲ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ತಮ್ಮ ತವರು ರಾಜ್ಯಗಳಿಗೆ ಹಿಂದಿರುಗುವ ಕಾರ್ಮಿಕರಿಗೆ ಅಲ್ಲಿಯೇ ಉದ್ಯೋಗದ ಅವಕಾಶ ಕಲ್ಪಿಸಲು ಅಲ್ಲಿನ ಸರ್ಕಾರಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದೆ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ […]

ವೈಟ್‍ಫೀಲ್ಡ್‍ನ ಶ್ರೀರಾಮ ದೇವಸ್ಥಾನದ ರಸ್ತೆಯಲ್ಲಿರುವ ರೆಡ್‍ಕೋಟ್ ಶಾಪ್ ನ ಮಾಲಿಕ ಅವಿನಾಶ್ ಎಂಬಾತ ಪ್ರತಿಷ್ಠಿತ ಕಂಪೆನಿಗಳಾದ ಝರಾ, ಬರ್ಬೇರಿ, ನೈಕ್, ಯುಎಸ್ ಪೋಲೊ, ಅಡಿದಾಸ್ ಹಾಗೂ ಜಿಯುಸಿಸಿಐ ಮತ್ತಿತರ ಸಂಸ್ಥೆಗಳ ನಕಲಿ ಬಟ್ಟೆಗಳನ್ನು ದಾಸ್ತಾನು ಮಾಡಿಕೊಂಡು ಕಾಪಿರೈಟ್ಸ್ ಉಲ್ಲಂಘಿಸಿ ಅಸಲಿ ಬಟ್ಟೆಗಳೆಂದು ಮಾರಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 25 ಲಕ್ಷ […]

ಮದುರೈ: ಕರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ನಿರ್ಗತಿಕರ ನೆರವಿಗೆ ನಿಂತ ತಮಿಳುನಾಡಿನ ಮಧುರೈ ಮೂಲದ ೧೩ ವರ್ಷದ ಬಾಲಕಿಯನ್ನು ವಿಶ್ವಸಂಸ್ಥೆ ಮೆಚ್ಚಿ, ಗೌರವಿಸಿದೆ. ಬಾಲಕಿ ನೇತ್ರಾಳನ್ನು ಅಭಿವೃದ್ಧಿ ಮತ್ತು ಶಾಂತಿಗಾಗಿ ಇರುವ ವಿಶ್ವಸಂಸ್ಥೆ ಅಸೋಸಿಯೇಷನ್ ((UNADP) ನ ಬಡವರ ಸದ್ಭಾವನಾ ರಾಯಭಾರಿಯನ್ನಾಗಿ ನೇಮಿಸಿದೆ. ನೇತ್ರಾಳ ತಂದೆ ಸಲೂನ್ ಶಾಪ್ ಮಾಲೀಕನಾಗಿದ್ದು, ತಮ್ಮ ಮಗಳ ಶಿಕ್ಷಣಕ್ಕಾಗಿ ೫ ಲಕ್ಷ ರೂ. ಹಣವನ್ನು ಕೂಡಿಟ್ಟಿದ್ದರು. ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಈ ಹಣವನ್ನ […]

ಮಿಜೋರಾಂ, ಮಣಿಪುರ ಮತ್ತು ಜಾರ್ಖಂಡ್ ರಾಜ್ಯಪಾಲರು ಹಾಗೂ ದೆಹಲಿ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದ ವೇದ್‍ಮಾರ್ವಾ ರವರು ಮನೆಯಲ್ಲಿ ಕಾಲುಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮೂರು ವಾರಗಳ ಹಿಂದೆ ಉತ್ತರ ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೋದಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ             […]

ಲಾಕ್ ಡೌನ್ ನಿಂದ ತವರಿಗೆ ತೆರಳಲು ಕಷ್ಟಪಡುತ್ತಿರುವ ಕೂಲಿ ಕಾರ್ಮಿಕರಿಗೆ ಮತ್ತೆ ನೆರವಾದ ನಟ ಸೋನು ಸೂದ್. ಕೇರಳದಿಂದ ಒಡಿಶಾಗೆ 167 ಕಾರ್ಮಿಕರನ್ನು ಕಳಿಸಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿದ್ದರು. ಇದೀಗ ಮತ್ತೊಮ್ಮೆ ಮುಂಬೈನಿಂದ ಉತ್ತರಾಖಂಡ್ ನ ಡೆಹ್ರಾಡೂನ್ ಗೆ 173 ವಲಸೆ ಕಾರ್ಮಿಕರನ್ನು ಕಳಿಸಲು ಏರ್ ಏಷ್ಯಾ ವಿಮಾನ ಬುಕ್ ಮಾಡುವ ಮೂಲಕ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ನಿನ್ನೆ ಮಧ್ಯಾಹ್ನ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ […]

ನವದೆಹಲಿ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ತಾಯಿ ಚಂದ್ರಕಾಂತ ಗೋಯಲ್ ಇಂದು ಸಾವನ್ನಪ್ಪಿದ್ದು, ಈ ಕುರಿತು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಸಚಿವ ಗೋಯಲ್, ನನಗೆ ಇಷ್ಟು ಪ್ರೀತಿ, ವಾತ್ಸಲ್ಯದ ದಾರಿ ತೋರಿಸಿದ ತಾಯಿ ಇಂದು ಮುಂಜಾನೆ ನಿಧನರಾಗಿದ್ದಾರೆ. ತಾಯಿ ತೋರಿದ ಪ್ರೀತಿ, ವಾತ್ಸಲ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರು ತಮ್ಮ ಇಡೀ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಇತರರ ಸೇವೆ ಸಲ್ಲಿಸುವ […]

ಭಾರತದಲ್ಲಿ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿರುವ ಆಪ್ ಗಳಲ್ಲಿ ಟಿಕ್ ಟಾಕ್ ಮುಂಚೂಣಿಯಲ್ಲಿದೆ. ಚೀನಾ ಮೂಲದ ಈ ಆಪ್ ಅನ್ನು ರಿಮೂವ್ ಮಾಡುವ ಅಭಿಯಾನ ಕೂಡ ನಡೆಸಲಾಗಿತ್ತು. ಇದೀಗ ಟಿಕ್ ಟಾಕ್ ಚೀನಾ ವಿರುದ್ಧದ ಪೋಸ್ಟ್ ಗಳಿಗೆ ಕೊಕ್ ನೀಡುತ್ತಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಖ್ಯಾತ ಕಮೆಡಿಯನ್ ಸಲೋನಿ ಗೌರ್ ಟಿಕ್ ಟಾಕ್ ನಲ್ಲಿ ಹಾಕಿದ್ದ ಪೋಸ್ಟ್ ಒಂದನ್ನು ತೆಗೆದು ಹಾಕಲಾಗಿದೆ. ಈ ಕುರಿತು ಸಾಮಾಜಿಕ […]

Advertisement

Wordpress Social Share Plugin powered by Ultimatelysocial