ಬೆಟ್ಟದಹಳ್ಳಿ ನಿವಾಸಿ ಶೋಹೆಬ್(26) ನನ್ನು ಸಾಯಿನಗರದಲ್ಲಿರುವ ಸಂಭ್ರಮ ಕಾಲೇಜು ಸಮೀಪದ ಖಾಲಿ ನಿವೇಶನಕ್ಕೆ ಎಳೆದೊಯ್ದು ದುಷ್ಕರ್ಮಿಗಳು ಮರಗೆಲಸ ಮಾಡುವ ಯುವಕನಿಗೆ ಚಾಕುವಿನಿಂದ ಹೊಟ್ಟೆ, ಎದೆ ಮತ್ತಿತರ ಭಾಗಗಳಿಗೆ ಇರಿದು ದುರಂತವಾಗಿ ಕೊಲೆ ಮಾಡಿ ಪರಾರಿಯಾಗಿರುವ ಬೆಳಕಿಗೆ ಬಂದಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದರು. ನಂತರ ಸ್ಥಳಕ್ಕೆ ಬಂದ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಶೋಹೆಬ್ ಕೊಲೆಗೆ ನಿಖರವಾದ ಕಾರಣ […]

ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಬಂದಿದ್ದ ಒಬ್ಬರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.

ಉಭಯ ದೇಶಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದರು. ಈ ವಿಷಯಕ್ಕೆ ಸಂಭಂದಿಸಿದಂತೆ ಭಾರತ- ಚೀನ ನಡುವಿನ ಲಡಾಖ್‌ ಗಡಿಯ ಬಿಕ್ಕಟ್ಟು ಶಮನಕ್ಕೆ ರಾಜತಾಂತ್ರಿಕ, ಮಿಲಿಟರಿ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಭಾರತದ ಈ ವಿಚಾರದಲ್ಲಿ ಬೇರಾವುದೇ ದೇಶ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಹೇಳಿದ್ದಾರೆ. ಹಾಗೆಯೇ ನಾನು ಅಮೆರಿಕ ಅಧ್ಯಕ್ಷರ ಹೇಳಿಕೆಗೆ […]

ಚಲಸ್ಸೇರಿ ನಿವಾಸಿ ಸಾದಿಕ್ ಅವರ ಆಪ್ತ ಸಂಬಂಧಿಕರಿಗೆ ಕರೊನಾ ವೈರಸ್​ ಪಾಸಿಟಿವ್ ಇದ್ದ ಕಾರಣ, ಸಾದಿಕ್ ಮತ್ತು ಆತನ ಪತ್ನಿಗೆ ಕ್ವಾರಂಟೈನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಇದರ ಹಿನ್ನೆಲೆಯಲ್ಲಿ ತಮ್ಮ 11 ತಿಂಗಳ ಮಗು ಮೊಹಮ್ಮದ್ ಇಸ್​ಖಾನ್ ನನ್ನು ಸಮೀಪದ ಸಂಬಂಧಿಕರ ಬಳಿ ಬಿಟ್ಟಿದ್ದರು. ತಡರಾತ್ರಿ ಶನಿವಾರ  ಬಾತ್​ರೂಮ್​ನಲ್ಲಿ ತುಂಬಿಟ್ಟಿದ್ದ ನೀರಿನ ಬಕೆಟ್ ಒಳಗೆ ಮಗು ಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸಮೀಪದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದರೂ […]

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ನಡೆಸಿದ ಸಂದರ್ಶದನಲ್ಲಿ ಕೊರೊನಾ ಬಗ್ಗೆ ಮಾತನಾಡಿಅವರು, ಲಾಕ್ ಡೌನ್ ಸಡಿಲಿಕೆಯ ಹಿನ್ನಲೆಯಲ್ಲಿ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಮಹಾಮಾರಿ ಪ್ರತಿದಿನಹೆಚ್ಚುತ್ತಲೇ ಹೋಗುತ್ತಿದೆ, ಕೊರೋನಾ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ನಿಯಮ ಗಳನ್ನು ಜಾರಿಗೊಳಿಸುತ್ತಿದೆ . ಆದರೆ ಹೊರಗಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡುವುದೊಂದೇ ನಮ್ಮ ಬಳಿಯಿರುವ ಆಯ್ಕೆಯೆಂದು ಹೇಳಿದ್ದಾರೆ.

ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, […]

ಕೊರೊನಾ ವೈರಸ್ ಮಹಾಮಾರಿ ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ.ಹಾಗೂ ಪೊಲೀಸರಿಗೆ ಸೋಂಕು ತಗುಲಿತ್ತಿರುವ ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 91 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಪೊಲೀಸರ ಒಟ್ಟಾರೆ ಸೋಂಕಿತರ ಸಂಖ್ಯೆಯು 2,416ಕ್ಕೆ ಏರಿಕೆಯಾಗಿದೆ. 26 ಜನ ಪೊಲೀಸರು ಸೋಂಕಿನಿಂದ ಮೃತಪಟ್ಟಿದ್ದಾರೆ.ಮಹಾರಾಷ್ಟ್ರದಲ್ಲಿ ಒಟ್ಟು 65,168 ಪ್ರಕರಣಗಳು ಪತ್ತೆಯಾಗಿದೆ.ಮಹಾರಾಷ್ಟ್ರದಲ್ಲಿ ಒಟ್ಟು 2,197 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ. 28,081 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.ಇನ್ನೂ ಕೆಲವರು […]

ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿ ಇದುವರೆಗೂ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,380 ಮಂದಿಯಲ್ಲಿ ಸೋಂಕು ತಗುಲಿರುವುದು ದೃಡಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 193 ಮಂದಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಸೋಂಕು ತಗುಲಿ ಸಾವ್ನಪ್ಪಿದ್ದವರ ಸಂಖ್ಯೆಯು 5,164ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಇದರಲ್ಲಿ 86,984 ಸೋಂಕಿತರು ಗುಣಮುಖರಾಗಿದ್ದು, […]

ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್’ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡುಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೇಂಡರ್ ನ್ನು ಬಿಡುಗಡೆ ಮಾಡಲಾಗುತ್ತದೆ. ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.ಇನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುವುದು, ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ […]

ಉತ್ತರ ಪ್ರದೇಶದ ಹಲವೆಡೆ ಭಾರಿ ಗುಡುಗು ಮಳೆಯಾಗಿದ್ದ, ಪರಿಣಾಮ ಸಿಡಿಲು ಬಡಿದು ವಿಶ್ವ ವಿಖ್ಯಾತವಾದ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಗೆ ಹಾನಿಯಾದ ಘಟನೆ ನಡೆದಿದೆ.. ಐತಿಹಾಸಿಕ ತಾಜ್‌ ಮಹಲ್‌ನ ಅಮೃತ ಶಿಲೆಯ ಅಡ್ಡಕಂಬಿಗಳಿಗೆ ಹಾನಿಯಾಗಿದೆ. ಭಾರಿ ಮಳೆಗೆ ಆಗ್ರಾದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವಾರು ಪ್ರಾಣಿಗಳು ಮೃತಪಟ್ಟಿವೆ. ಗುಡುಗು ಸಹಿತ ಭಾರೀ ಮಳೆಗೆ ತಾಜ್ ಮಹಲ್ ನ ಒಂದು ಬಾಗಿಲು ಹಾನಿಗೀಡಾಗಿದ್ದು ಆವರಣದಲ್ಲಿ ಸುತ್ತಲು ಕೆಲ […]

Advertisement

Wordpress Social Share Plugin powered by Ultimatelysocial