ನವದೆಹಲಿ: ಕೊವಿಡ್-೧೯ ಟ್ರ‍್ಯಾಕ್ ಮಾಡಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಆರೋಗ್ಯ ಸೇತು ಆ್ಯಪ್‌ನಿಂದ ಸಾರ್ವಜನಿಕರ ಖಾಸಗಿ ಮಾಹಿತಿಗಳು ಸೋರಿಕೆ ಆಗುತ್ತದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ್ದ ಬಿಜೆಪಿ, ಯಾರೂ ಹೆದರಬೇಕಿಲ್ಲ. ಆರೋಗ್ಯ ಸೇತು ಆ್ಯಪ್‌ನಲ್ಲಿ ಎಲ್ಲರ ಮಾಹಿತಿಗಳೂ ಭದ್ರವಾಗಿರುತ್ತವೆ. ಸೋರಿಕೆಯಾಗುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ನಿನ್ನೆ ರಾತ್ರಿ ಫ್ರೆಂಚ್ ಹ್ಯಾಕರ್ ರಾಬರ್ಟ್ ಬ್ಯಾಪ್ಟಿಸ್ಟ್ ಎಂಬುವರು ಟ್ವೀಟ್ ಮಾಡುವ […]

ವಾಷಿಂಗ್ಟನ್: ಭಾರತದಲ್ಲಿ ಕಡಿಮೆ ಆದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಶಾಲೆಗಳಿಗೆ ನಿರ್ಣಾಯಕ ಹಣಕಾಸು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸಲು ಆರಂಭಿಕ ಹಂತದಲ್ಲಿರುವ ಭಾರತದ ಶಿಕ್ಷಣ ಸಂಸ್ಥೆಗಳಿಗೆ ೧೫ ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಅಮೆರಿಕ ಹಣಕಾಸು ಸಂಸ್ಥೆ ಒಪ್ಪಿದೆ. ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದ ದೀರ್ಘಕಾಲೀನ ಬಂಡವಾಳದ ಅಗತ್ಯವನ್ನು ಪೂರೈಸುವ ಮೂಲಕ ಹೆಚ್ಚಿನ ಶಾಲೆಗಳನ್ನು ತಲುಪಲು ಬೆಂಗಳೂರು ಮೂಲದ ‘ವರ್ತನಾ’ ಹಣಕಾಸು ಸಂಸ್ಥೆಗೆ ಹಣಕಾಸಿನ ನೆರವು ನೀಡುತ್ತದೆ ಎಂದು […]

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ಗ್ರಾಮ ಪಮಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಬೇಕೊ ಅಥವಾ ಆಡಳಿತ ಸಮಿತಿ ರಚಿಸಬೇಕೋ ಎಂಬ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ […]

ರಾಜ್ಯದ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಸಚಿವ ಬಿ.ಸಿ. ಪಾಟೀಲ್  ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗಳನ್ನು ತಡೆಗಟ್ಟುವ ದಿಶೆಯಲ್ಲಿ ರೈತ.ರಿಗೆ ಆನುಕೂಲಕರವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗಿದೆ. ರಾಜ್ಯ ಸರ್ಕಾರ ಎಲ್ಲ ಹಂತಗಳಲ್ಲಿಯೂ ಕೃಷಿಕರ ಜೊತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳಂತೆ ಐದು ಕಂತುಗಳ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ. […]

ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು  ಸಚಿವ ಆರ್. ಅಶೋಕ್  ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ  ಅವರು , ಭೂಸುಧಾರಣಾ ಕಾಯ್ದೆ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹ ರೈತರಿಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗುತ್ತದೆ. ಫಾರಂ ನಂಬರ್ 50, 53 […]

ಲಾಕ್‌ಡೌನ್ ಹಿನ್ನಲೆ ಮುಂದೂಡಿದ್ದ ಸಿಬಿಎಸ್‌ಇ ೧೦ನೇ ತರಗತಿಯ ಬಾಕಿ ವಿಷಯಗಳ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಈಶಾನ್ಯ ದೆಹಲಿ ಹೊರತುಪಡಿಸಿ ಇತರೆ ಯಾವುದೇ ರಾಜ್ಯದಲ್ಲಿ ಸಿಬಿಎಸ್‌ಇ ೧೦ನೇ ತರಗತಿಯ ಉಳಿದ ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿವಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಈಗಾಗಲೇ ಸಿಬಿಎಸ್‌ಇ ೧೦ನೇ ತರಗತಿ ಪ್ರಮುಖ ಪತ್ರಿಕೆಗಳ ಪರೀಕ್ಷೆ ಪೂರ್ಣಗೊಂಡಿದೆ. ಬಾಕಿಯಿರುವ ಒಂದೆರಡು ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ. ಆದ್ರೆ […]

ಸ್ವಂತ ಊರುಗಳಿಗೆ ಹೋಗುವ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉದ್ಯೋಗ ಕಾರ್ಡ್ ಒದಗಿಸಿ ಕೆಲಸ ನೀಡಬೇಕು ಎಂದು ಮಾಜಿ ಸಿಎಂ, ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು, ಇನ್ನಾದರೂ ರಾಜ್ಯ ಸರ್ಕಾರ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ, ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಹೋಗುವವರು, ಬರುವವರಿಗೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಿಸಿ, ಅಗತ್ಯವೆನಿಸಿದರೆ ಕ್ವಾರಂಟೈನ್‍ಗೆ ಒಳಪಡಿಸಿ. ಸ್ವಂತ ಊರುಗಳಿಗೆ […]

ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡಲೇ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ  ಅವರು, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು. ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ […]

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ. ರಾಜ್ಯದಲ್ಲಿ ಇಂದು ಮತ್ತೆ 19 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 692 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಪೈಕಿ ಬಾಗಲಕೋಟೆಯಲ್ಲೇ ಒಂದೇ ದಿನ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ಬೆಂಗಳೂರಿನಲ್ಲಿ ಇಬ್ಬರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ […]

ನಿನ್ನೆ ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಸಾಯಿಸಿದ ವ್ಯಕ್ತಿಯನ್ನ  ಇಂದು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಹಾವನ್ನು ಕಚ್ಚಿ ತಿನ್ನುತ್ತಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಆತನನ್ನು  ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವ್ಯಕ್ತಿಯನ್ನ ಬಂಧಿಸುವಲ್ಲಿ ವನೋಧಯ ಸಂಸ್ಥೆಯ ಕಾರ್ಯಕರ್ತರ ಸಹಾಯದೊಂದಿಗೆ ವ್ಯಕ್ತಿಯನ್ನು ಬಂಧಿಸುವಲ್ಲಿ ಅರಣ್ಯ  ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement

Wordpress Social Share Plugin powered by Ultimatelysocial