ಕೊರೊನಾ ಹಿನ್ನಲೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಂಬೈ ಪೊಲೀಸ್ ಫೌಂಡೇಶನ್‌ಗೆ ೨ಕೋಟಿ ರೂಪಾಯಿ ಸಹಾಯ ಹಸ್ತ ಚಾಚಿದ್ದಾರೆ. ಹಿಂದೆ ಅಕ್ಷಯ್ ಖಾನ್ ಮುಂಬೈ ಬಿಬಿಎಂಪಿಗೆ ೩ ಕೋಟಿ ದೇಣಿಗೆ, ಕೊರೊನಾ ವಿರುದ್ಧ ಹೋರಾಟಕ್ಕೆ ೨೫ಕೋಟಿ ದೇಣಿಗೆ ನೀಡಿದ್ದರು. ಈಗ ನಗರವನ್ನು ರಕ್ಷಿಸುತ್ತಿರುವ ಪೊಲೀಸರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಕ್ಷಯ್ ಕುಮರ್ ಸಹಾಯಕ್ಕೆ ಮುಂಬೈ ಪೊಲೀಸ್ ಕಮೀಷನರ್ ಪರಂ ಬೀರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಧನ್ಯವಾದ […]

ದೇಶವೇ ಲಾಕ್ ಡೌನ್‍ನಲ್ಲಿದೆ. ಹೊನ್ನಾಳಿ ಶಾಸಕರು ಮಾತ್ರ ಈ ಸಮಯದಲ್ಲೂ ಹಳ್ಳಿ ಹಳ್ಳಿಗಳಲ್ಲಿ ತಿರುಗುತ್ತಿದ್ದಾರೆ ” ಎಂದು ಮಾಜಿ ಶಾಸಕ ಶಾಂತನಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ರೇಣುಕಾಚಾರ್ಯ 2 ದಿನ ದಾವಣಗೆರೆ, 3 ದಿನ ಬೆಂಗಳೂರು ಹೀಗೆ ಸಂಚಾರ ಮಾಡುತ್ತಿದ್ದಾರೆ. ಹೊರ ಜಿಲ್ಲೆಗೆ ಹೋಗಿ ಬಂದರೆ ಅವಲೋಕನದಲ್ಲಿಡಬೇಕಾಗುತ್ತದೆ. ಆದರೆ ಶಾಸಕರು ಮಾತ್ರ ಇದ್ಯಾವುದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಇದಲ್ಲದೇ ಕ್ಷೇತ್ರದಲ್ಲಿ ಶಾಸಕರು ಸುಳ್ಳು ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ಸ್ಕ್ರೀನಿಂಗ್ ಮಾಡುತ್ತಾರೆ […]

ಲಾಕ್​ಡೌನ್​ನಂತಹ ಸಮಯದಲ್ಲಿ ಕೆಲಸ ಇಲ್ಲದವರಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಕಾಯ್ದೆಯಲ್ಲಿದೆ. ಆದ್ರೆ ಗ್ರಾಮೀಣಾಭಿವೃದ್ಧಿ ಸಚಿವರು ಮಾತ್ರ ಕೆಲಸ ಇಲ್ಲದವರಿಗೆ ಪಂಚಾಯಿತಿಗೆ ಹೋಗಿ ಅರ್ಜಿ ಕೊಟ್ಟು ಕೆಲಸ ತೆಗೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ಸರಿ ಎಂದು ಸಂಸದ ಡಿ.ಕೆ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ  ಮಾತನಾಡಿದ ಅವರು, ಇದು ಪ್ರಪಂಚದಲ್ಲೇ ಉದ್ಭವವಾಗಿರೋ ವಿಭಿನ್ನವಾದ ಸಮಸ್ಯೆ. ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಬಹುದು. ಕನಿಷ್ಠ 8 ಸಾವಿರ ರೂ.ಗಳನ್ನು ಪ್ರತಿ […]

ಅಮೆರಿಕ: ಉತ್ತರ ಕೊರಿಯಾದ ಕ್ರೂರಿ ದೊರೆ ಕಿಮ್ ಜಾಂಗ್ ಉನ್ ಆನಾರೋಗ್ಯ ಹಿನ್ನಲೆ ಕಿಮ್ ಕ್ಷೇಮವಾಗಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ..ಈ ಟ್ರಂಪ್ ಹೇಳಿಕೆ ಎಲ್ಲಾ ಊಹಾಪೋಹಕ್ಕೆ ತೆರೆ ಎಳೆದಂತಾಗಿದೆ. ಅವರ ಆರೋಗ್ಯದ ಬಗ್ಗೆ ನನಗೆ ತುಂಬಾ ಒಳ್ಳೆಯ ಮಾಹಿತಿ ಇದೆ. ಆದರೆ ಅದರ ಬಗ್ಗೆ ನಾನು ಈಗ ಮಾತನಾಡಲು ಸಾಧ್ಯವಿಲ್ಲ ಆತನಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸುವೆ ಅಷ್ಟೇ, ಎಂದು ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದ್ರು. ಕಿಮ್ ಜಾಂಗ್ […]

ಜಾನುವಾರುಗಳು ಸತ್ತಾಗ 10000 ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು […]

ಕರ್ನಾಟಕದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಲ್ಯಾಬ್ ತೆಗೆಯುವುದಾಗಿ ಸರ್ಕಾರ ಹೇಳಿತ್ತು, ಆದರೆ ಇಲ್ಲಿಯವರೆಗೆ ಸರ್ಕಾರ ಆ ಕೆಲಸ ಮಾಡಿಲ್ಲ. ಈ ಕೊರೊನಾ ಯುದ್ಧ ಗೆಲ್ಲಬೇಕು ಅಂದ್ರೆ ರಕ್ಷಕರಿಗೆ ರಕ್ಷಣೆಯಿಲ್ಲ. ಕ್ವಾಲಿಟಿ ಪ್ರಕಾರ ಪಿಪಿಇ ಕಿಟ್ ವಿತರಣೆ ಮಾಡಿಲ್ಲ. ಕಲಬುರಗಿ ಇಎಸ್ ಐಗೆ ಇಲ್ಲಿಯವರೆಗೆ ಒಂದು ರೂಪಾಯಿ […]

ಇತ್ತಿಚ್ಚಿನ ದಿನಗಳಲ್ಲಿ ಲೂಡೋ ಆಟ ಸಖತ್ ಫೇಮಸ್ ಆಗಿದೆ..ಟೈಂ ಸಿಕ್ಕಿದ್ರೆ ಸಾಕು ಎಲ್ಲರೂ ಮೊಬೈಲ್ ನಲ್ಲಿ ಲೂಡೋ ಆಟವಾಡ್ತಿರುತ್ತಾರೆ..ಇಂತಹ ಲೂಡೋ ಆಟವೇ ದಂಪತಿಗಳ ಮಧ್ಯೆ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ..ಲೂಡೋದಲ್ಲಿ ಸೋತ ಗಂಡ ಹೆಂಡ್ತಿ ಮೇಲೆ ಹಲ್ಲೆ ನಡೆಸಿ ಬೆನ್ನು ಮೂಳೆ ಮುರಿದು ಹಾಕಿರೋ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ..ಕೊರೊನಾ ಹಿನ್ನಲೆ ಲಾಕ್ ಡೌನ್ ಆಗಿದ್ದು, ತನ್ನ ಗಂಡ ಸಮಾಜದಲ್ಲಿ ಇತರರೊಂದಿಗೆ ಸಮಯ ಕಳೆಯುವ ಬದಲು ಮನೆಯೊಳಗೆ ಇರಬೇಕೆಂದು ಹೆಂಡ್ತಿ ಬಯಸಿದ್ಲು. […]

ಮಹಾಮಾರಿ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ 1.20 ಲಕ್ಷ ಕುಟುಂಬಗಳಿಗೆ ಅನ್ನಂ ಪರಬ್ರಹ್ಮ ದಿನಸಿ ಕಿಟ್ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಂಕೇತಿಕ ಚಾಲನೆ  ನೀಡಿದರು. ರಾಮನಗರದ ಬಡಕುಟುಂಬಗಳಿಗೆ ಕುಮಾರಸ್ವಾಮಿ ಹಾಗೂ ಕುಟುಂಬ ಸದಸ್ಯರು ಆಹಾರ ಕಿಟ್ ವಿತರಣೆ ಮಾಡಿದರು. ಈ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ನಿಖಿಲ್ ಹೆಂಡತಿ ರೇವತಿ ಕೂಡ ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಮನಗರ – ಚನ್ನಪಟ್ಟಣ ಕ್ಷೇತ್ರಗಳಿಗೆ 60 […]

ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಹೇಳಿದ್ದಾರೆ. ತಮ್ಮ ಜೀವ ಅಪಾಯದಲ್ಲಿದ್ದರೂ ಸಹ ಅದನ್ನು ಲೆಕ್ಕಿಸದೇ ಜನರಿಗೆ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ 25 ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಹೇಳಿದ್ದಾರೆ.  

ನವದೆಹಲಿ: ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ವಿವಿಧ ಚಟುವಟಿಕೆಗಳು ಆರಂಭವಾಗಿದ್ದು, ಇಂದೊಂದು ವರವಾಗಿ ಪರಿಣಮಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ವರವೊಂದು ಸಾಂಕ್ರಾಮಿಕದ ವೇಷದಲ್ಲಿ ಭಾರತಕ್ಕೆ ಬಂದಿದೆ ಎಂದಿದ್ದಾರೆ.ಭಾರತದಲ್ಲಿ ಸಾಕಷ್ಟು ಚಟುವಟಿಕೆಗಳು ಪ್ರಾರಂಭವಾಗಿವೆ. ನಾವು ಪಿಪಿಇಗಳನ್ನು ತಯಾರಿಸುತ್ತಿದ್ದೇವೆ. ದೇಶದಲ್ಲಿ ನೂರಕ್ಕೂ […]

Advertisement

Wordpress Social Share Plugin powered by Ultimatelysocial