ನವದೆಹಲಿ: ಕೊರೊನಾ ವೈರಸ್‌ನಿಂದಾಗಿ ಲಾಕ್‌ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್  ಬಳಕೆ ಮಾಡ್ತಿದ್ರು. ಈ ಜ್ಯೂಮ್ ಆ್ಯಪ್ ಅಷ್ಟೊಂದು ಸೇಫ್ ಅಲ್ಲ. ಬಳಕೆದಾರರ ಮಾಹಿತಿ ಸೋರಿಕೆ ಆಗುತ್ತೆ ಅಂತ ಕಳೆದ ವಾರವಷ್ಟೇ ಕೇಂದ್ರ […]

 ಮೈಸೂರು : ನಂಜನಗೂಡು ಜ್ಯುಬಿಲೆಂಟ್ ಕಾರ್ಖಾನೆ ನೌಕರರಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕಾರ್ಖಾನೆ ನೌಕರರ ಸಂಪರ್ಕ ಹೊಂದಿದ್ದ ಐದು ಗ್ರಾಮಗಳನ್ನ ಸೀಲ್ ಡೌನ್ ಮಾಡಲಾಗಿದೆ. ಕೂಗಲೂರು, ಬ್ಯಾಳೂರು, ದೇವರಸನಹಳ್ಳಿ, ಬಸಪುರ, ತಾಂಡಾಪುರ ಗ್ರಾಮಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶಿಸಿದ್ದಾರೆ. ಇನ್ನು ಸೀಲ್​ಡೌನ್​ ಆದ ಗ್ರಾಮಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಇನ್ನು ಜ್ಯುಬಿಲೆಂಟ್ ಕಾರ್ಖಾನೆಯ 52ನೇ ಸೋಂಕಿತನ ಸಂಪರ್ಕದಿಂದ ಈಗಾಗಲೇ 65 ಜನರು […]

ಬೆಂಗಳೂರು: ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕರ ತೀವ್ರ ವಿರೋಧದ ನಡುವೆಯೂ  ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪಾದರಾಯನ ಪುರ ಗಲಭೆ ಪ್ರಕರಣದ 54 ಆರೋಪಿಗಳನ್ನು ನಿನ್ನೆ ರಾಮನಗರ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಇವತ್ತು ಉಳಿದ 76 ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್​ ಮಾಡಲು ಸಿದ್ಧತೆ ನಡೆದಿದೆ.  ರಾಮನಗರ ಗ್ರೀನ್ ಝೋನ್ ಆಗಿರುವ ಹಿನ್ನೆಲೆ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗ್ತಿದೆ. ಅಲ್ಲಿನ ಕಾರಾಗೃಹಕ್ಕೆ ಶಿಫ್ಟ್ ಮಾಡುವ […]

ಕೇರಳ: ಕೋವಿಡ್ ಸೋಂಕಿನ ನಡುವೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪಿವೆ. ಆದರೆ ಈ ಪ್ರಕರಣಕ್ಕೆ ಫೆಲೆನ್ ಪಾರ್ವೋ ವೈರಸ್ ಕಾರಣ ಎಂಬುದು ಗೊತ್ತಾಗಿದೆ. ಜಿಲ್ಲೆಯ ಮಾನಂದವಾಡಿ ಎಂಬಲ್ಲಿ ಕಳೆದ ಮೂರು ದಿನಗಳಲ್ಲಿ ೧೫ಕ್ಕೂ ಹೆಚ್ಚು ಬೆಕ್ಕುಗಳು ಮೃತ ಪಟ್ಟಿವೆ. ಹೀಗೆ ಸಾವಿಗೀಡಾದ ಬೆಕ್ಕುಗಳ ದೇಹದ ಅಸ್ಥಿಪಂಜರ ಸಂಗ್ರಹಿಸಿದ ಪಶುಸಂಗೋಪನಾ ಇಲಾಖೆ ವೈದ್ಯರು, ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಬೆಕ್ಕುಗಳ ಸಾವು ವೈರಸ್‌ನಿಂದ ಸಂಭವಿಸಿದೆ ಎಂಬುದು ದೃಢಪಟ್ಟಿದೆ. ಈ ಸುದ್ದಿ ಕೇಳಿದ ಜನರು […]

ಉಡುಪಿ: ಕೊರೊನಾ ಸೋಂಕು ಹರಡುತ್ತಿರೋ ಈ ಸಂಧರ್ಭದಲ್ಲಿ ಸಂಘ ಸಂಸ್ಥೆಗಳು, ಶ್ರೀಮಂತರು ಬಡವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ನಡೆಸುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಮಹಿಳೆ ತಾನೇ ಗುಡಿಸಲಲ್ಲಿ ವಾಸವಾಗಿದ್ರೂ, ಬಡವರ ಸಂಕಷ್ಟಕ್ಕೆ ನೆರವಾಗೋ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಅಲ್ಲೋ ಇಲ್ಲೊ ಸಿಕ್ಕಿದ ಮೀನು ಮಾರಿ ಪುಟ್ಟ ಗುಡಿಸಲಲ್ಲಿ ಜೀವನ ಸಾಗಿಸುತ್ತಿರುವ ಶಾರದಕ್ಕ ಎಂಬುವವರು, ಮಲ್ಪೆ ವಡಬಾಂಡೇಶ್ವರ ವಾರ್ಡ್ ನೆರ್ಗಿ ಯಲ್ಲಿ ಒಟ್ಟು 140 ಮನೆಗಳಿಗೆ […]

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯನ್ನ ಬರ್ಬರವಾಗಿ ಹತ್ಯೆ ನಡೆಸಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಶಾಂತಮ್ಮ ಅಂತ ಗುರುತಿಸಲಾಗಿದೆ..ನಿನ್ನೆ ತಡರಾತ್ರಿ ಚಂದ್ರಾಲೇಔಟ್ ವ್ಯಾಪ್ತಿಯ ವಿನಾಯಕ ಲೇಔಟ್ ನಲ್ಲಿ ಘಟನೆ ನಡೆದಿದೆ..ಚತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಶಾಂತಮ್ಮ  ಧನು ಎಂಬಾತನನ್ನ ಮದ್ವೆಯಾಗಿದ್ದು,ಇಬ್ಬರು ಮಕ್ಕಳು ಕೂಡ ಇದ್ರು..ಇತ್ತಿಚೆಗೆ ವಿನಾಯಕ ಲೇಔಟ್ ನಲ್ಲಿ ವಡಿವೇಲು ಎಂಬಾತನ ಜೊತೆ ಶಾಂತಮ್ಮ ವಾಸವಿದ್ರು..ನಿನ್ನೆ ಮನೆಯಲ್ಲಿ ಶಾಂತಮ್ಮ ಹಾಗೂ ವಡಿವೇಲು ಇದ್ದಾಗ ಧನು ಎಂಟ್ರಿಯಾಗಿದ್ದ,.ಮೂವರು ನಡುವೆ ಮಾತಿಗೆ ಮಾತು […]

ಮಹಾಮಾರಿ ಕರೋನ ದಿಂದ ರಾಜ್ಯದಾದ್ಯಂತ ಲಾಕ್ ಡೌನ್ ಆಗಿ ಎಲ್ಲರಿಗೂ ಒಂದೊಂದು ಸಮಸ್ಯೆ ಇದ್ದರೆ ಕೆಲವರಿಗೆ ಮಾತ್ರ ಒಂದು ಹೊತ್ತಿನ ತುತ್ತು ಊಟಕ್ಕೂ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿ ನಡುವೆಯೂ ಕನ್ನಡ ಚಿತ್ರ ರಂಗದ ಕೆಲವು ನಟರು ಹಾಗೂ ಅವರ ಅಭಿಮಾನಿಗಳಿಂದ ಸಹಾಯ ಮಾಡುತ್ತಿದ್ದು, ಅದೇ ರೀತಿ ಗಣಿನಾಡು ಬಳ್ಳಾರಿಯಲ್ಲಿ ಕೂಡ ಬಡ ಜನರ ಊಟದ ಸೇವೆಗಾಗಿ ಸತತ ೨೫ ದಿನಗಳಿಂದ ಪೊಗರು ಚಿತ್ರ ನಟ ಧ್ರುವ ಸರ್ಜಾ ಅವರ […]

ಪ್ರತಿಯೊಬ್ಬ ಮನುಷ್ಯನ ಸಾಧನೆ ಹಾಗೂ ಯಶಸ್ಸನ್ನು ಕೆದಕಿದರೆ ಅದರ ಹಿಂದೆ ಕಷ್ಟಗಳ ಕೂಪವೇ ತೆರೆದುಕೊಳ್ಳತ್ತದೆ. ಇಂದು ಕ್ರಿಕೆಟ್ ಜಗತ್ತಿನ ದೊರೆಯಾಗಿ ರಾರಾಜಿಸುತ್ತಿರುವ ಟೀಂ ಇಂಡಿಯಾ ನಾಯಕ ಹಾಗೂ ಅಗ್ರಮಾನ್ಯ ಬ್ಯಾಟ್ಸ್​​ಮನ್ ವಿರಾಟ್​ ಕೊಹ್ಲಿ ಕೂಡ ಅಂದು ಹಲವು ಕಷ್ಟಗಳನ್ನ ಎದುರಿಸಿಯೇ ಬಂದರು ಅನ್ನೋದು ತುಂಬಾ ಜನಕ್ಕೆ ಗೊತ್ತಿಲ್ಲ. ತಾವು ಇತರರಿಗಿಂತ ಚೆನ್ನಾಗಿಯೇ ಆಡಿದ್ದರೂ ತಂಡಕ್ಕೆ ಆಯ್ಕೆಯಾಗದಿದ್ದಕ್ಕೆ ಕೊಹ್ಲಿ ರಾತ್ರಿಯಿಡೀ ಅತ್ತಿದ್ದರಂತೆ. ಈ ಕುರಿತು ಸ್ವತಃ ಟೀಮ್ ಇಂಡಿಯಾ ಕ್ಯಾಪ್ಟನ್ ಅಂದಿನ […]

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 7 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ, ಕಲಬುರಗಿಯಲ್ಲಿ ಇಂದು 4 ತಿಂಗಳ ಮಗು ಸೇರಿದಂತೆ ಹೊಸದಾಗಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಲಬುರಗಿಯ ಐದು ಜನರಿಗೆ […]

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ಕಷ್ಟದಲ್ಲಿರುವ ನಗರದ ಜನತೆಗೆ ,ಮಹಾನಗರ ಪಾಲಿಕೆ ಸಿಹಿಸುದ್ದಿ ನೀಡಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಆರಂಭಿಸಿದೆ. ಜನರು ಹೋಂ ಡೆಲಿವರಿ ಸಹಾಯವಾಣಿ ೦೮೦-೬೧೯೧೪೯೬೦ ಸಂಖ್ಯೆಗೆ ಕರೆ ಮಾಡಿದರೆ ದಿನಸಿ, ತರಕಾರಿ,ಔಷಧಿ ಮುಂತಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ೧೦ ರೂ. ಸೇವಾಶುಲ್ಕ ಪಡೆಯಲಾಗುತ್ತದೆ. ಖಾಸಗಿ ಏಜೆನ್ಸಿಯ ಸಹಯೋಗದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ೫ ಸಾವಿರ […]

Advertisement

Wordpress Social Share Plugin powered by Ultimatelysocial