ಬಡವರ ಪರವಾಗಿ ಕೆಲಸ ಮಾಡಬೇಕಾದರೆ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಸಚಿವ ಶಿವರಾಮ್ ಹೆಬ್ಬಾರ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕೊರೊನಾ ತುರ್ತು ಸಂದರ್ಭದಲ್ಲಿ ಅಭಿವೃದ್ದಿ ಕೆಲಸಗಳು ಕುಂಟಿತವಾಗಬಾರದು. ಸಾರ್ವಜನಿಕರು ಕೊರೊನಾ ಜೊತೆ ಜೊತೆಗೆ ಬದುಕುವುದನ್ನು ಕಲಿಯಬೇಕು. ಕೋವಿಡ್-೧೯ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಕೊಡುವ ಪರಿಹಾರ ಧನ ಅರ್ಹ ಫಲಾನುಭವಿಗಳಿಗೆ ತಲುಪಬೇಕು […]

ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಬ್ರ‍್ಯಾಂಡ್ ಕಂಪನಿಯ ಸ್ಟಿಕರ್ ಅಂಟಿಸಿ ಮಾರಾಟ ಮಾಡುತ್ತಿದ್ದ ಖದೀಮನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸುರೇಶ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಸಾಧಾರಣ ಟಿವಿಗಳನ್ನ ಖರೀದಿ ಮಾಡಿ ಅದಕ್ಕೆ ಸೋನಿ ಕಂಪನಿ, ಸ್ಯಾಂಮ್ ಸಂಗ್ ಕಂಪನಿ ಸ್ಟಿಕರ್‌ಗಳನ್ನ ಅಂಟಿಸಿ ಅಸಲಿ ಟಿವಿಗಳಂತೆ ಬಿಂಬಿಸಿ ಅಧಿಕ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಈ ವಿಚಾರ ತಿಳಿದು ಕಂಪನಿ ಅವರು, ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. […]

ಸಿಸಿ ರಸ್ತೆ ಚರಂಡಿ ಇಲ್ಲದೆ ದಿನನಿತ್ಯ ಊರಿನಲ್ಲಿ ಜನರು ರಸ್ತೆಯ ಮೇಲೆ ತಿರುಗಾಡಲು ಹರಸಾಹಸ ಪಡುವಂತಾಗಿದೆ ಎಂದು ರೈತ ಸಂಘದ ಮುಖಂಡ ಬಸವರಾಜ ಬಿರಾದಾರ ಹೇಳಿದರು. ರಾಯಚೂರು ಜಿಲ್ಲೆಯ ಚಿಂಚೋಡಿ ಗ್ರಾಮದಲ್ಲಿ ಮತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತದೆ. ಆದರೆ ಯೋಜನೆಗಳು ಅನುಷ್ಠಾನಗೊಳ್ಳುವ ಹಂತದಲ್ಲಿ ಮಾತ್ರ ಕೆಲ ಅಧಿಕಾರಿಗಳ ನಿರ್ಲಕ್ಷತನಕ್ಕೆ ಕಾಮಗಾರಿಗಳು ಹಳ್ಳ ಹಿಡಿಯುತ್ತವೆ. ಗ್ರಾಮದಲ್ಲಿ ಚರಂಡಿಗಳು ಇಲ್ಲದೆ ರಸ್ತೆಯಲ್ಲೆಲ್ಲಾ ಗಲೀಜು ನೀರು […]

ಖಾಸಗಿ ಆಸ್ಪತ್ರೆ ನಿರ್ಲಕ್ಷö್ಯದಿಂದ ಕೊರೊನಾ ಸೋಂಕಿತರೊಬ್ಬರು ನಿನ್ನೆ ತಡರಾತ್ರಿ ನರಳಾಡಿವಂತಾದ ಘಡನೆ ಹುಬ್ಬಳಿಯಲ್ಲಿ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆ ಹೊರೆಯಾಗುತ್ತಿದೆ ಎಂಬುವ ಉದ್ದೇಶದಿಂದ ಧಾರವಾಡ ಜಿಲ್ಲೆಯ ೨೨ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಜಿಲ್ಲಾಡಳಿತ ನಿರ್ದೇಶನ ನೀಡಿತ್ತು. ನಗರದ ವಿವೇಕಾಂನದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಚಿಕಿತ್ಸೆಗೆ ಸೂಚನೆ ನೀಡಲಾಗಿದ್ದರೂ ಕೂಡ ಆಸ್ಪತ್ರೆಯ ವೈದ್ಯರು ಸಂಕಿತ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆ ಕಳಿಸಿದ್ದಾರೆ. ಹೀಗಾಗಿ […]

ಕೇಂದ್ರ ಗೃಹ ಸಚಿವಾಲಯ, ಯೂನಿವರ್ಸಿಟಿ ಪರೀಕ್ಷೆಗಳನ್ನು ನಡೆಸಲು ಯುಜಿಸಿಗೆ ಸಮ್ಮತಿ ಸೂಚಿಸಿದೆ. ಈ ಹಿನ್ನಲೆ ಯುಜಿಸಿ, ಎಲ್ಲಾ ವಿಶ್ವವಿದ್ಯಾಲಯಗಳು ಅಂತಿಮ ಸೆಮಿಸ್ಟರ್/ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸಬೇಕು ಎಂದು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ರಾಜಸ್ಥಾನ, ತೆಲಂಗಾಣ, ಮಹಾರಾಷ್ಟç, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಈ ವರ್ಷ ಯೂನಿವರ್ಸಿಟಿ ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಿದ್ದವು. ಇದರ ಬೆನ್ನಲ್ಲೇ ಯುಜಿಸಿ ಆದೇಶ ಹೊರಬಿದ್ದಿದೆ. ಎಪ್ರಿಲ್ ತಿಂಗಳಲ್ಲಿ ರಚನೆಯಾದ ಯುಜಿಸಿಯ ವಿಶೇಷ […]

ಕೊರೊನಾ ಅತಂಕದ ನಡುವೆಯು ಕಾಫಿ ನಾಡಿಗರಿಗೆ ಹೊರಜಿಲ್ಲೆ-ರಾಜ್ಯದಿಂದ ಬರುವ ಜೊತೆ ಮಳೆಯ ಅತಂಕ ಶುರುವಾಗಿದೆ. ಹೊರ ಜಿಲ್ಲೆಯವರು ಕೊರೊನಾ ಹರಡುವ ಭೀತಿಯ ಜೊತೆಗೆ ಮಳೆಯ ಅರ್ಭಟದಿಮದ ತಲೆ ನೋವು ಬಂದAತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆಯಿAದ ಮೂಡಿಗಿರೆ ತಾಲೂಕಿನ ಗೊಟ್ಟಿಗೆಹಾರೆ, ಬಣಕಲ್, ಬಾಲೂರು, ಚಾರ್ಮಡಿ ಘಾಟ್ ಸುತ್ತಮುತ್ತ ಭಾರಿ ಮಳೆ ಸುರಿದಿದೆ. ಕೊರೊನಾ ಅತಂಕದಿAದ ಬದುಕುತ್ತಿರೋ ಜನರಿಗೆ ವರುಣ […]

ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ.  ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಧಾವಿಸಬೇಕೆಂದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ […]

ರಾಮನಗರ ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಡಪಟ್ಟಿದೆ. ಕೋಡಿಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಹಿರಿಯಅಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಕಚೇರಿಯನ್ನು ಮುಚ್ಚಲಾಗಿದೆ. ಎಂದು ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಅವರು ಈ […]

ಮುಜಫರ್ ಪುರ್ ನ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಬಿಜೆಪಿ ಮುಖಂಡ ಅಲ್ಪೇಶ್ ಠಾಕೂರ್ ವಿರುದ್ಧ ಕಾಂತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುಜರಾತ್ ನಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ತಾರತಮ್ಯದ ಹಿನ್ನೆಲೆಯಲ್ಲಿ ಕಾಂತಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ 153, 295 ಮತ್ತು 504 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.

ಕೋವಿಡ್ – 19 ಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡದ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ. ಕೊರೊನಾ ಮಾಹಿತಿ ಪಡೆಯಲು ಸೆಂಟ್ರಲ್ ಟೀಂ ಬರುವ ಸಂದರ್ಭದಲ್ಲಿ ಸಚಿವರಿಗೆ ಹಾಜರಿರಲು ಸಿಎಂ ಸೂಚನೆ ನೀಡಿದ್ದಾರೆ. ಡಿಸಿಎಂ ಅಶ್ವಥ ನಾರಾಯಣ, ಸಚಿವರಾದ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಸುರೇಶ್ ಕುಮಾರ್ ಮತ್ತು ಸಿಎಸ್ ವಿಜಯ್ ಭಾಸ್ಕರ್, ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹಾಜರಿರಲು ಸೂಚನೆ […]

Advertisement

Wordpress Social Share Plugin powered by Ultimatelysocial