ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ಹೇಳಿದರು. ಹೊಸದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವರು ಈ ಭರವಸೆ ನೀಡಿದರು. […]

ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಲದಲ್ಲಿ ರಾಜಕಾರಣದ ಅಪರಾಧೀಕರಣ ಹಾಗೂ ಭ್ರಷ್ಟಾಚಾರ ಎಲ್ಲೆ ಮೀರಿವೆ. ಇಂಥ ದುರುಳ ಸರಕಾರವನ್ನು ಕಿತ್ತೂಗೆಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ಧಾಳಿ ನಡೆಸಿದ್ದಾರೆ. ಜನ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ನಿಮಿತ್ತ ಕೋಲ್ಕತಾದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಜವಾಹರಲಾಲ್ ನೆಹರೂ ಅವರ ಅನುಕೂಲ ಸಿಂಧು ರಾಜಕಾರಣವನ್ನು ಆರಂಭದಿAದಲೇ ವಿರೋಧಿಸುತ್ತಾ ಬಂದಿದ್ದ […]

ರಾಜ್ಯದಲ್ಲಿ ಕೋವಿಡ್ ೧೯ ಸಾಮುದಾಯಿಕವಾಗಿ ಹರಡಿದ್ದರೂ ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಸೋಂಕಿತರ ಸಂಖ್ಯೆಗನುಗುಣವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸಮರ್ಪಕವಾಗಿ ಹೆಚ್ಚು ಪರೀಕ್ಷೆ ನಡೆಸದೇ ಜನರ ಸಾವಿಗೆ […]

ಗ್ರಾಹಕರ ಸಾವಿರಾರು ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದ ಆರೋಪದ ಮೇಲೆ ಎಸಿಬಿ ದಾಳಿಗೊಳಗಾಗಿದ್ದ ಬಸವನಗುಡಿಯ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಾಸುದೇವಮಯ್ಯ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್‌ನ ರಸ್ತೆಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯಕ್ಕೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ. ವಿಧಿ ವಿಜ್ಞಾನ […]

ರಾಮನಗರ ಜಿಲ್ಲೆ ಬಿಡದಿಯ ಟೊಯೊಟಾ ಕಾರು ಕಂಪನಿಯ ನೌಕರ ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾನೆ. ಆತನ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಏಷ್ಯಾದ ದೊಡ್ಡ ಕಾರು ತಯಾರಿಕಾ ಕಂಪನಿಯಾದ ಟೊಯೊಟಾ ಕಾರ್ಖಾನೆಯಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಟೊಯೊಟಾ ಕಾರ್ಮಿಕ ಬೆಂಗಳೂರಿನ ವಿಜಯನಗರದ ನಿವಾಸಿಯಾಗಿದ್ದು, ಮೃತನ ತಂದೆ ಕೂಡ ಕಳೆದ ಜುಲೈ 2 ರಂದು ಕೋವಿಡ್ […]

ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ ತೆರಳಿದ್ದಾರೆ. ತಮ್ಮ ಪುತ್ರ ಡಾ.ಯತೀಂದ್ರ ಅವರ ಸಲಹೆಯ ಮೇರೆಗೆ ಸಾರ್ವಜನಿಕ ಸಂಪರ್ಕದಿಂದ ದೂರ ಉಳಿದಿದ್ದಾರಷ್ಟೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಸಕ್ರಿಯವಾಗಿದ್ದಾರೆ. ಕೊರೋನಾ ವಿರುದ್ಧ ಹೋರಾಡಲು ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಕೈಗೊಂಡ […]

ಕರ್ನಾಟಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗನ್‌ಮ್ಯಾನ್ ಸೇರಿ ನಾಲ್ವರು ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಕುರಿತು ಸ್ವತಃ ಗುಂಡೂರಾವ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಒಬ್ಬರು ಪೊಲೀಸ್ ಸಿಬ್ಬಂದಿ, ಒಬ್ಬ ಗನ್‌ಮ್ಯಾನ್ ಹಾಗೂ ಮನೆಯಲ್ಲಿ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿಗಳಿಗೆ ಸೋಂಕು ಪತ್ತೆಯಾದ ಹಿನ್ನೆಲೆ ದಿನೇಶ್ ಗುಂಡೂರಾವ್, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಎಲ್ಲರ ವರದಿ ನೆಗಿಟಿವ್ […]

ನೇಕಾರ್ ಸಮ್ಮಾನ್ ಯೋಜನೆ ಅಡಿ ರಾಜ್ಯದ ನೇಕಾರರಿಗೆ ನೇರ ಹಣ ವರ್ಗಾವಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ  ನೇರ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಮೂಲಕ ಪ್ರತಿ ನೇಕಾರರ ಖಾತೆಗೆ ಎರಡು ಸಾವಿರ ವರ್ಗಾವಣೆ ಆಗುವುದರಿಂದ ಆರ್ಥಿಕ ನರೆವು ದೊರೆಯುತ್ತದೆ. ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 10.96 ಕೋಟಿ ವೆಚ್ಚವಾಗುತ್ತದೆ. ಕೈಮಗ್ಗ […]

ಪುಲ್ವಾಮ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಒಬ್ಬ ಉಗ್ರ ಹತ್ಯೆಯಾಗಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ದಿನೇ ದಿನೇ ಹೆಚ್ಚಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಹೆಚ್ಚುತ್ತಿರುವ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳನ್ನು ನೆಲಸಮ ಮಾಡಲು ಭಾರತೀಯ ಯೋಧರು ಕಾರ್ಯಚರಣೆ ನಡೆಸುತ್ತಿದ್ದಾರೆ.ಪುಲ್ವಾಮ ಜಿಲ್ಲೆಯ ಗುಸ್ಸೂ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಪೊಲೀಸ್ ಸಿಬ್ಬಂದಿ […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಕಳೆದ ಒಂದು ವಾರದಿಂದ ಸುಮಾರು ೮೦೦ಜನ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿದ್ದಾರೆ. ರಾಯಚೂರನಲ್ಲಿ ಮಾತನಾಡಿದ ಅವರು,ಲಾಕ್ ಡೌನ್ ನಿಂದ ಕಾರ್ಮಿಕರಿಗೆ ಕೈಗಳಿಗೆ ಕೆಲಸ ಇಲ್ಲದೆ ಕಂಗಾಲಾಗಿದ್ದರು.ಪAಚಾಯಿತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದೆ, ರೈತರಿಗೆ ಅನುಕೂಲವಾಗುವ ಕೃಷಿ ಹೊಂಡ,ಬದು ನಿರ್ಮಾಣ, ಕೆರೆ ನಿರ್ಮಾಣ, ಗೋಕುಂಟೆ ಸೇರಿದಂತೆ […]

Advertisement

Wordpress Social Share Plugin powered by Ultimatelysocial