ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಹಾಗೂ ಪೊಲೀಸರಿಗೂ ಬೆಂಬಿಡದೆ ಕೊರೊನಾ ವೈರಸ್ ಕಾಡುತ್ತಿದೆ. ಮತ್ತೊಬ್ಬ57 ವರ್ಷದ ASI ಕೊರೊನಾಗೆ ಬಲಿಯಾಗಿದ್ದಾರೆ. ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ನೇರ ಪ್ರಸಾರ ಮಾಡಲಾಗುತ್ತದೆ.ಎಂದು ಆಡಳಿತ ಮಂಡಳಿ ತಿಳಿಸಿದೆ. ಕೊರೊನಾ ವೈರಸ್ ಹಿನ್ನಲೆಯಲ್ಲಿ ಡಿಡಿ ವಾಹಿನಿಯಲ್ಲಿ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ನೇರ ಪ್ರಸಾರ ಮಾಡಲು ದೇವಾಲಯ ಮಂಡಳಿ ನಿರ್ಧರಿಸಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಆಡಳಿತ ಮಂಡಳಿ  ನಡೆಸಿದೆ. ಈ ಹಿಂದಿನ ಯೋಜನೆಯ ಪ್ರಕಾರ ಜಮ್ಮು-ಕಾಶ್ಮೀರ ಆಡಳಿತ ಅಮರನಾಥ ಯಾತ್ರೆಯ ವೇಳೆ ಗರಿಷ್ಠ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ […]

ಗಲ್ವಾನ್ ಕಣಿವೆ ಪ್ರದೇಶದಿಂದ ಭಾರತ ಹಾಗೂ ಚೀನಾ ಸೇನೆಗಳು ಹಿಂದೆ ಸರಿದಿವೆ. ಆದರೆ ಚೀನಾ ಸೇನಾ ಪಡೆ ನಿಜವಾಗಿಯೂ ಗಡಿ ಪ್ರದೇಶದಿಂದ ಹಿಂದೆ ಸರಿದಿದೆಯೇ ಎಂಬುದನ್ನು ಭಾರತ ಸೇನೆ ಪರಿಶೀಲಿಸಲು ಮುಂದಾಗಿದೆ. ಗಲ್ವಾನ್ ಕಣಿವೆಯಲ್ಲಿ ತೀವ್ರ ಸಂಘರ್ಷದ ವಾತಾವರಣ ಸೃಷ್ಟಿಯಾಗಿತ್ತು. ಜೂನ್ 15ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಕಳೆದ ವಾರ ಕಮಾಂಡರ್ ಹಂತದ ಸಭೆಯಲ್ಲಿ ಉಭಯ ದೇಶಗಳು ಗಡಿ ಪ್ರದೇಶದಿಂದ 2-3 ಕಿ.ಮೀ. ಹಿಂದೆ ಸರಿಯಬೇಕೆಂಬ […]

ಬೆಂಗಳೂರಿನ ವೈಟ್ ಫೀಲ್ಡ್ ನಾ ವಿಶಾಲ್ ಮಾರ್ಟ್ ಬಳಿ  ಉಸಿರಾಟ ತೊಂದರೆಯಿಂದ ಮಹಿಳೆ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಕಾಲ್ ಮಾಡಿದ್ದ ಮಹಿಳೆ ಗಂಟೆಗಟ್ಟಲೆ ಆ್ಯಂಬುಲೆನ್ಸ್ ಗೆ ಕಾದುನಿಂತಿದ್ದಾಳೆ. ಹಲವು ಗಂಟೆಗಳು ಕಾಲ ಕಾದ್ರೂ ಬಾರದ ಆ್ಯಂಬುಲೆನ್ಸ್, ಆ್ಯಂಬುಲೆನ್ಸ್ ಗಾಗಿ ಕಾದು ಕಾದು ಸುಸ್ತಾಗಿ ಕುಸಿದು ಬಿದ್ದಿದ್ದಾಳೆ. ನಂತರ ಅಲ್ಲಿನ ಸ್ಥಳೀಯರು ಆಟೋ ಹತ್ತಿಸಿ‌ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.      

ಮಳೆಗಾಲ ಪ್ರಾರಂಭವಾಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ಇದರಿಂದ ಜನರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಲಹೆ ನೀಡಿದ್ದಾರೆ. ಹಾಗೆಯೇ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದ ಕೂಡಲೇ ಹತ್ತಿರದ ಫೀವರ್ ಕ್ಲಿನಿಕ್‍ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಟ್ವೀಟ್ ಮೂಲಕ ಜನರಿಗೆ ಸಲಹೆ ನೀಡಿದ್ದಾರೆ. ಅದಲ್ಲದೇ ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭವಾಗಲಿದೆ. ಕೊರೊನಾ ಬಗ್ಗೆ […]

ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಪಕ್ಷಗಳಿಗೆ ಸವಾಲೆಸೆಯುವ ಮುನ್ನ ಯೋಚಿಸಿ ಮಾತನಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.  ವೈದ್ಯಕೀಯ ಉಪಕರಣ ಖರೀದಿಯಲ್ಲಿ ಲೂಟಿಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಆರೋಗ್ಯ ಸಚಿವ ಶ್ರೀರಾಮುಲು. ಈ ಕುರಿತು ಟ್ವೀಟ್‌ ಮೂಲಕ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, ರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ […]

ಕೊರೋನಾ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದ್ದರೆ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಇದಕ್ಕೆ ಸಿದ್ದರಾಮಯ್ಯ, ಬಳ್ಳಾರಿಯ ನಿಮ್ಮ ಅಣ್ಣ, ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಹೇಳಿದ್ದಾರೆ. ನಂತರ ಸಿದ್ದರಾಮಯ್ಯ ಆರೋಪಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, […]

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಕಂದಾಯ ಭವನದಲ್ಲಿ ಇರುವ ಉಪವಿಭಾಗಾಧಿಕಾರಿಗಳ ಕಚೇರಿಗೂ ಕೊರೊನಾ ಸೋಂಕಿನ ಭಯ ಕಾಡಲಾರಂಭಿಸಿದೆ. ಈ ಕಚೇರಿಗಳು ಸೀಲ್‍ಡೌನ್ ಆಗಿವೆ ಎಂಬ ವದಂತಿ ಹಬ್ಬಿತ್ತು. ಆದರೆ ಸೀಲ್‍ಡೌನ್ ಆಗಿಲ್ಲ ಎಂದು ಕಚೇರಿ ಮೂಲಗಳು ಸ್ಪಷ್ಟ ಪಡಿಸಿವೆ. ಆದರೆ ಸಾರ್ವಜನಿಕರಿಗೆ ಎಂದಿನಂತೆ ಮುಕ್ತ ಪ್ರವೇಶ ಇಲ್ಲ. ಅತ್ಯಗತ್ಯ ತುರ್ತು ಕೆಲಸ ಇರುವ ಸಾರ್ವಜನಿಕರು ತಾವು ಬಂದ ತುರ್ತು ಕೆಲಸದ ಕುರಿತು ವಿವರಿಸಿದಲ್ಲಿ ಆಯಾ ಕಚೇರಿ ವ್ಯವಸ್ಥಾಪಕರು ಭೇಟಿ […]

ಜುಲೈ 10ರಿಂದ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು. ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ನಂತರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ […]

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಇದೀಗ ಗಾಳಿಯಿಂದಲೂ ವೈರಸ್ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ತಿಳಿಯಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ […]

Advertisement

Wordpress Social Share Plugin powered by Ultimatelysocial