ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಇದೀಗ ಗಾಳಿಯಿಂದಲೂ ವೈರಸ್ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ತಿಳಿಯಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ […]

ಜೆಡಿಯು ಕಾರ್ಯಕರ್ತರ ಮೇಲೆ ಪೊಲೀಸರು ಗರಂ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಷಿಯಲ್ ಡಿಸ್ಟೇನ್ಸ್ ಇಲ್ಲದೆ ಅನುಮತಿ ಪಡೆಯದೇ ಕಾರ್ಯಕರ್ತರು ರ‍್ಯಾಲಿ ಮೂಲಕ ಬಂದ ಹಿನ್ನೆಲೆಯಲ್ಲಿ ನಾಲ್ವರನ್ನು ಮಾತ್ರ ಸಿಎಂ ಬಿಎಸ್‌ವೈ ಭೇಟಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಈ ವೇಳೆ ಖಾಸಗಿ ಶಿಕ್ಷಕರಿಗೆ ಅನುದಾನ ಕೊಡುವಂತೆ ಜೆಡಿಯು ಕಾರ್ಯಕರ್ತರು ಸಿಎಂ ಬಳಿ ಮನವಿಮಾಡಿಕೊಂಡರು. ಸ್ಥಳಕ್ಕೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲಿಸಿದರು. ಇನ್ನೂ ರ‍್ಯಾಲಿ […]

ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಗೂ ಕೊರೊನಾ ಆತಂಕ ತಟ್ಟಿದ್ದು,೪೮ಗಂಟೆಗಳ ಸೀಲ್‌ಡೌನ್ ಮಾಡಲಾಗುತ್ತಿದೆ ಎಂದು ತಾಪಂ ಇಒ ಮುರುಡಯ್ಯ ತಿಳಿಸಿದ್ದಾರೆ. ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಸುತ್ತಿದ್ದ ಸಿಬ್ಬಂದಿಯೊಬ್ಬರ ಪತಿಗೆ, ಕೊರೊನ ದೃಢವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ಪಂಚಾಯಿತಿಗೆ ಔಷಧ ಸಿಂಪಡಿಸಿ ೪೮ ಗಂಟೆಗಳ ಕಾಲ ಸೀಲ್‌ಡೌನ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿತನ ಮಡದಿ ತಾಲೂಕು ಪಂಚಾಯಿತಿಯಲ್ಲಿ ಪ್ರಮುಖವಾದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಆಕೆಗೆ ಕೊರೊನಾ ಪರೀಕ್ಷೆ ನಡೆಸುತ್ತಿದ್ದು, ವರದಿಯ ನಂತರ ಮುಂದಿನ […]

ರಾಜ್ಯದಲ್ಲಿ ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನತೆ ಕೊರೊನಾ ಬಗ್ಗೆ ಭಯ ಪಡುವುದು ಬೇಡ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಜನತೆ ಭೀತಿಗೊಳಗಾಗುವುದು ಬೇಡ. ರಾಜ್ಯದಲ್ಲಿ ಆಂಬುಲೆನ್ಸ್ಗಳ ಸಂಖ್ಯೆ ಹೆಚ್ಚಳ ಮಾಡಿದ್ದು, ೪೫೦ ಅಂಬುಲೆನ್ಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನು ೨೦೦ ಅಂಬುಲೆನ್ಸ್ಗಳನ್ನು ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನ […]

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಜುಲೈ 9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಹೆಚ್ಚಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಭದ್ರತಾ ಪಡೆಗಳು ಪುಲ್ವಾಮಾದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿರುವಾಗ ಸಿ.ಆರ್.ಪಿ.ಎಫ್ ಯೋಧರನ್ನು ಗುರಿಯಾಗಿಸಿ ಉಗ್ರರು ಐಇಡಿ ಬಳಸಿ ದಾಳಿ ಮಾಡಿದ್ದಾರೆ. ಸ್ಫೋಟ ಸಂಭವಿಸಿದ ನಂತರ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, […]

ಅಜ್ಞಾನದಿಂದ ಜ್ಞಾನದ ಕಡೆಗೆ ನಮ್ಮನ್ನು ಕರೆದು ಕೊಂಡು ಹೋಗುವ ಅಂತಹ ಗುರುಗಳಿಗೆ ಗುರು ಪೂರ್ಣಿಮೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಗುರುಗಳಿಗೆ ಗೌರವ ಸಲ್ಲಿಸಿ ಗುರು ಪೂರ್ಣಿಮೆಯ ಶುಭಾಶಯ ಕೋರಿದ್ದಾರೆ. ಗುರು ಪೂರ್ಣಿಮೆಯಂದು ದೇಶವಾಸಿಗಳಿಗೆ ಅನೇಕ ಶುಭಾಶಯಗಳು.ಜೀವನವನ್ನು ಅರ್ಥಪೂರ್ಣವಾಗಿಸುವ ಗುರುಗಳನ್ನು ಗೌರವಿಸುವ ವಿಶೇಷ ದಿನವಾಗಿದೆ ಈ ಸಂದರ್ಭದಲ್ಲಿ, ಎಲ್ಲಾ ಗುರುಗಳಿಗೆ ನನ್ನ ಶುಭಾಶಯಗಳು. ಎಂದು ಪ್ರಧಾನಿ ಟ್ವೀಟ್ ನ ಮೂಲಕ ಶುಭಾಯಗಳನ್ನು ತಿಳಿಸಿದ್ದಾರೆ.    

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕೊರೊನಾ ವೈರಸ್ ಮಹಾಮಾರಿಯ ಅಟ್ಟಹಾಸಕ್ಕೆ ಸಂಡೆ ಬ್ರೇಕ್ ಹಾಕಿದೆ. ಸರ್ಕಾರದ ಆದೇಶದಂತೆ ದೇವದುರ್ಗ ತಾಲೂಕಿನಲ್ಲಿ ಜಾಲಹಳ್ಳಿಯಲ್ಲಿ ಸಂಡೆ ಲಾಕ್ ಡೌನ್ ಮಾಡಲಾಗಿದ್ದು. ದೇವದುರ್ಗ ಪಟ್ಟಣದ ಅಂಬೇಡ್ಕರ್ ಸರ್ಕಲ್ ರಸ್ತೆ, ಪ್ರಮುಖ ರಸ್ತೆ, ಮಾರ್ಕೆಟ್ , ಝಹೀರುದ್ದೀನ್ ಪಾಷಾ ಸರ್ಕಲ್ ಸೇರಿ ಹಲವು ಕಡೆಗಳಲ್ಲಿ ತರಕಾರಿ ಅಂಗಡಿಗಳನ್ನೂ ಮುಚ್ಚಲಾಗಿದೆ. ಮತ್ತು kSRTC ಬಸ್ ನಿಲ್ದಾಣದಲ್ಲಿ ಜನಸಾಮಾನ್ಯರು ಓಡಾಡುವುದು ಕಂಡು ಬಂದಿಲ್ಲ, ಸೋಮವಾರ ಬೆಳಗ್ಗೆ 5 ಗಂಟೆವರೆಗೂ […]

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದೆ. ಭಾರತದಲ್ಲಿ ನಿನ್ನೆ ಅತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ 24,850 ಹೊಸ ಪ್ರಕರಣಗಳು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6.73 ಲಕ್ಷಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 613 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 19,268 ಸೋಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈಗ 2,44,814 ಪ್ರಕರಣಗಳು ಸಕ್ರಿಯವಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ […]

ಬಿಹಾರ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಸಿಡಿಲು ಬಡಿದು 23 ಜನರು ಬಲಿಯಾಗಿದ್ದಾರೆ. ಬಿಹಾರ ರಾಜ್ಯದ ಕೈಮುರ್, ಭೋಜ್ ಪುರ್, ಸರನ್, ಪಾಟ್ನ, ಬುಕ್ಸರ್ ಜಿಲ್ಲೆಗಳಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿಡಿಲಿನ ಅಬ್ಬರಕ್ಕೆ ಸಾವನ್ನಪ್ಪಿದ್ದವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದಾರೆ. ಬಿಹಾರದಲ್ಲಿ ಕಳೆದೊಂದು ವಾರದಿಂದ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ವಾರದಲ್ಲಿ ನೂರಕ್ಕೂ ಹೆಚ್ಚು […]

Advertisement

Wordpress Social Share Plugin powered by Ultimatelysocial