ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ […]

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ತಪ್ಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇಲೆ ಓರ್ವನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ […]

ಆಭರಣ ಪ್ರಿಯರಿಗೆ ಮತ್ತೆ ಎದುರಾಯ್ತು ಬೆಲೆ ಏರಿಕೆಯ ಶಾಕ್. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ  ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ ತಲುಪಿದೆ.  ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ ಆಗಿದೆ. ಹಾಗೆ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರವು 10 ಗ್ರಾಮ್ ಗೆ 47,160 ರೂ ಇದ್ದರೆ ಬೆಳ್ಳಿ […]

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ […]

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೋಂ ಕ್ವಾರಂಟೈನ್ ನಲ್ಲಿರುವ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವವರು ಬಸ್ ಗಳಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವ ಸಾರ್ವಜನಿಕರು ಬಿಎಂಟಿಸಿಯ ಬಸ್ ಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವುದನ್ನು ನಿಷೇಧಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ […]

ಕೊರೊನಾ ವೈರಸ್ ಗೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧಾರಿಸಿದ್ದಾರೆ. ಬೆಂಗಳೂರಿನಲ್ಲಿ  ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ದಿನೇ ದಿನೇ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ  ಸುಮಾರು 50 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಆದರಿಂದ್ದ ಮಲ್ಲೇಶ್ವರಂ ವ್ಯಾಪಾರಿಗಳು ಇಂದಿನಿಂದ ಜುಲೈ 7 ರವೆಗೆ […]

ಲೋಕಾಯುಕ್ತ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೆಎಸ್‌ಆರ್‌ಪಿಯ ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಸೋಂಕು ದೃಢವಾಗಿದೆ. ಈ ಹಿನ್ನಲೆ ಲೋಕಾಯುಕ್ತ ಸಂಸ್ಥೆಯನ್ನು ೩ದಿನ ಸೀಲ್‌ಡೌನ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ವೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ ೧೯ ಕಾಣಿಸಿಕೊಂಡಿದ್ದು, ಈ ಕಾನ್‌ಸ್ಟೆಬಲ್ ಲೋಕಾಯುಕ್ತ ಸಂಸ್ಥೆಗೂ ಬಂದಿದ್ದರು.ಹೀಗಾಗಿ ಇಬ್ಬರಿಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ೩೦ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಈಗಾಗಲೇ […]

ಔರಾದ ತಾಲೂಕಿನ ಜಂಬಗಿ ಗ್ರಾಮದ ಭವಾನಿ ಡಾಬಾ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 4.40ಲಕ್ಷ ರೂ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಸಾಗಿಸುತ್ತಿದ್ದವರಲ್ಲಿ ಇನ್ನಿಬ್ಬರು ಪರಾರಿಯಾಗಿದ್ದಾರೆ. ಬೈಕ್ ಗಳಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದು ಡಿವೈಎಸ್ ಪಿ.ಡಾ ದೇವರಾಜ್ ನೇತೃತ್ವದ ತಂಡ ದಾಳಿ ನಡೆಸಿದೆ. ಇದರಲ್ಲಿ ಶಿವಾಜಿ ರಾಥೋಡ್  ಎಂಬಾತನನ್ನು ಬಂಧಿಸಿದ್ದು, ಪ್ರಕಾಶ್ ,ರಂಗಲಾಲ್ ಎಂಬುವವರು  ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. […]

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದು. ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಸೋಂಕಿನ ವಿರುದ್ಧ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಲ್ಲಿ ಪ್ರಕರಣ ದೃಢವಾಗುತ್ತಿರುವ ಹಿನ್ನಲೆ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಬೆAಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಳವಾಗುತ್ತಾದೆ ಆದರೆ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ಕಾಲಾಟ್ಟಿದೆ. ಕಾರಾಗೃಹದಲ್ಲಿರುವ ೨೬ ಕೈದಿಗಳಿಗೆ ಸೋಂಕು ದೃಢವಾಗಿದೆ. ಇದರಲ್ಲಿ ೨೦ ವಿಚಾರಣಾಧೀನ ಕೈದಿಗಳಾಗಿದ್ದರೆ. ಉಳಿದ ೬ ಜನ ಕಾರಾಗೃಹದ ಸಿಬ್ಬಂದಿಯಾಗಿದ್ದಾರೆ.ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ.ಕೈದಿಗಳಿಗೆÀ ಕೊರೊನಾ ದೃಢವಾಗಿರುವ ಹಿನ್ನಲೆ ಕೈದಿಗಳನ್ನು ಥಣಿಸಂದ್ರ ಬಳಿ ಇರುವ ಹಜ್ ಭವನದಲ್ಲಿ ಇರಿಸಲಾಗಿದೆ. ಜೊತೆಗೆ ಕಾರಾಗೃಹದ ಇತರೆ ಕೈದಿ ಹಾಗೂ ಸಿಬ್ಬಂದಿ ಈ […]

Advertisement

Wordpress Social Share Plugin powered by Ultimatelysocial