ಬಿಬಿಎಂಪಿ ನಿಯಂತ್ರಣಾ ಕೊಠಡಿ ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ನಿನ್ನೆ ಮೊನ್ನೆ ಸುರಿದ […]

ಗಡಿಯಲ್ಲಿ ಉಗ್ರರ ಪುಂಡಾಟಿಕೆ ಮುಂದುವರೆದಿದ್ದು ಇಂದು ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ವನ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ  ಭಾರತೀಯ ಸೇನಾಪಡೆ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆಯಲ್ಲಿ ಅಡಗಿ ಕುಳಿತಿದ್ದ ಉಗ್ರರು ಭದ್ರಾತ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಸೇನಾಪಡೆಗಳು ಎನ್‌ಕೌಂಟರ್‌ ಮಾಡಿ ಇಬ್ಬರು ಉಗ್ರರ ಬಲಿಯಾಗಿದ್ದೆ. ಹತ್ಯೆಯಾದ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು. ಇನ್ನೂ ಹಲವು ಉಗ್ರರಿಗೆ ಹುಡುಕಾಟ ಕಾರ್ಯಾಚರಣೆ […]

ಭಾರತದಲ್ಲಿ ಒಂದೇ ದಿನ 7 ಸಾವಿರಕ್ಕೂ ಹೆಚ್ಚು‌ ಕೊರೋನಾ ಪ್ರಕರಣಗಳು ದೃಡಪಟ್ಟಿವೆ. ನಿನ್ನೆ ಒಂದೇ ದಿನ ದೇಶದಲ್ಲಿ 7,964 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 1,73,763ಕ್ಕೆ ಏರಿಕೆಯಾಗಿದೆ.ನಿನ್ನೆ  ಕೊರೊನಾದಿಂದ 265 ಜನ ಮೃತಪಟ್ಟಿದ್ದಾರೆ.  ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,971ಕ್ಕೆ ಏರಿಕೆಯಾಗಿದೆ. 82,370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಎಂದು ಕೇಂದ್ರ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ.ಲಾಕ್ ಡೌನ್ ಸಡಿಲಿಕೆಗೊಳಿಸಿರುವುದರಿಂದ ಕೊರೋನಾ […]

ಮುಂಬಯಿ: ಕೋವಿಡ್‌-19 ರೋಗಿಗಳಿಗೆ ಐಸೋಲೇಷನ್‌ ಕೇಂದ್ರವಾಗಿ ಬಳಸಿಕೊಳ್ಳಲು ಬಾಲಿವುಡ್‌ ನಟ ಶಾರೂಖ್‌ ಖಾನ್‌ ಅವರು ಮುಂಬಯಿಯ ಸಿಡಿ ಮಾರ್ಗ್‌ನಲ್ಲಿರುವ ತಮ್ಮ ಒಡೆತನದ ನಾಲ್ಕು ಮಹಡಿಗಳ ಕಟ್ಟಡವನ್ನು ಬಿಟ್ಟುಕೊಟ್ಟಿದ್ದರೂ, ವೈದ್ಯರ ಕೊರತೆಯಿಂದಾಗಿ ಅದು ಬಳಕೆಯೇ ಆಗದಿರುವುದು ಬೆಳಕಿಗೆ ಬಂದಿದೆ.ಶಾರೂಖ್‌ ದಂಪತಿ ಏ.24ರಂದೇ ಈ ಕಟ್ಟಡವನ್ನು ಬೃಹನ್ಮುಂಬಯಿ ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದ್ದರು. ಅಲ್ಲದೇ ಶಾರೂಖ್‌ ಅವರ ‘ಮೀರ್‌ ಫೌಂಡೇಷನ್‌’ ಎನ್‌ಜಿಒ ಇಲ್ಲಿ22 ಬೆಡ್‌ಗಳ ವ್ಯವಸ್ಥೆಯನ್ನೂ ಮಾಡಿತ್ತು. ಆದರೆ ಪಾಲಿಕೆಯ ಬೇಜವಾಬ್ದಾರಿಯಿಂದ ಇಲ್ಲಿ ವೈದ್ಯರ […]

ರಾಮನಗರ: ರಾಮನಗರದ ಜಾನಪದ ಲೋಕವು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ರಾಮನಗರ ಜಿಲ್ಲೆಯ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿದೆ. ಇಂದು ಜಾನಪದ ಲೋಕದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸುಮಾರು 110 ಜನ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿದರು. ರಾಜ್ಯದ ಬೇರೆ ಜಿಲ್ಲೆಗಳ ಜಾನಪದ ಕಲಾವಿದರಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುವುದು ಎಂದು ಜಾನಪದ ಲೋಕ ಅಡಳಿತ ಮಂಡಳಿ ತಿಳಿಸಿದೆ.

ನೊಯ್ಡಾ: ಗೌತಮ್ ಬುದ್ಧ್ ನಗರದ ಎಂಟು ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದ ಅಲ್ಲಿನ ಕೆಲ ಖಾಸಗಿ ಪ್ರಯೋಗಾಲಯಗಳು ಅವರಿಗೆ ಕೋವಿಡ್-19 ಪಾಸಿಟಿವ್ ಎಂದು ತಪ್ಪಾಗಿ ವರದಿ ನೀಡಿರುವ  ವ್ಯಕ್ತಿಗಳ ಗಂಟಲು ದ್ರವ ಮಾದರಿಗಳನ್ನು ಸರಕಾರಿ ಲ್ಯಾಬ್‍ಗಳಲ್ಲಿ ಪರೀಕ್ಷೆ ನಡೆಸಿದಾಗ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಎಂಟು ಮಂದಿಯನ್ನು ಇದೀಗ ಅವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ತಪ್ಪು ವರದಿ ನೀಡಿದ್ದ  ಖಾಸಗಿ […]

ಬೆಂಗಳೂರು: ತಳವಾರ, ಪರಿವಾರ ಮತ್ತು ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಅನುಸಾರ ರಾಜ್ಯದಲ್ಲಿಯೂ ಅಧಿಸೂಚನೆ ಹೊರಡಿಸಲು ಆದೇಶ ನೀಡಲಾಗಿದೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಕುರಿತು ಮಾಹಿತಿ ನೀಡಿ, ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿರುವ ಸಿದ್ದಿ ಸಮುದಾಯದವರನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಅನ್ವಯ ರಾಜ್ಯದಲ್ಲಿ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.ಹಲವು […]

ಮದ್ರಾಸ್: ಕೊರೊನಾವೈರಸ್ ನೆಪ ಹೇಳಿ ಹೂಡಿಕೆದಾರರಿಗೆ ಹಣ ಮರಳಿಸದೇ ಬಿಕ್ಕಟ್ಟಿಗೆ ಕಾರಣವಾಗಿರುವ ಫ್ರಾಂಕ್ಲಿನ್ ಟೆಂಪಲ್‌ಟನ್ ಮ್ಯೂಚುವಲ್ ಫಂಡ್ ಮತ್ತು ಷೇರು ನಿಯಂತ್ರಣ ಮಂಡಳಿಗೆ (ಸೆಬಿ) ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಫ್ರಾಂಕ್ಲಿನ್ ಟೆಂಪಲ್‌ಟನ್ ಅಸೆಸ್ ಮ್ಯಾನೇಜ್‌ಮೆಂಟ್, ಮ್ಯೂಚುವಲ್ ಫಂಡ್‌ನ ಟ್ರಸ್ಟಿಗಳು, ಅಧ್ಯಕ್ಷ ಸಂಜಯ್ ಸಪ್ರೆ ಸೇರಿದಂತೆ ಇತರೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ದೇಶಾದ್ಯಂತ ವಲಸೆ ಕಾಮಿರ್ಕರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದ್ದ ಶ್ರಮಿಕ ಎಕ್ಸ್​ಪ್ರೆಸ್​ ರೈಲುಗಳಲ್ಲಿ ಈವರೆಗೆ 80 ಜನರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಸುರಕ್ಷತಾ ದಳ ತಿಳಿಸಿದೆ. ದೇಶದ ವಿವಿಧ ಭಾಗಗಳಿಂದ ಮೇ 1ರಿಂದ ಮೇ 27ರವರೆಗೆ ಶ್ರಮಿಕ ಎಕ್ಸ್​ಪ್ರೆಸ್​ ರೈಲುಗಳನ್ನು ಬಿಡಲಾಗಿತ್ತು. ಈ ಅವಧಿಯಲ್ಲಿ ಒಟ್ಟಾರೆ ದೇಶಾದ್ಯಂತ 3,870 ರೈಲುಗಳು ಸಂಚರಿಸಿವೆ. ಇದರಲ್ಲಿ ಅಂದಾಜು 50 ಲಕ್ಷಕ್ಕೂ ಅಧಿಕ ಜನರು ತಮ್ಮ ಊರುಗಳಿಗೆ ತೆರಳಿದ್ದಾರೆ. ಮೇ 9 ರಿಂದ ಮೇ […]

ವಾಡಿ: ಪಟ್ಟಣದಲ್ಲಿ ಶುಕ್ರವಾರ ಅಪ್ರಾಪ್ತ ಬಾಲಕಿಯ ಮದುವೆಗೆ ಸಿದ್ಧತೆ ನಡೆದ ವೇಳೆ ದಾಳಿ ಮಾಡಿದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಚೈಲ್ಡ್ ಲೈನ್ ಸಂಘಟನೆಯವರು ಮದುವೆ ನಿಲ್ಲಿಸಿ, ಬಾಲಕಿಯನ್ನು ರಕ್ಷಿಸಿದರು. 16 ವರ್ಷದ ಬಾಲಕಿಯ ಮದುವೆ ಕಲಬುರ್ಗಿಯ 26 ವರ್ಷದ ಯುವಕನೊಂದಿಗೆ ನಿಶ್ಚಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರ ಸಹಾಯದಿಂದ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದರು. ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ನಾಗಮ್ಮ […]

Advertisement

Wordpress Social Share Plugin powered by Ultimatelysocial