ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್‌ಗೆ ೧೩೦ ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್‌ಗೆ ೨೫ ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸತತ ತೈಲ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಕೇಂದ್ರದಲ್ಲಿ ಮನಮೋಹನ್ ಸಿಂಗ್ […]

ಜುಲೈ ೫ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಜುಲೈ ೫ರಿಂದ ಶಾಲೆಯನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಆದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಆಸಕ್ತಿ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಚಿಂತನೆ ನಡೆದಿದೆ. ಈಗಾಗಲೇ ೧ರಿಂದ ೬ನೇ ತರಗತಿ ಹಾಗೂ ೬ರಿಂದ ೧೦ನೇ ತರಗತಿ ವರೆಗೂ ಶಾಲೆಗಳನ್ನು ಆರಂಭಿಸುವ ಕುರಿತು ಕೇಂದ್ರ ಸರಕಾರಿದಿಂದ […]

ಕೆಳಮಟ್ಟದ ಕಾಯಿಲೇ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಪೌರ ಕಾರ್ಮಿಕರ ಪಾತ್ರ ಅಪಾರ ಎಂದು ನಗರ ಸಭೆಯಾ ಆಯುಕ್ತ ಕಾಂತರಾಜು ಹೇಳಿದ್ದಾರೆ. ನಗರಸಭೆ ಆಯೋಜಿಸಿದ್ದ ಅರಸೀಕೆರೆ ತಾಲ್ಲೂಕು ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ಪೌರ ಕಾರ್ಮಿಕರಿಗೆ ಎನರ್ಜಿ ಡ್ರಿಂಕ್ï ಮತ್ತು ಮಾಸ್ಕ್ ವಿತರಣಾ ಮಾಡಿ ಬಳಿಕ ಮಾತನಾಡಿ ಅವರು, ಪೌರ ಕಾರ್ಮಿಕರ ಸೇವೆ ಗುರತಿದ ರೆಡ್‌ಕ್ರಾಸ್ ಸಂಸ್ಥೆಯ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭ ದಲ್ಲಿ ತಾಲ್ಲೂಕು ಕಾರ್ಯನಿರತ […]

ಯಾವುದೇ ಮಕ್ಕಳು ಕೋವಿಡ್‌ನಿಂದ ಭಯಪಡಬಾರದು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೂರನೇ ಪರೀಕ್ಷೆ ಬರೆಯುತ್ತಿದ್ದು, ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು. ಒಂದುವೇಳೆ ವಿದ್ಯಾರ್ಥಿಗಳಲ್ಲಿ ಏನಾದರೂ ಆರೋಗ್ಯದ ಸಮಸ್ಯೆ ಕಂಡುಬAದಲ್ಲಿ ಮೇಲ್ವಿಚಾರಕರು ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳು ಸಹ ಮೇಲ್ವಿಚಾರಕರಿಗೆ ತಿಳಿಸಬೇಕು. ವಿದ್ಯಾರ್ಥಿಗಳು ಅಂಜದೇ ಹೆದರದೇ […]

ತುಂಗಭದ್ರಾ ಜಲಾಶಯದಿಂದ ನೇರ ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು. ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮತ್ತು ಪಾಲಿಕೆ ಸಹಯೋಗದಲ್ಲಿ ನಗರದ ಸತ್ಯನಾರಾಯಣಪೇಟೆಯಲ್ಲಿ ನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ೧೨ ವಲಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಇನ್ನು ಮುಂದೆ ನೀರಿನ ಕೊರತೆಯಾಗುವುದಿಲ್ಲ’.ನಗರದಲ್ಲಿ ಇನ್ನೂ ೧೫ ವಲಯಗಳಿದ್ದು, ಡಿಸೆಂಬರ್ […]

ಕೊರೋನಾಗೆ ಮೈದಾನ, ಬಯಲು ಪ್ರದೇಶಗಳಲ್ಲಿ ಚಿಕಿತ್ಸೆ ನೀಡೋದಕ್ಕೆ ಮನುಷ್ಯರು ಜಾನುವಾರುಗಳಲ್ಲ ಅನ್ನೋದನ್ನ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಗುಡುಗಿದ್ದಾರೆ. ಗದಗನಲ್ಲಿ ಮಾತನಾಡಿದ ಅವರು, ಯುದ್ದೋಪಾದಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿಲ್ಲ. ಸಾರ್ವಜನಿಕರಿಗೆ ಸರ್ಕಾರದ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಎಲ್ಲಡೆ ಕೋವಿಡ್ ಆಸ್ಪತ್ರೆಗಳು ತುಂಬಿವೆ. ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲು ಸರ್ಕಾರ ಗಂಭಿರ ಚಿಂತನೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಬಯಲು, ಮೈದಾನ ಬಿಡಿ, ಸ್ಟಾರ್ ಹೋಟೆಲ್‌ಗಳನ್ನ […]

ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಎಂಟು ಮಂದಿಯ ಮೇಲೆ ಎಫ್ಐಆರ್ ದಾಖಲಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಸರ್ಕಾರ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲ್ಲೂಕಿನ 4 ಮಂದಿ ಮತ್ತು ಕನಕಪುರ ತಾಲ್ಲೂಕಿನ 4 ಮಂದಿಯ ವಿರುದ್ಧ ಎರಡು ತಾಲ್ಲೂಕಿನ ದಂಡಾಧಿಕಾರಿಗಳು ಅವರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾದವರು ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುವುದು ಮತ್ತು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗುವುದು […]

ಮೈಸೂರು ಜೆಎಸ್ ಎಸ್ ಆಸ್ಪತ್ರೆ ‌‌ಯಲ್ಲಿ ನೂತನವಾಗಿ ಪ್ರಾರಂಭಿಸಲಿರುವ ಕೋವಿಡ್ ಲ್ಯಾಬೊರೇಟರಿ ಯನ್ನು ಮುಖ್ಯಮಂತ್ರಿ ಗಳು‌ ಆನ್ ಲೈನ್ ಮೂಲಕ  ಉದ್ಘಾಟನೆ ‌ಮಾಡಿದರು. ಇಂದು  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕುಳಿತು  ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಯಲ್ಲಿ ನೂತನವಾಗಿ ಪ್ರಾರಂಭಿಸಲಿರುವ  ಕೋವಿಡ್-19 ಲ್ಯಾಬೊರೇಟರಿ ಅನ್ನು ಆನ್‍ಲೈನ್ ವಿಡಿಯೋ ಸಂವಾದದ  ಮುಖಾಂತರ ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ‌ಯಡಿಯೂರಪ್ಪ‌ ಅವರು ಉದ್ಘಾಟನಾ‌ ಮಾಡಿದರು. ಕಾರ್ಯಕ್ರಮವನ್ನು ‌ನೆರವೇರಿಸಿ  ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು  

ದಿನದಿಂದ ದಿನಕ್ಕೆ ಪೆಟ್ರೋಲ್,ಡಿಸೇಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ತೈಲ ಬೆಲೆ ಏರಿಕೆಯಿಂದ ರೈತರು,ಬಡವರಿಗೂ ತೊಂದರೆಯಾಗುತ್ತಿದೆ. ಇಂತಹ ಬೆಲೆಏರಿಕೆಯನ್ನ ನಾವು ಊಹಿಸಿರಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಬ್ಯಾರಲ್ ಗೆ ೧೩೦ ಡಾಲರ್ ಇತ್ತು ವಿಶ್ವಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್  ಬೆಲೆಯಿತ್ತು ಆದರೂ ನಾವು ೫೦/೬೦ ಕ್ಕೆ ಲೀಟರ್ ನೀಡುತ್ತಿದ್ದೆವು. ಆದರೆ ಇಂದು ಬ್ಯಾರಲ್ ಗೆ ೩೦ ಡಾಲರ್ ಬೆಲೆಯಿದೆ ಆದರೂ  ಕೇಂದ್ರ ೮೦ ರೂ […]

ಮೈ ಡ್ರೀಮ್ಸ್ ಮೆಟ್ರೋ ಖಾಸಗಿ ನ್ಯೂಸ್ ಚಾನೆಲ್‌ವೊಂದರ ಕ್ಯಾಮರಮನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಕಲಬುರಗಿ ಹೊರವಲಯದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಳಿ ಇರುವ ರೈಲ್ವೇ ಹಳಿ ಮೇಲೆ ನಡೆದಿದೆ. ಆತ್ಮಹತ್ಯೆಗೊಳಗಾಗಿರುವ ಹನುಮಂತ್‌ರಾವ್  ಮೂಲತಃ ಕಲಬುರಗಿಯವರು ಖಾಸಗಿ ಚಾನಲ್ ಒಂದರಲ್ಲಿ ಕ್ಯಾಮರ ಮೆನ್ ಆಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ವೈಯುಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹಾಗೂ ವಾಡಿ […]

Advertisement

Wordpress Social Share Plugin powered by Ultimatelysocial