ಕೊಳವೆ ಬಾವಿಯೊಂದಕ್ಕೆ ಬಿದ್ದ ಮೇಕೆ ಮರಿಯನ್ನು ದೇಶೀ ಶೈಲಿಯಲ್ಲಿ ಬಚಾವ್ ಮಾಡಲು ಮುಂದಾದ ನಾಲ್ವರ ಸಾಹಸವು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಹೌದು ಮೇಕೆ ಮರಿಯನ್ನು ರಕ್ಷಿಸಲು ಖುದ್ದು ಮುಂದಾಗುವ ಈ ನಾಲ್ವರ ಪೈಕಿ ಒಬ್ಬರು ತಾವೇ ಆ ಕೊಳವೆ ಬಾವಿಗೆ ತಮ್ಮ ಅರ್ಧಕ್ಕಿಂತ ಹೆಚ್ಚಿನ ಭಾಗದ ದೇಹವನ್ನು ಉಲ್ಟಾಮಾಡಿ ಒಳಗೆ ತೂರಿಸುತ್ತಾರೆ. ಈ ವೇಳೆ ಅವರ ಕಾಲುಗಳನ್ನು ಜೊತೆಗಿದ್ದ ಮೂವರು ಹಿಡಿದುಕೊಳ್ಳುತ್ತಾರೆ. ನಂತರ ಕೊಳವೆ ಬಾವಿಯೊಳಗೆ ತೂರಿಕೊಂಡ ಈ ವ್ಯಕ್ತಿ […]

ಖ್ಯಾತ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದೆ. ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿನೆ ನೀಡಿದರು. ಹಾಗೆಯೇ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು 5 ಕೋಟಿ ಒದಗಿಸಲಿದೆ, ಶೀಘ್ರವೇ […]

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ನ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಜೂನ್ 26ರಂದು ನಿಯಮ ಉಲ್ಲಂಘಿಸಿದ 12 ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲಾಗಿತ್ತು ಮತ್ತು ಜೂನ್ 27ರಂದು ಮತ್ತೆ 8 ಅಂಗಡಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಅಲ್ಲದೇ ಮಾಸ್ಕ್ ಧರಿಸದೇ ವ್ಯಾಪಾರ ನಡೆಸಿದ್ದಾರೆ. ಎಂಬ ಆರೋಪದ ಮೇಲೆ ಒಟ್ಟು 23 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. […]

ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜಿಲ್ಲೆಗೆ 100 ಮಿ.ಮೀ ನಿಂದ 115 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ನದಿಗಳು ಅಥವಾ ಸಮುದ್ರಕ್ಕೆ ಹೋಗದಂತೆ ನಾಗರಿಕರು ಕಾಳಜಿ ವಹಿಸಬೇಕು. ಅಪಾಯಕಾರಿ ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು, […]

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಪ್ರಶ್ನಿಸಿದ್ದಾರೆ. ದೇಶದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಮಾತನಾಡುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಆರೋಪಿಸುತ್ತಿರುವ ರಾಹುಲ್ ಗಾಂಧಿ, ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗಿನ ವಿವಾದ ಬಗ್ಗೆ ಕೆಲ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರವನ್ನು ಬಯಸಿದ್ದಾರೆ. ಪ್ರಧಾನಿ ಅವರು ಪ್ರತಿ ತಿಂಗಳು ನಡೆಸುವ ಮನ್ ಕಿ ಬಾತ್ […]

ಪಂಜಾಬ್ ಸಿಎಂ ಅಮರೀಂದರ್‌ ಹುತಾತ್ಮರಾದ ವೀರ ಸೈನಿಕನಿಗೆ ನಮಸ್ಕರಿಸುತ್ತೇನೆ ಮತ್ತು  ಅವರ ಕುಟುಂಬಕ್ಕೆ ಸಂತಾಪ ತಿಳಿಸುತ್ತೇನೆ ಎಂದು ಹೇಳಿದ್ದಾರೆ . ಭಾರತ- ಚೀನಾ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಅವರು ಪಟಿಯಾಲ ಜಿಲ್ಲೆಯ ಮರ್ದಾಹೇರಿ ಗ್ರಾಮಕ್ಕೆ ಸೇರಿದವರು. ಇವರ ಕುಟುಂಬಕ್ಕೆ50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. ಹುತಾತ್ಮರಾದ ಸುದ್ದಿ ಕೇಳಿ ಬೇಸರವಾಯಿತು, ಸೈನಿಕನ ಕುಟುಂಬಕ್ಕೆ ರಾಜ್ಯಸರ್ಕಾರ ಸಾಧ್ಯವಿರುವ […]

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಕೊರೊನಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸಿದ್ದಾರೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ. ಈ ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.  

ಮಾಸ್ಕ್ ಧರಿಸಿರಬೇಕು,ಸ್ಯಾನಿಟೈಸರ್ ಬಳಕೆ ಮಾಡಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೊರೊನಾ ನಿಯಂತ್ರಿಸಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಇಲ್ಲಿ ಒಬ್ಬ ಮಹಿಳೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಅವಾಂತರ ಸೃಷ್ಟಿ ಮಾಡಿದ್ದಾಳೆ. ಯಾವ ರೀತಿ ಅಂತ ನೀವೆ ನೋಡಿ.  

ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕಳೆದ ಒಂದೇ ದಿನದಲ್ಲಿ ಮೊದಲ ಬಾರಿಗೆ ಹೆಚ್ಚು ಸೋಂಕು ಪತ್ತೆಯಾಗಿದೆ. 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್’ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ಏರಿಕೆಯಾಗಿದೆ, ಈ ಪೈಕಿ  3,09,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,03,051 ಮಂದಿ ಸೋಂಕಿನಿಂದ […]

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ಬ್ಯಾಂಕ್ ಗೆ ಹೋಗಬೇಕಾಗಿಲ್ಲ. ಈ ಖಾತೆಯನ್ನು ಇ-ಕೆವೈಸಿ ಮತ್ತು ವಿಡಿಯೋ ಪರಿಶೀಲನೆಯ ಮೂಲಕ ತೆರೆಯಬಹುದು ಎಂದು ತಿಳಿಸಿದೆ. ಹಾಗೆಯೇ ಡಿಜಿಟಲ್ ಉಳಿತಾಯ ಖಾತೆಯು ವರ್ಚುವಲ್ ಡೆಬಿಟ್ ಕಾರ್ಡ್‌ನೊಂದಿಗೆ ಬರುತ್ತದೆ. ಇದರ ಸಹಾಯದಿಂದ ಗ್ರಾಹಕರಿಗೆ 100 ಕ್ಕೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial