ಪಂಜಾಬ್ ಸಿಎಂ ಅಮರೀಂದರ್‌ ಹುತಾತ್ಮರಾದ ವೀರ ಸೈನಿಕನಿಗೆ ನಮಸ್ಕರಿಸುತ್ತೇನೆ ಮತ್ತು  ಅವರ ಕುಟುಂಬಕ್ಕೆ ಸಂತಾಪ ತಿಳಿಸುತ್ತೇನೆ ಎಂದು ಹೇಳಿದ್ದಾರೆ . ಭಾರತ- ಚೀನಾ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಅವರು ಪಟಿಯಾಲ ಜಿಲ್ಲೆಯ ಮರ್ದಾಹೇರಿ ಗ್ರಾಮಕ್ಕೆ ಸೇರಿದವರು. ಇವರ ಕುಟುಂಬಕ್ಕೆ50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. ಹುತಾತ್ಮರಾದ ಸುದ್ದಿ ಕೇಳಿ ಬೇಸರವಾಯಿತು, ಸೈನಿಕನ ಕುಟುಂಬಕ್ಕೆ ರಾಜ್ಯಸರ್ಕಾರ ಸಾಧ್ಯವಿರುವ […]

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಕೊರೊನಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸಿದ್ದಾರೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ. ಈ ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.  

ಮಾಸ್ಕ್ ಧರಿಸಿರಬೇಕು,ಸ್ಯಾನಿಟೈಸರ್ ಬಳಕೆ ಮಾಡಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೊರೊನಾ ನಿಯಂತ್ರಿಸಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಇಲ್ಲಿ ಒಬ್ಬ ಮಹಿಳೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಅವಾಂತರ ಸೃಷ್ಟಿ ಮಾಡಿದ್ದಾಳೆ. ಯಾವ ರೀತಿ ಅಂತ ನೀವೆ ನೋಡಿ.  

ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕಳೆದ ಒಂದೇ ದಿನದಲ್ಲಿ ಮೊದಲ ಬಾರಿಗೆ ಹೆಚ್ಚು ಸೋಂಕು ಪತ್ತೆಯಾಗಿದೆ. 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್’ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ಏರಿಕೆಯಾಗಿದೆ, ಈ ಪೈಕಿ  3,09,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,03,051 ಮಂದಿ ಸೋಂಕಿನಿಂದ […]

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ಬ್ಯಾಂಕ್ ಗೆ ಹೋಗಬೇಕಾಗಿಲ್ಲ. ಈ ಖಾತೆಯನ್ನು ಇ-ಕೆವೈಸಿ ಮತ್ತು ವಿಡಿಯೋ ಪರಿಶೀಲನೆಯ ಮೂಲಕ ತೆರೆಯಬಹುದು ಎಂದು ತಿಳಿಸಿದೆ. ಹಾಗೆಯೇ ಡಿಜಿಟಲ್ ಉಳಿತಾಯ ಖಾತೆಯು ವರ್ಚುವಲ್ ಡೆಬಿಟ್ ಕಾರ್ಡ್‌ನೊಂದಿಗೆ ಬರುತ್ತದೆ. ಇದರ ಸಹಾಯದಿಂದ ಗ್ರಾಹಕರಿಗೆ 100 ಕ್ಕೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು […]

ಕೊರೊನಾವೈರಸ್ ಭೀತಿ ನಡುವೆಯೇ ಮದುವೆ ಸಮಾರಂಭಕ್ಕೆ 50ಕ್ಕಿಂತ ಹೆಚ್ಚು ಮಂದಿ ಅತಿಥಿಗಳನ್ನು ಆಹ್ವಾನಿಸಿದ್ದರು. ಈ ಕುರಿತಂತೆ ಕುಟುಂಬಕ್ಕೆ ಜಿಲ್ಲಾಡಳಿತ 6 ಲಕ್ಷಕ್ಕಿಂತಲೂ ಹೆಚ್ಚು ದಂಡ ವಿಧಿಸಿದ ಘಟನೆ ರಾಜಾಸ್ಥಾನದಲ್ಲಿ ನಡೆದಿದೆ. ಹೌದು ರಾಜಸ್ಥಾನದ ಭಿಲ್ವಾರ ಜಿಲ್ಲೆಯ ಭಡಡಾ ಮೊಹಲ್ಲಾ ನಿವಾಸಿ ಘೀಸುಲಾಲ್ ರಾಠಿ ಎಂಬವರ ಮಗನ ಮದುವೆ ಜೂನ್ 13ರಂದು ನಡೆದಿತ್ತು. ಕೊರೊನಾ ಸೋಂಕು ಹರಡುತ್ತಿರುವ ಇಂತಹ ಸಮಯದಲ್ಲಿ ಮದುವೆ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ಸರ್ಕಾರ […]

ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್ -19 ಸೋಂಕು ದೃಢವಾದ ಮಾಹಿತಿ ತಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು […]

ಸೋಯಾಬೀನ್ ಬಿತ್ತನೆ ಮಾಡಿ ನಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡಿ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದರು. ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ  ಸಹಕಾರ ಇಲಾಖೆ ಹಾಗೂ ಬೀದರ್ ಜಿಲ್ಲೆ, ಹಾಗೂ ಸಹಕಾರಿ ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಬೀದರ್ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ  ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿತರಣೆ ಮಾಡಿದ […]

ಅರಸೀಕೆರೆ  ನಗರದ ಶಾನುಭೋಗರ ಬೀದಿ ಹಾಗೂ ಸಂತೆಪೇಟೆ ಮೈದಾನದ ಮುಖ್ಯರಸ್ತೆ ಯನ್ನು ತಾಲ್ಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆದ್ದರಿಂದ ನಗರದ ಪ್ರಮುಖ ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುವ ಪ್ರಮುಖ ವ್ಯಕ್ತಿಗಳಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಇಬ್ಬರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಂಪೂರ್ಣ ನಗರದ 2 ಬೀದಿಗಳನ್ನು ಸೀಲ್ ಡೌನ್ ಮಾಡಲಾಗಿದೆ, ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದರು. ಕೊರೊನಾ ದಿಂದ […]

  ದೇಶದಲ್ಲಿ ಕೊರೊನ್ ಹರಡುವಿಕೆಯು ವೇಗ ಪಡಿದುಕೊಂಡಿದ್ದು, ಕಳೆದ ೨೪ ಘಂಟೆಯಲ್ಲಿ ೧೭೨೯೬ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇದು ಒಂದು ದಿನದಲ್ಲಿ ಗರಿಷ್ಟ ಏರಿಕೆಯಾಗಿದ್ದು . ಒಟ್ಟು ಪ್ರಕರಣಗಳು ಸಂಖ್ಯೆ ೫.೦೪ ಲಕ್ಷ ಹೆಚ್ಚಿದೆ. ದೇಶದಲ್ಲಿ ಸತತ ಏಳುನೇ ದಿನವೂ ೧೪ ಸಾವಿರಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ದೃಢಪಟ್ಟಿವೆ. ಸಾವಿನ ಸಂಖ್ಯೆ ೧೫ ೩೦೧ ಕ್ಕೆ ಏರಿಕೆಯಾಗಿದೆ.

Advertisement

Wordpress Social Share Plugin powered by Ultimatelysocial