ಬಾಲಿವುಡ್‌ನ ಖ್ಯಾತ ಕೊರಿಯೋಗ್ರಾಫರ್ ಸರೋಜ್ ಖಾನ್ ತಡರಾತ್ರಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಸರೋಜ್ ಖಾನ್ ಜೂನ್ ೧೭ರಲ್ಲಿ ಮುಂಬೈನ ಗುರುನಾನಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಿನ್ನೆ ರಾತ್ರಿ ಹೃದಯಾಘಾತ ಸಂಭವಿಸಿದ್ದು ಅವರು ಕೊನೆಯುಸಿರೆಳೆದಿದ್ದಾರೆ. ೧೯೭೨ ರಲ್ಲಿ ತೆರೆಕಂಡ ನಾಮ್ ಸಿನಿಮಾಗೆ ನೃತ್ಯ ಸಂಯೋಜನೆ ಮಾಡುವ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದ ಸರೋಜ್ ಖಾನ್ ಸಾವಿರಾರು ಹಾಡುಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಮೂರು ಬಾರಿ ರಾಷ್ಟç ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಪುನೀತ್ ರಾಜಕುಮಾರ್ ನರ‍್ಮಾಣದ ‘ಲಾ’ ಚಿತ್ರವು ಇದೇ ತಿಂಗಳ ೧೭ರಂದು ಅಮೇಜಾನ್ನಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಾಗಿಣಿ ಈ ಹಿಂದೆ ಕೆಲವು ಜಾಹೀರಾತುಗಳಲ್ಲಿ ಮತ್ತು ರಚಿತಾ ರಾಮ್ ನಿರ್ಮಾಣದ ‘ರಿಷಭ ಪ್ರಿಯ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದರು. ಈಗ ‘ಲಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರಾಗಿಣಿಗೆ ರೊಮ್ಯಾಂಟಿಕ್ ಸಿನಿಮಾ […]

ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಇಂದಿನಿAದ ಜುಲೈ ೧೫ರವರೆಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ೧೭ ದೇಶಗಳಿಗೆ ತನ್ನ ೫೫೬ ವಿಮಾನಗಳನ್ನು ಕಳುಹಿಸಲಿದೆ. ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಏರ್ ಇಂಡಿಯಾದ ೧೭೦ ವಿಮಾನಗಳು ಹಾರಾಟ ನಡೆಸಲಿದ್ದು, ಕೆನಡಾ, ಅಮೆರಿಕಾ, ಇಂಗ್ಲೆAಡ್, ಕೀನ್ಯಾ, ಶ್ರೀಲಂಕಾ, ಫಿಲಿಪೈನ್ಸ್, ಕಿರ್ಗಿಸ್ತಾನ್, ಸೌದಿ ಅರೇಬಿಯಾ, ಬಾಂಗ್ಲಾದೇಶ, ಥಾಯ್ ಲ್ಯಾಂಡ್, ದಕ್ಷಿಣ ಆಫ್ರಿಕಾ, ರಷ್ಯಾ, ಆಸ್ಟೆçÃಲಿಯಾ, ಮ್ಯಾನ್ಮಾರ್ ಸೇರಿದಂತೆ ಒಟ್ಟು ೧೭ ರಾಷ್ಟçಗಳಲ್ಲಿ […]

ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್‌ಗೆ ಭಾರತದಲ್ಲೇ ಲಸಿಕೆ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಿದ ಭಾರತೀಯ ಔಷಧಿ ಸಂಶೋಧನಾ ಮಂಡಳಿ ಐಸಿಎಂಆರ್, ಆಗಸ್ಟ್ ೧೫ರೊಳಗೆ ಔಷಧಿ ಬಿಡುಗಡೆ ಮಾಡೋದಕ್ಕೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಐಸಿಎಂಆರ್ ಫಾಸ್ಟ್ ಟ್ರಾಕ್ ಟ್ರಯಲ್‌ಗೆ ಮುಂದಾಗಿದೆ. ಜುಲೈ ೭ರಿಂದ ಕ್ಲಿನಿಕಲ್ ಟ್ರಯಲ್ ಶುರುವಾಗಲಿದೆ. ಭಾರತ್ ಬಯೋಟೆಕ್ ಹಾಗೂ ಐಸಿಎಂಆರ್ ಜಂಟಿಯಾಗಿ ಕೋವ್ಯಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ […]

ರಾಜಕೀಯ ಕಾರಣಗಳಿಗಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಆರೋಪಿಸಿದ್ದಾರೆ. ಲಕ್ನೋದಲ್ಲಿರುವ ಸಿಬಿಐಯ ವಿಶೇಷ ಕೋರ್ಟ್ಗೆ ಗುರುವಾರ ಖುದ್ದು ಹಾಜರಾಗಿ ನೀಡಿದ ಹೇಳಿಕೆಯಲ್ಲಿ ಕೇಂದ್ರದ ಮಾಜಿ ಸಚಿವೆ ಈ ಅಂಶ ಪ್ರಸ್ತಾವಿಸಿದ್ದಾರೆ. ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ರಾಜಕೀಯ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಕೇಂದ್ರ ತನಿಖಾ ಸಂಸ್ಥೆ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ವಿರುದ್ಧ ಸಾಕ್ಷ್ಯವಿದೆ ಎಂದಿರುವುದೇ ಸುಳ್ಳು ಎಂದು ದೂರಿದರು. ತಾನು […]

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನ ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.  ಬಾಲಬ್ರೂಯಿಯಲ್ಲಿ ಐಸಿಯು  ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಆರೋಗ್ಯ ಸಚಿವರು ಚಾಲನೆ ನೀಡಿದರು. ನಂತರ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.  

ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ […]

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ತಪ್ಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇಲೆ ಓರ್ವನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ […]

ಆಭರಣ ಪ್ರಿಯರಿಗೆ ಮತ್ತೆ ಎದುರಾಯ್ತು ಬೆಲೆ ಏರಿಕೆಯ ಶಾಕ್. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ  ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ ತಲುಪಿದೆ.  ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ ಆಗಿದೆ. ಹಾಗೆ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರವು 10 ಗ್ರಾಮ್ ಗೆ 47,160 ರೂ ಇದ್ದರೆ ಬೆಳ್ಳಿ […]

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ […]

Advertisement

Wordpress Social Share Plugin powered by Ultimatelysocial