ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಮತ್ತೆ 8 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದಾವಣಗೆರೆಯಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಪತ್ತೆಯಾಗಿರುವ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳ ಪೈಕಿ ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 3, ಬೆಂಗಳೂರು ಹಾಗೂ […]

ಮಾರಣಾಂತಿಕ ಕೊರೋನಾ ವೈರಸ್‌ ವಿರುದ್ಧ ಹೋರಾಡುವ ಸಲುವಾಗಿ ಚರ್ಚಿಸಲು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಒಂದಾಗಲಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸಂಬಂಧಿಸಿದಂತೆ ಚರ್ಚಿಸಲು ಸಿಎಂ ಬಿಎಸ್‌ವೈ ಭೇಟಿಗೆ ಸಿದ್ದರಾಮಯ್ಯ ಅವರು ಅವಕಾಶ ಕೇಳಿ ಪತ್ರ ಬರೆದಿದ್ದರು. ಈ ಹಿನ್ನೆಲೆ ಇಂದು ಸಿಎಂ ಕಛೇರಿಯಿಂದ ಭೇಟಿಗೆ ಅನುಮತಿ ದೊರೆತಿದ್ದು, ನಾಳೆ ಬೆಳಗ್ಗೆ 11-30 ಕ್ಕೆ ಸಿಎಂ ಗೃಹ […]

ಲಾಕ್​​ಡೌನ್ ಸಂಕಷ್ಟಕ್ಕೆ ಸಿಲುಕಿದವರ ನೆರವಿಗಾಗಿ‌‌ ಘೋಷಿಸಿದ ವಿಶೇಷ ಪ್ಯಾಕೇಜ್‌ನಲ್ಲಿ ರೈತ ಸಮುದಾಯಕ್ಕೆ ನಿರೀಕ್ಷಿತ ಆದ್ಯತೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತವಾದ ಹಿನ್ನೆಲೆ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ನಂತರ ಕೃಷಿಕ್ಷೇತ್ರದ ಸಮಸ್ಯೆಗಳು, ಕೈಗೊಳ್ಳಬೇಕಾದ ಪರಿಹಾರಗಳ ಕುರಿತು ಚರ್ಚಿಸಲು ಇಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತ ಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ […]

ಕೊರೊನಾ ವಿರುದ್ಧದ ಹೋರಾಟಕ್ಕೆ 200 ರೂ. ದೇಣಿಗೆ ನೀಡಿ ನನ್ನ ಜೊತೆ ಡ್ಯಾನ್ಸ್ ಮಾಡುವ ಅವಕಾಶ ಪಡೆಯಿರಿ ಎಂದು ನಟಿ ಶ್ರೀಯಾ ಶರಣ್ ಅವರು ಹೇಳಿದ್ದಾರೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಇಡೀ ದೇಶವೇ ಮಗ್ನವಾಗಿದೆ. ಹೀಗಿರುವಾಗ ಕೆಲ ನಟ-ನಟಿಯರು ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಕೈ ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೆಲವರು ಹಣದ ರೂಪದಲ್ಲಿ ಸಹಾಯ ಮಾಡಿದರೆ, ಮತ್ತೆ ಕೆಲವರು ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರ ನೀಡುವ ಮೂಲಕ […]

ಬಾಲಿವುಡ್ ಖ್ಯಾತ ನಟಿ ಪರಿಣಿತಿ ಚೋಪ್ರಾ ಹೊಸ ಪ್ರಯತ್ನಕ್ಕೆ ಕೈಹಾಕಿದ್ದು, ಬಡವರಿಗೆ ಸಹಾಯ ಮಾಡಿದವರಿಗೆ ತಮ್ಮ ಜೊತೆ ಕಾಫಿ ಕುಡಿಯುತ್ತಾ ಹರಟೆ ಹೊಡೆಯೋ ಚಾನ್ಸ್ ಸಿಗುತ್ತೆ ಎಂದಿದ್ದಾರೆ. ಹೌದು. ಇಡೀ ದೇಶವೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಟಿ ಪರಿಣಿತಿ ಚೋಪ್ರಾ ಅಬಿಮಾನಿಗಳಿಗೆ ಒಂದು ಸ್ಪೆಷಲ್ ಅವಕಾಶ ನೀಡಿದ್ದಾರೆ. ಯಾರು ಬಡವರಿಗೆ, ದಿನಗೂಲಿ ನೌಕರರಿಗೆ ಉಚಿತವಾಗಿ ದಿನಸಿ ಕಿಟ್ ವಿತರಣೆ ಮಾಡತ್ತಾರೋ ಅವರೊಂದಿಗೆ ಪರಿಣಿತಿ ಚೋಪ್ರಾ […]

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬಹುರಾಷ್ಟ್ರೀಯ ಕಂಪೆನಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾಗಿರುವ ಪರಿಣಾಮ ಮಕ್ಕಳು ಸಹಿತ 10 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯಂಬುಲೆನ್ಸ್, ಅಗ್ನಿಶಾಮಕ ದಳದ ಯಂತ್ರಗಳು ಹಾಗೂ ಪೊಲೀಸರು ರಾಸಾಯನಿಕ ಸ್ಥಾವರದತ್ತ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಆರ್‌ಆರ್ ವೆಂಕಟಪುರAನಲ್ಲಿರುವ ಎಲ್‌ಜಿ ಪಾಲಿಮರ್ಸ್ ಇಂಡಿಯಾ ಪ್ರೈ ಲಿ.ನ ಬಳಿ ಮನೆಗಳಿದ್ದು, ಇಲ್ಲಿನ ನಿವಾಸಿಗಳ ಕಣ್ಣುಗಳಲ್ಲಿ ಉರಿ […]

ವಿಶಾಖಪಟ್ಟಣಂನಲ್ಲಿ ಪಾಲಿಮರ್ ವಿಷ ಅನಿಲ ಸೋರಿಕೆ ಪ್ರಕರಣ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಟೀಮ್ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದಾಗಿರುವ ಬಗ್ಗೆ ಮಾಹಿತಿಗಳನ್ನು ಪಡೆದಿರುವ ಪ್ರಧಾನಿ ಮೋದಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಮೀಟಿಂಗ್ನಲ್ಲಿ ಗೃಹ ಮಂತ್ರಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇನ್ನಿತರ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ವಿಷ ಅನಿಲ […]

ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು .ಮಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ವ್ಯವಸ್ಥೆಯನ್ನ ಮಾಡಲಾಗುತ್ತಿದೆ . ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಬಾಗಲಕೋಟೆಯಲ್ಲಿ ಒಟ್ಟಾರೆ 13 ಕೇಸ್​ಗಳು, ಬೆಂಗಳೂರಿನಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಹಾಗೂ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗ್ತಿದ್ದ ನಾ ನಿನ್ನ ಬಿಡಲಾರೆ ಧಾರಾವಾಹಿಯ ನಾಯಕಿ ನಂದಿನಿ ತಮ್ಮ ಹಳೆಯ ನೆನಪಿನ ಬುತ್ತಿಯನ್ನ ಇನ್ ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಆಕೆ ಇಂಡಸ್ಟ್ರಿಗೆ ಬರೋ ಮೊದಲು ಫಸ್ಟ್ ಪ್ರಾಜೆಕ್ಟ್ ಗಾಗಿ ಸಾಕಷ್ಟು ತಯಾರಿ ನಡೆಸಿದ್ರು. ಅದಕ್ಕಾಗಿ ಅವ್ರು ಟ್ರೆಡಿಷನ್ ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ರು. ಅಪ್ಪನ ಲ್ಯಾಪ್ ಟಾಪ್ ಅನ್ನ ಓಪನ್ ಮಾಡಿದಾಗ ನಂದಿನಿಗೆ ಹಳೆಯ ಫೋಟೋಗಳು ಸಿಕ್ಕಿವೆ. ಆ ನೆನಪುಗಳ ಬುತ್ತಿಯನ್ನ ಇದೀಗ ತಮ್ಮ […]

Advertisement

Wordpress Social Share Plugin powered by Ultimatelysocial