ದೇಶದಲ್ಲಿ ಮಾರಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಲಾಕ್ ಡೌನ್‌ನ್ನು ಮೇ.೩ರವರೆಗೆ ವಿಸ್ತರಿಸಲಾಗಿದೆ. ಆದರೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಯಾಕೆ ಆಗುತ್ತಿಲ್ಲ. ವಾಹನಗಳ ಸಂಚಾರ ಹೆಚ್ಚಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದೆ. ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ದಬ್ಬಾಳಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ […]

ಕೋವಿಡ್ ೧೯ ಲಾಕ್‌ಡೌನ್ ಮಧ್ಯೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ಇಂದಿನಿಂದ ಪುನರಾರಂಭಗೊಂಡಿದೆ. ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಭಾರತವು ಇಂದಿನಿಂದ ಕೊರೋನಾವೈರಸ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸುತ್ತಿರುವ ಭಾಗವಾಗಿ ಈ ಉಪಕ್ರಮ ಜಾರಿಯಾಗಿದೆ. ಮಾರ್ಚ್ ೨೪ ರಂದು ೨೧ ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಣೆಯಾದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು. ಮುಂಬೈನ ವಾಶಿ, ನಾಗ್ಪುರದ ಬೋರ್ಖೆಡಿ, […]

ಕೋವಿಡ್-೧೯ ಸವಾಲಿನ ಮಧ್ಯೆ ಭಾರತದ ಇಂಧನ ಸುರಕ್ಷತೆಯನ್ನು ಕಾಪಾಡಲು ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮೇ ಮೊದಲ ವಾರದಲ್ಲಿ ಮಂಗಳೂರು ಮತ್ತು ಪಾದೂರು ಕಚ್ಚಾತೈಲ ಸಂಗ್ರಹಾರಗಳನ್ನು ಭರ್ತಿ ಮಾಡುವಂತೆ ಕೇಂದ್ರ ಪೇಟ್ರೋಲಿಯಂ ಸಚಿವಾಲಯ ನಿರ್ಧರಿಸಿದೆ.

ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜೂನ್ ೩೦ರವರೆಗೆ ಎಟಿಎಂ ಸೇವಾಶುಲ್ಕ ಮನ್ನಾ ಮಾಡಲಾಗುವುದು. ಮೂರು ತಿಂಗಳವರೆಗೆ ಯಾವುದೇ ಬ್ಯಾಂಕ್ ಎಟಿಎಂನಿAದ ಹಣ ಪಡೆದುಕೊಂಡರೂ ಗ್ರಾಹಕರಿಗೆ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಹೇಳಿದ್ದರು. ಅಂತೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಕೆಲವು ಬ್ಯಾಂಕುಗಳು ಜೂನ್ ೩೦ರವರೆಗೆ ಎಟಿಎಂಗಳಲ್ಲಿ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸದಿರಲು ನಿರ್ಧರಿಸಿವೆ. ಈಗಾಗಲೇ ಎಸ್.ಬಿ.ಐ. ಮೆಟ್ರೋ ನಗರಗಳಲ್ಲಿ ಮೂರು ಉಚಿತ […]

ಬೆಂಗಳೂರು.ಏ.20:  ಕೆಳ ರ‍್ಯಾಂಕಿಂಗ್ ಆಟಗಾರರಿಗೆ ನೆರವು ನೀಡಲು ಸ್ಟಾರ್ ಆಟಗಾರರಾದ ರೋಜರ್ ಫೆಡರರ್, ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮುಂದೆ ಬಂದಿದ್ದಾರೆ. ಪುರುಷರ ಟೆನಿಸ್ ಆಡಳಿತ ಸಂಸ್ಥೆ ಎಟಿಪಿ ಸ್ಲಾಂ ಟೆನಿಸ್ ಸಂಘಟಕರ ಜತೆಗೂಡಿ ದತ್ತಿನಿಧಿಯೊಂದನ್ನು ಆರಂಭಿಸಲು ಯೋಜನೆ ನಿರೂಪಿಸಿದ್ದಾರೆ.      

ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ರ‍್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಗುಂಪು ಗುಂಪಾಗಿ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಪಾದರಾಯನಪುರವನ್ನು ಸಂಪರ‍್ಣ ಸೀಲ್ ಡೌನ್ ಮಾಡಲಾಗಿದ್ದು, ರಸ್ತೆ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಆ ವೇಳೆ ಕೊರೊನಾ ಸೋಂಕಿತ ೫೯ ಮಂದಿಯನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳು ಮುಂದಾದಾಗ ಆ ವೇಳೆ ಪುಂಡರು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಹಾಕಿದ ಚೆಕ್ ಪೋಸ್ಟ್, […]

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನತೆ ತಲ್ಲಣಗೊಂಡಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಆತಂಕ ತಂದೊಡ್ಡಿದೆ. ರಾಜ್ಯದಲ್ಲಿ ಇಂದು ಮತ್ತೆ ಐವರಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಈ […]

ಬೆಂಗಳೂರು, ನಗರದ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ […]

ಬೆಂಗಳೂರು.ಏ.20: ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಡಿಕೆ ಶಿವಕುಮಾರ್ ಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ  ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖಂಡರು, ನಾಯಕರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಎನ್ ಎ ಹ್ಯಾರಿಸ್, ಜಮಿರ್ ಅಹಮದ್ ಖಾನ್, […]

ರಾಯಚೂರು: ಕೊರೋನಾ ಮಹಮಾರಿಗೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉಳ್ಳವರು ನಾವಾಯ್ತು ನಮ್ಮ ಮನೆಯಾಯ್ತು ಎಂದು ಕುಳಿತಿರುವಾಗ ಇಲ್ಲೊಬ್ಬ ಜನನಾಯಕಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಪ್ರತಿ ಹಳ್ಳಿ-ಹಳ್ಳಗಳಿಗೆ ತೆರಳಿ ಹಸಿದ ಕುಟುಂಬಗಳಿಗೆ ಅಕ್ಕಿ, ಬೆಳೆ, ಸಕ್ಕರೆ, ಎಣ್ಣೆ ಹಾಗೂ ತರಕಾರಿಗಳನ್ನು ಸಹ ನೀಡುವ ಮೂಲಕ ನೊಂದವರ ಬದುಕಿಗೆ ಆಶಾಕಿರಣವಾಗುತ್ತಿದ್ದಾರೆ. ಇವರು ಬೇರೆ ಯಾರೂ ಅಲ್ಲ ಅವರು ದಿವಂಗತ ಮಾಜಿ ಸಂಸದ ಎ.ವೆಂಕಟೇಶ ನಾಯಕರ […]

Advertisement

Wordpress Social Share Plugin powered by Ultimatelysocial