ಪಾಕ್ ಸರ್ಕಾರದ ನೀಚ ಮನಸ್ಥಿತಿ ಪ್ರತಿಬಿಂಬಿಸಿದೆ!

ಬೆಂಗಳೂರು,ಡಿಸೆಂಬರ್ 17: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವ್‌ ಭುಟ್ಟೋ ಜರ್ದಾರಿ ಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನೋಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದರು.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪಾಕಿಸ್ಥಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ಥಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸುವಂತಾಗಲು ಭಾರತದ ಪ್ರಧಾನ ಮಂತ್ರಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು ಕೋರುತ್ತಿರುವ ಇಂತಹ ಸಂದರ್ಭದಲ್ಲಿ ಪಾಕಿಸ್ಥಾನದ ವಿದೇಶಾಂಗ ಸಚಿವರಿಂದ ಇಂತಹ ಹೇಳಿಕೆ ನಾಯಿಬಾಲ ಡೊಂಕು ಎಂಬಂತಹ ಪ್ರವೃತ್ತಿಯನ್ನು ಸಾಬೀತು ಪಡಿಸುತ್ತಿದೆ.ವಿಶ್ವದ ಅತ್ಯುಗ್ರ ಒಸಾಮ ಬಿನ್‌ ಲಾಡೆನ್‌ ಎಲ್ಲಿ ಅಡಗಿ ಕುಳಿತಿದ್ದ, ಮತ್ತು ಅವನನ್ನು ಪೋಷಿಸುತ್ತಿದ್ದವರು ಯಾರು ಹಾಗೂ ವಿಶ್ವದ ಬಹುತೇಕ ಉಗ್ರ ಸಂಘಟನೆಗಳಿಗೆ ತವರು ನೆಲೆ ಪಾಕಿಸ್ಥಾನ ಎಂದು ಇಡೀ ಜಗತ್ತಿಗೆ ತಿಳಿದಿರುವಾಗ ನರೆಂದ್ರ ಮೋದಿಯಂತಹ ವಿಶ್ವ ನಾಯಕರ ಬಗ್ಗೆ ಟೀಕೆ ಮಾಡಿದರೆ ಜಗತ್ತಿನ ಕಣ್ಣಿನಲ್ಲಿ ತಾನು ದೊಡ್ಡ ವ್ಯಕ್ತಿಯಾಗುತ್ತೇನೆಂದು ಭಾವಿಸಿರುವಂತೆ ಕಾಣುತ್ತಿದೆ.ದಿನಾಂಕ 18 ಫೆಬ್ರವರಿ 2018 ರಲ್ಲಿ ಅಮೆರಿಕದ ವಾಷಿಂಗ್ಟನ್‌ ನಲ್ಲಿ “ಪಾಕಿಸ್ಥಾನದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ” ಎಂದು ಹಾಗೂ ದಿನಾಂಕ 7 ಮಾರ್ಚ್‌ 2019 ರಲ್ಲಿ “ಪಾಕಿಸ್ಥಾನದ ಮೂರು ಸಚಿವರು ಉಗ್ರ ಸಂಘಟನೆಗಳ ಜೊತೆಗೆ ಸಂಬಂದ ಹೊಂದಿದ್ದಾರೆ” ಎಂದು ಹೇಳಿಕೆ ನೀಡಿರುವುದನ್ನು ಮರೆತಂತೆ ಕಾಣುತ್ತಿದೆ. ನರೆಂದ್ರ ಮೋದಿಯವರ ಕುರಿತಾದ ಕೀಳು ಮಟ್ಟದ ಇಬ್ಬಗೆತನದ ಅವರ ಹೇಳಿಕೆ ಭಾರತ ದೇಶಕ್ಕೆ ಮಾಡಿದ ಅವಮಾನ, ದೇಶಪ್ರೇಮಿ ಭಾರತೀಯರು ಇದನ್ನು ಖಂಡಿಸಿ ಇದರ ವಿರುದ್ದ ಹೋರಾಟ ಮಾಡಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Realizing Love -- Signs You Are in Love

Sun Dec 18 , 2022
Manifesting appreciate can seem as an impossible activity, especially if you have been injure in the past and have absolutely doubts regarding the potential of finding true love. But the truth is, you can manifest a loving relationship by putting out great vibes and creating a healthy mindset. In this […]

Advertisement

Wordpress Social Share Plugin powered by Ultimatelysocial