ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮೋಹನ್ ಲಿಂಬಿಕಾಯಿ ಕಣಕ್ಕೆ..?

ಬೆಂಗಳೂರು,ಮೇ16- ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಬಿಜೆಪಿ ಹಿರಿಯ ಮುಖಂಡ ಮೋಹನ್ ಲಿಂಬಿಕಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಈಗಾಗಲೇ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಅವರು ಕಳೆದ ಒಂದು ವರ್ಷದಿಂದಲೇ ಭರ್ಜರಿ ಸಿದ್ದತೆಯನ್ನು ನಡೆಸಿದ್ದರು. ಮತದಾರರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ್ದರು.

ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಹಾಲಿ ವಿಧಾನಪರಿಷತ್ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವುದರಿಂದ ಮೋಹನ ಲಿಂಬಿಕಾಯಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.
ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಲಿಂಬಿಕಾಯಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕೆಂದು ಅವರ ಹಿಂಬಾಲಕರು ಒತ್ತಡ ಹಾಕಿದ್ದಾರೆಂದು ತಿಳಿದುಬಂದಿದೆ.

ಒಂದು ವೇಳೆ ಬಸವರಾಜ ಹೊರಟ್ಟಿ ಅವರು ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಬಾರದು ಎಂದು ನಿಷ್ಠಾವಂತ ಕಾರ್ಯಕರ್ತರು ಒತ್ತಡದ ತಂತ್ರ ಅನುಸರಿಸಿದ್ದಾರೆ.

ಕಾರ್ಯಕರ್ತರ ಒತ್ತಡಕ್ಕೆ ಸಿಲುಕಿರುವ ಲಿಂಬಿಕಾಯಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ತಮ್ಮದು ಪಕ್ಷ ವಿರೋಧಿ ಚಟುವಟಿಕೆಯಲ್ಲ. ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹಾಗೂ ಸಮಾನಮನಸ್ಕರ ಒತ್ತಡಕ್ಕೆ ಮಣಿದು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಇದು ಬಸವರಾಜ ಹೊರಟ್ಟಿ ಅವರ ವಿರುದ್ಧ ಹೋರಾಟವಲ್ಲ. ನನ್ನದು ಸೈದ್ದಾಂತಿಕ ಹೋರಾಟ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೋರ್ವ ನಟಿಯ ನಿಗೂಢ ಸಾವು- ಇನ್‌ಸ್ಟಾದಲ್ಲಿ ಖುಷಿ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ನೇಣು! ಬಾಯ್‌ಫ್ರೆಂಡ್‌ ಜತೆ ಆದದ್ದೇನು?

Mon May 16 , 2022
ಕೋಲ್ಕತಾ: ಹಿರಿತೆರೆ, ಕಿರುತೆರೆ ನಟ-ನಟಿಯರ ನಿಗೂಢ ಸಾವಿನ ಸರಣಿ ಮತ್ತೆ ಮುಂದುವರೆದಿದೆ. ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌, ನಟಿ ಶ್ರೀದೇವಿ ಅವರ ಸಾವಿನ ಬೆನ್ನಲ್ಲೇ ಹಲವಾರು ನಟ-ನಟಿಯರು ಮೃತಪಟ್ಟಿದ್ದಾರೆ. ಹಲವಕ್ಕೆ ಖಿನ್ನತೆಯೇ ಕಾರಣ ಎಂದು ಹೇಳಲಾಗುತ್ತಿದ್ದರೂ ಕೆಲವು ಸಾವು ನಿಗೂಢವಾಗಿಯೇ ಉಳಿದಿವೆ. ಈಗ ಈ ನಿಗೂಢಗಳ ಸಾಲಿನಲ್ಲಿ ಇದೀಗ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಸರದಿ. ಶನಿವಾರ (ಮೇ 15) ಸಂಜೆ ದಕ್ಷಿಣ ಕೋಲ್ಕತಾದ ಅಪಾರ್ಟ್​​ಮೆಂಟ್‌ನಲ್ಲಿ ನೇಣು ಬಿಗಿದ […]

Advertisement

Wordpress Social Share Plugin powered by Ultimatelysocial