ಪಾಕಿಸ್ತಾನ ತಂಡವನ್ನು ಬಲಪಡಿಸಲು ಬಿಸಿಸಿಐ

 

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಧ್ಯಂತರ ಆಯ್ಕೆ ಸಮಿತಿಯ ಅಧ್ಯಕ್ಷ ಶಾಹಿದ್ ಅಫ್ರಿದಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮತ್ತಷ್ಟು ಬಲಪಡಿಸಲು, ಪಾಕಿಸ್ತಾನಕ್ಕಾಗಿ ಎರಡು ತಂಡಗಳನ್ನು ರಚಿಸುವುದಾಗಿ ತಿಳಿಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.”ಪಾಕಿಸ್ತಾನ ತಂಡದ ಬೆಂಚ್‌ ಶಕ್ತಿಯನ್ನು ಹೆಚ್ಚಿಸಲು ನನ್ನ ಅಧಿಕಾರಾವಧಿ ಮುಗಿಯುವ ಮೊದಲು ಪಾಕಿಸ್ತಾನಕ್ಕಾಗಿ ಎರಡು ತಂಡಗಳನ್ನು ರಚಿಸುವ ಉದ್ದೇಶ ಹೊಂದಿದ್ದೇನೆ” ಎಂದು ಶಾಹಿದ್ ಅಫ್ರಿದಿ ತಿಳಿಸಿದ್ದಾರೆ.ತಂಡದ ಪ್ರಮುಖ ವೇಗಿಗಳಾದ ಶಾಹೀನ್ ಅಫ್ರಿದಿ ಮತ್ತು ಹ್ಯಾರಿಸ್ ರೌಫ್‌ ಅನುಪಸ್ಥಿತಿಯಲ್ಲಿ ಪಾಕಿಸ್ತಾನ ವೇಗಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 0-3 ಅಂತರದಲ್ಲಿ ಸೋತರು. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೂಡ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ.ಪಾಕಿಸ್ತಾನ ತಂಡದ ಆಟಗಾರರು ಮತ್ತು ಪಿಸಿಬಿ ಅಧಿಕಾರಿಗಳ ನಡುವೆ ಸಂವಹನದ ಕೊರತೆಯಿದೆ ಎಂದು ಮನಗಂಡಿರುವ ಶಾಹಿದ್ ಅಫ್ರಿದಿ, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. “ಈ ಹಿಂದೆ ಸಂವಹನದ ಕೊರತೆ ಇತ್ತು ಎಂದು ನನಗೆ ಅನಿಸುತ್ತದೆ. ಆಟಗಾರರ ಜೊತೆ ಪ್ರತ್ಯೇಕವಾಗಿ ಮಾತನಾಡುವ ಮೂಲಕ ಅವರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ” ಎಂದು ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಪಂತ್‌ಗೆ ಈತ ಹೆಚ್ಚು ಸೂಕ್ತ ಬದಲಿ ಆಟಗಾರ

Sun Jan 1 , 2023
  ಭಾರತ ಟೆಸ್ಟ್ ತಂಡದ ಕಾಯಂ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ರಿಷಭ್ ಪಂತ್ ಚೇತರಿಸಿಕೊಳ್ಳದಿದ್ದಲ್ಲಿ ಆತನ ಬದಲಿಗೆ ಇಶಾನ್ ಕಿಶನ್ ಅವರನ್ನು ಭಾರತ ಆಯ್ಕೆ ಮಾಡಬೇಕು ಎಂದು ಮಾಜಿ ಆಯ್ಕೆಗಾರ ಸಬಾ ಕರೀಮ್ ಅಭಿಪ್ರಾಯಪಟ್ಟಿದ್ದಾರೆ.ಭಾರತವು ಫೆಬ್ರವರಿ 9ರಿಂದ ಮಾರ್ಚ್ 13ರವರೆಗೆ ತವರಿನಲ್ಲಿ ನಾಲ್ಕು ಟೆಸ್ಟ್‌ ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಆತಿಥೇಯ ಭಾರತಕ್ಕೆ […]

Advertisement

Wordpress Social Share Plugin powered by Ultimatelysocial