‘ತಾನು ಕಳ್ಳ ಪರರ ನಂಬ’ ಪಾಕಿಸ್ತಾನ! ಉಗ್ರರಿಗೆ ನೆರವು ನೀಡ್ತಿರುವ ತಾಲಿಬಾನ್ ವಿರುದ್ಧ ಯುದ್ದ.

 

ಪಾಕಿಸ್ತಾನದಲ್ಲಿ ಭಯೋತ್ಪಾದಕ ಕೃತ್ಯ ಎಸಗುತ್ತಿರುವ ತೆಹ್ರಿಕ್ – ಇ – ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಗೆ ಅಫ್ಘಾನಿಸ್ತಾನದ ತಾಲಿಬಾನ್ ಸಂಘಟನೆ ನೆರವು ನೀಡುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಒಂದು ವೇಳೆ ತಾಲಿಬಾನ್ ತನ್ನ ನೀತಿಯನ್ನು ಮುಂದುವರೆಸಿದರೆ ಅಫ್ಘಾನಿಸ್ತಾನದ ವಿರುದ್ಧ ಯುದ್ಧ ನಡೆಸುವ ಎಚ್ಚರಿಕೆ ನೀಡಿದೆ.ಆದ್ರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಫ್ಘಾನಿಸ್ತಾನದ ತಾಲಿಬಾನ್ ಸಂಘಟನೆಯು ತಾನು ತೆಹ್ರಿಕ್ – ಇ – ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಂಘಟನೆಗೆ ಯಾವುದೇ ನೆರವನ್ನು ನೀಡುತ್ತಿಲ್ಲ ಎಂದಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನದ ಗಡಿಯೊಳಗೆ ಟಿಟಿಪಿ ಸಂಘಟನೆಯ ಯಾವುದೇ ನೆಲೆ ಇಲ್ಲ ಎಂದೂ ಸ್ಪಷ್ಟೀಕರಣ ನೀಡಿದೆ.ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಅವರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಅಫ್ಘಾನಿಸ್ತಾನದ ಉಪ ಪ್ರಧಾನ ಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಅವರ ಜೊತೆ ಮಾತುಕತೆ ನಡೆಸಿದ್ದು, ಈ ಮಾತುಕತೆ ವೇಳೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಹೇಳಿಕೊಂಡಿವೆ. ಅಫ್ಘಾನಿಸ್ತಾನದ ಉಪ ಪ್ರಧಾನಿ ಜೊತೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಮಾತುಕತೆ ನಡೆಸುವ ವೇಳೆ ಪಾಕಿಸ್ತಾನದ ಬೇಹುಗಾರಿಕಾ ಇಲಾಖೆ ಐಎಸ್‌ಐನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ನದೀಮ್ ಅಹ್ಮದ್ ಅಂಜುಂ ಕೂಡಾ ಜೊತೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಇದಲ್ಲದೆ ಪಾಕಿಸ್ತಾನದ ರಕ್ಷಣಾ ಹಾಗೂ ವಿದೇಶಾಂಗ ಸಚಿವಾಲಯದ ಹಲವು ಉನ್ನತಾಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಅಫ್ಘಾನಿಸ್ತಾನದ ತಾಲಿಬಾನ್ ನಾಯಕರು ತೆಹ್ರಿಕ್ – ಇ – ತಾಲಿಬಾನ್ ಪಾಕಿಸ್ತಾನ ಸಂಘಟನೆಗೆ ಯಾವುದೇ ರೀತಿಯ ನೆರವು ನೀಡಬಾರದು. ಏಕೆಂದರೆ ಟಿಟಿಪಿ ಉಗ್ರರು ಪಾಕಿಸ್ತಾನದ ನೆಲದಲ್ಲಿ ರಕ್ತದೋಕುಳಿ ಹರಿಸುತ್ತಿದ್ದಾರೆ. ಹೀಗಾಗಿ, ಟಿಟಿಪಿ ಉಗ್ರರನ್ನು ಅಫ್ಘನ್ ನೆಲದಿಂದ ನಿರ್ನಾಮ ಮಾಡಬೇಕು ಎಂದು ತಾಲಿಬಾನ್ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದೇವೆ ಎಂದು ಪಾಕಿಸ್ತಾನದ ಅಧಿಕಾರಿಗಳು ವಿವರಣೆ ನೀಡಿದ್ದಾರೆ.ಒಂದು ವೇಳೆ ಅಫ್ಘನ್ ತಾಲಿಬಾನ್ ಸಂಘಟನೆಯು ಟಿಟಿಪಿಗೆ ಬೆಂಬಲ ನೀಡಿದರೆ, ಯಾವುದೇ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನಿರೋದಿಲ್ಲ. ಅಫ್ಘಾನಿಸ್ತಾನದ ಒಳಗೆ ನುಗ್ಗಿ ಹೊಡೆಯುತ್ತೇವೆ ಎಂದು ಪಾಕಿಸ್ತಾನ ಧಮ್ಕಿ ಹಾಕಿದೆಯಂತೆ ಅಷ್ಟೇ ಅಲ್ಲ, ಅಫ್ಘನ್ ನೆಲದಿಂದ ಆಗಮಿಸುವ ಟಿಟಿಪಿ ಉಗ್ರರು ಪೇಶಾವರ ಸೇರಿದಂತೆ ಹಲವೆಡೆ ಯಾವ ರೀತಿ ದಾಳಿ ನಡೆಸಿದರು ಅನ್ನೋದಕ್ಕೆ ತನ್ನ ಬಳಿ ಸಾಕ್ಷ್ಯವಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಈಗಲೇ ತಾಲಿಬಾನ್ ಸಂಘಟನೆಯು ಟಿಟಿಪಿ ಉಗ್ರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಫ್ಘಾನ್ ಗಡಿಯೊಳಗೆ ನುಗ್ಗಿ ಮಿಲಿಟರಿ ಕಾರ್ಯಾಚರಣೆ ನಡೆಸುತ್ತೇವೆ ಎಂದೂ ಪಾಕಿಸ್ತಾನ ಬೆದರಿಕೆ ಹಾಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ!

Tue Feb 28 , 2023
  ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದೇ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಈ ವರದಿಯನ್ನು ಪಡೆದು ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 7ನೇ ವೇತನ ಆಯೋಗದಂತೆ ವೇತನ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ. ಸಮತಿಯು ಸರ್ಕಾರ ವಹಿಸಿದಂತ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇದೀಗ ಮಧ್ಯಂತರ […]

Advertisement

Wordpress Social Share Plugin powered by Ultimatelysocial