ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ಕಸರತ್ತು

ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ಕಸರತ್ತು ಚುರುಕು ಪಡೆದಿರುವ ಬೆನ್ನಲ್ಲೇ ಮತದಾನವನ್ನು ಬಹಿಷ್ಕರಿಸಲು ಪಿಟಿಐ (ಪಾಕಿಸ್ತಾನ್‌ ತೆಹ್ರಿಕ್‌ ಇ ಇನ್ಸಾಫ್‌) ಪಕ್ಷವು ನಿರ್ಧರಿಸಿದೆ. ಎಲ್ಲ ಸಂಸದರು ರಾಷ್ಟ್ರೀಯ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತ ಫವಾದ್ ಚೌಧರಿ ಸೋಮವಾರ ತಿಳಿಸಿದ್ದಾರೆ.

ಇಮ್ರಾನ್ ಖಾನ್ ಸರ್ಕಾರದಲ್ಲಿ ಮಾಹಿತಿ ಸಚಿವರಾಗಿದ್ದ ಚೌಧರಿ, ನಾವು ನೂತನ ಪ್ರಧಾನಿ ಆಯ್ಕೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಹೇಳಿದ್ದಾರೆ.

‘ಪಿಟಿಐ (ಪಾಕಿಸ್ತಾನ್‌ ತೆಹ್ರಿಕ್‌ ಇ ಇನ್ಸಾಫ್‌) ಪಕ್ಷದ ಎಲ್ಲ ಸಂಸದರು ರಾಷ್ಟ್ರೀಯ ಸಂಸತ್ತಿಗೆ ರಾಜೀನಾಮೆ ನೀಡಲು ನಮ್ಮ ಪಕ್ಷದ ಸಂಸದೀಯ ಸಮಿತಿ ನಿರ್ಧರಿಸಿದೆ. ಇಂದೇ ನಮ್ಮ ಪಕ್ಷದ ಎಲ್ಲ ಸಂಸದರು ರಾಜೀನಾಮೆ ಸಲ್ಲಿಸಲಿದ್ದಾರೆ. ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತೇವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇಮ್ರಾನ್ ಖಾನ್ ಸಹ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಜಿಯೊ ಟಿವಿ ವರದಿ ಮಾಡಿದೆ.

‘ಯಾವುದೇ ಸಂದರ್ಭದಲ್ಲೂ ನಾವು ಈ ಸಂಸತ್ತಿನಲ್ಲಿ ಕೂರುವುದಿಲ್ಲ’ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ವರದಿಯಾಗಿದೆ.

‘ಸರ್ಕಾರದ ಚುಕ್ಕಾಣಿ ಹಿಡಿಯಲು ಯತ್ನಿಸುತ್ತಿರುವವರ ಮೇಲೆ ಒತ್ತಡ ತರಲು ನಾವು ಈ ನಿರ್ಧಾರ ಕೈಗೊಂಡಿದ್ದೇವೆ. ಅವರನ್ನು ಮುಂದುವರಿಯಲು ಬಿಡುವುದಿಲ್ಲ’ಎಂದು ಖಾನ್ ಗುಡುಗಿರುವುದಾಗಿ ವರದಿಯಾಗಿದೆ.

ಆದರೆ, ಪಕ್ಷದ ಹಲವು ಸಂಸದರು ರಾಜೀನಾಮೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ನಾನು ಒಂಟಿಯಾದರೂ ಸರಿ ರಾಜೀನಾಮೆ ನೀಡುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ವರದಿಯಾಗಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್- ನವಾಜ್(ಪಿಎಂಎಲ್-ಎನ್) ಪಕ್ಷದ ಅಧ್ಯಕ್ಷ ಶಹ್ಬಾಜ್ ಷರೀಫ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದಾರೆ.

ಅವಿಶ್ವಾಸ ನಿರ್ಣಯದ ಮೂಲಕ ಪಾಕಿಸ್ತಾನ ಪ್ರಧಾನಿ ಹುದ್ದೆಯಿಂದ ಇಮ್ರಾನ್ ಖಾನ್ ಅವರನ್ನು ಕೆಳಗಿಳಿಸಿದ ಬಳಿಕ ಭಾನುವಾರದಿಂದ ನೂತನ ಪ್ರಧಾನಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆಗಾಗಿ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನ ಆರಂಭವಾಗಿದೆ!

Mon Apr 11 , 2022
  ಇಸ್ಲಮಾಬಾದ್:ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆಗಾಗಿ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನ ಆರಂಭವಾಗಿದೆ.ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಉನ್ನತ ಹುದ್ದೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕ ಶಾ ಮಹಮೂದ್ ಖುರೇಷಿ ಅವರು ಭಾನುವಾರದಂದು ತಮ್ಮ ನಾಮನಿರ್ದೇಶನ ಪತ್ರಗಳನ್ನು ಅನುಮೋದಿಸುವುದರೊಂದಿಗೆ ಪ್ರಧಾನಿ ಹುದ್ದೆಗೆ ಕಣದಲ್ಲಿದ್ದರು.ಆದಾಗ್ಯೂ, ಅಧಿವೇಶನಕ್ಕೆ ಮುಂಚಿತವಾಗಿ, ರಾಷ್ಟ್ರೀಯ ಅಸೆಂಬ್ಲಿಯ ಪಿಟಿಐ ಸದಸ್ಯರು ಪ್ರಧಾನ ಮಂತ್ರಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಸಾಮೂಹಿಕವಾಗಿ […]

Advertisement

Wordpress Social Share Plugin powered by Ultimatelysocial