ಗಡಿ ದಾಟಿ ಭಾರತಕ್ಕೆ ಬಂದ 3 ವರ್ಷದ ಪಾಕಿಸ್ತಾನಿ ಬಾಲಕ!

ಭಾರತೀಯ ಸೇನೆಯ ಮಾನವೀಯ ಮುಖವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯನ್ನು (IB) ಅಜಾಗರೂಕತೆಯಿಂದ ಅರಿವಿಲ್ಲದೇ ದಾಟಿದ ಮೂರು ವರ್ಷದ ಪಾಕಿಸ್ತಾನಿ ಬಾಲಕನನ್ನು   ಗಡಿ ಭದ್ರತಾ ಪಡೆ (BSF) ಪಾಕಿಸ್ತಾನಿ ರೇಂಜರ್‌ಗಳಿಗೆ ಹಸ್ತಾಂತರಿಸಿದೆ ಎಂದು ಭಾರತೀಯ ಸೇನೆಯ (Indian Army) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಫಿರೋಜ್‌ಪುರ ಸೆಕ್ಟರ್‌ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಐಬಿ ಬೇಲಿ ಬಳಿ ಮಗು ಅಳುತ್ತಿರುವುದನ್ನು ಬಿಎಸ್‌ಎಫ್ ಯೋಧರು ಗಮನಿಸಿದ್ದಾರೆ. ಮಗು ಬೇಕಂತಲೇ ಗಡಿ ದಾಟಿ ಬಂದಿಲ್ಲ ಎಂಬುದು ಈ ಸಮಯದಲ್ಲಿ ಭಾರತೀಯ ಯೋಧರ ಗಮನಕ್ಕೆ ಬಂದಿದೆ.
ಅಚಾತುರ್ಯದಿಂದ ಗಡಿ ದಾಟಿದ ಪ್ರಕರಣ ಎಂದು ಅರಿತ ಬಿಎಸ್‌ಎಫ್ ಪಂಜಾಬ್ ಫ್ರಾಂಟಿಯರ್ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ರೇಂಜರ್ಸ್‌ಗೆ ತೆರಳಿ ಸೌಹಾರ್ದತೆಯ ಸೂಚಕವಾಗಿ ಮಗುವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುರಸಭೆ ಅಧ್ಯಕ್ಷರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆ : ಶ್ರೀನಿವಾಸಪುರ ಪಟ್ಟಣದ ಪುರಸಭೆ ಅಧ್ಯಕ್ಷರಾದ ಲಲಿತಾ ಶ್ರೀನಿವಾಸ್ ಸೇರ್ಪಡೆ

Sat Jul 2 , 2022
ಪುರಸಭೆ ಅಧ್ಯಕ್ಷರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್  ಸೇರ್ಪಡೆಯಾಗಿದ್ದಾರೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಪುರಸಭೆ ಅಧ್ಯಕ್ಷರಾದ ಲಲಿತಾ ಶ್ರೀನಿವಾಸ್ ರವರು ಜೆಡಿಎಸ್ ಪಕ್ಷವನ್ನು ತೊರೆದು ತಾಲೂಕಿನ ಹಾಲಿ ಶಾಸಕರು ಹಾಗೂ ಮಾಜಿ ವಿಧಾನ ಸಭಾಧ್ಯಕ್ಷರಾದ ಕೆಆರ್ ರಮೇಶ್ ಕುಮಾರ್ ರವರ ನೇತೃತ್ವದಲ್ಲಿ ಶ್ರೀನಿವಾಸಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ .  ಈ ಸಮಯದಲ್ಲಿ ನಡೆದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್  ಮಾತನಾಡಿ ಶ್ರೀನಿವಾಸಪುರ ಪಟ್ಟಣದ […]

Advertisement

Wordpress Social Share Plugin powered by Ultimatelysocial