ತೀವ್ರ ಆರ್ಥಿಕ ಬಿಕ್ಕಿಟ್ಟಿನಿಂದ ತತ್ತರಿಸಿದ ಪಾಕಿಸ್ತಾನ!

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನ ಮತ್ತೊಂದು ನಡೆಯಿಂದ ದಿವಾಳಿತನವನ್ನು ತೋರಿಸಿದೆ. ಪಾಕ್‌ನ ವಿದೇಶಿ ವಿನಿಮಯ ಸಂಗ್ರಹ ಇದುವರೆಗಿನ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಇಷ್ಟು ಹಣ ಕೆಲವು ವಾರಗಳ ಮೌಲ್ಯದ ಆಮದುಗಳಿಗೆ ಸಾಕಾಗುವುದಿಲ್ಲ.

ಇಂಥ ಹೀನ ಸ್ಥಿತಿಯಲ್ಲಿ ಇರುವ ಪಾಕಿಸ್ತಾನದ ಇದೀಗ ಮಿಲಿಟರಿ ಪರೇಡ್‌ನ್ನು ರದ್ದು ಮಾಡಿದೆ.

ಪ್ರತಿ ವರ್ಷ ಮಾರ್ಚ್ 23 ರಂದು ಪಾಕಿಸ್ತಾನದಲ್ಲಿ ಮಿಲಿಟರಿ ಪರೇಡ್ ನಡೆಯುತ್ತದೆ. ಪಾಕ್ ದಿನ ಆಚರಣೆಯ ಅಂಗವಾಗಿ ಪರೇಡ್ ಮಾಡಲಾಗುತ್ತದೆ. ಆದರೆ ಈ ಬಾರಿ ಪರೇಡ್ ನಡೆಸಲು ಪಾಕ್ ಹಣಕಾಸು ಕೊರತೆ ಎದುರಿಸುತ್ತಿದೆ.

ಪ್ರತಿ ವರ್ಷ ಮಾರ್ಚ್ 23 ರಂದು ಪಾಕ್ ತನ್ನ ಸೇನಾ ಶಕ್ತಿಯನ್ನು ಜಗತ್ತಿಗೆ ಸಾರಲು ಮಿಲಿಟರಿ ಪರೇಡ್ ನಡೆಸುತ್ತಿತ್ತು. ಈ ಬಾರಿ ಇದಕ್ಕೂ ದುಡ್ಡಿಲ್ಲದ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಇದೆ. ಪಾಕಿಸ್ತಾನದಲ್ಲಿ ಆಹಾರ ಮತ್ತು ಇಂಧನದ ಬೆಲೆ ಗಗನಕ್ಕೇರಿದೆ. ವಿದ್ಯುತ್ ಬೆಲೆಗಳು ಭರಿಸಲಾರದ ಮಟ್ಟಕ್ಕೆ ಬಂದು ತಲುಪಿದೆ. ಇದರ ಜತೆಗೆ ಪ್ರವಾಹದ ಭೀತಿಯಿಂದ ಮಕ್ಕಳಿಗೆ ಅಪೌಷ್ಠಿಕತೆ ಎದುರಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ರೈಲ್ವೆ ನಿಲ್ದಾಣಕ್ಕೆ ಶಿವಪ್ಪ ನಾಯಕ ಹೆಸರಿಡಲು ತೀರ್ಮಾನ !

Tue Feb 21 , 2023
ಬೆಂಗಳೂರು: ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ರೈಲ್ವೆ ನಿಲ್ದಾಣಕ್ಕೆ ಶಿವಪ್ಪ ನಾಯಕ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಈ ಕುರಿತಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು, ಮಹನೀಯರ ಹೆಸರಿಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಯಡಿಯೂರಪ್ಪ ಅವರೇ ಕುವೆಂಪು ಹೆಸರಿಡಬೇಕೆಂದು ಸಲಹೆ ನೀಡಿದ್ದು, ಅವರ ಸಲಹೆಯನ್ನು ಪರಿಗಣಿಸಿದ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial