ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ

ಹುಬ್ಬಳ್ಳಿ, ಏ.19- ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ.

ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು ಏನಾದರೂ ಹೇಳಿದ್ದರೆ, ಅದಕ್ಕೆ ಪ್ರತಿಕ್ರಿಯೆ ಕೊಡುವುದಿಲ್ಲ. ಪಕ್ಷದ ವ್ಯವಸ್ಥೆಯೊಳಗೆ, ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ ಎಂದರು.

75 ವರ್ಷ ಮೀರಿದವರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೀರಾ ಎಂಬ ಪ್ರಶ್ನೆಗೆ, ಪಕ್ಷದ ರಾಷ್ಟ್ರೀಯ ನಾಯಕರು ಆ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಟಿಕೆಟ್ ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು, ಚುನಾವಣೆಗೆ ನಾನೇ ಪಕ್ಷದ ಅಭ್ಯರ್ಥಿಯಾಗಿದ್ದು, ಪಕ್ಷದ ಮುಖಂಡರೂ ಹಸಿರು ನಿಶಾನೆ ತೋರಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂಜಿನಿಯರಿಂಗ್​ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Tue Apr 19 , 2022
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಇಂಜಿನಿಯರಿಂಗ್​ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸ್ಪೀಡ್​ ಪೋಸ್ಟ್​ ಅಥವಾ ಕೊರಿಯರ್​ ಮೂಲಕ ಕಳುಹಿಸತಕ್ಕದ್ದು. ಹುದ್ದೆಗಳ ವಿವರ: ಅಸಿಸ್ಟೆಂಟ್​ ಎಕ್ಸಿಕ್ಯೂಟಿವ್​ ಇಂಜಿನಿಯರ್​ (ಸೇಫ್ಟಿ ಆಯಂಡ್​ ಹೆಲ್ತ್​)-2, ಅಸಿಸ್ಟೆಂಟ್​ ಇಂಜಿನಿಯರ್​ (ಸೇಫ್ಟಿ ಆಯಂಡ್​ ಹೆಲ್ತ್​)- 4 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ವಯೋಮಿತಿ:ಅಸಿಸ್ಟೆಂಟ್​ ಎಕ್ಸಿಕ್ಯೂಟಿವ್​ ಇಂಜಿನಿಯರ್​ಗೆ 45 ವರ್ಷ, ಅಸಿಸ್ಟೆಂಟ್​ ಇಂಜಿನಿಯರ್​ಗೆ 40 […]

Advertisement

Wordpress Social Share Plugin powered by Ultimatelysocial