ನಾಳೆಯಿಂದ ಪಂಚರತ್ನ ರಥಯಾತ್ರೆ ಪುನಾರಂಭ.

ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬಿಡುವು ನೀಡಲಾಗಿತ್ತು, ಮತ್ತೆ ನಾಳೆಯಿಂದ ಯಾತ್ರೆ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ನಾಳೆಯಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ., 22ರಂದು ಶಿವಮೊಗ್ಗ ಗ್ರಾಮಾಂತರ, 23ರಂದು ಶಿವಮೊಗ್ಗ ಗ್ರಾಮಾಂತರ ಹಾಗೂ ಸೊರಬ, 24ರಂದು ಯಲ್ಲಾಪುರ ಮತ್ತು ತೀರ್ಥಹಳ್ಳಿ, 25ರಂದು ತೀರ್ಥಹಳ್ಳಿ ಹಾಗೂ ಕೊಪ್ಪ, 26ರಂದು ಶೃಂಗೇರಿ, ಕೊಪ್ಪ, 28ಕ್ಕೆ ಚಿಕ್ಕಮಗಳೂರು ಹಾಗೂ ಮಾರ್ಚ್ 1ರಂದು ಮೂಡಿಗೆರೆ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಈ ತಿಂಗಳ 27ರಂದು ಪಕ್ಷದ ಬೃಹತ್ ಸಮಾವೇಶ ಇದ್ದು, ಅಂದು ಪಂಚರತ್ನ ರಥಯಾತ್ರೆಗೆ ಬಿಡುವು ಕೊಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

“ ಕಾಮಿಡಿ ಕಿಲಾಡಿಗಳು ಸೀಸನ್ ೪ ಗ್ರ‍್ಯಾಂಡ್‌ ಫಿನಾಲೆ ”

Tue Feb 21 , 2023
ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಪ್ರತಿ […]

Advertisement

Wordpress Social Share Plugin powered by Ultimatelysocial