ಪಂಡಿತ ಚನ್ನಪ್ಪ ಎರೇಸೀಮೆ ಅವರು ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲೊಬ್ಬರು.

 

ಪಂಡಿತ ಚನ್ನಪ್ಪ ಎರೇಸೀಮೆ ಅವರು ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲೊಬ್ಬರು. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು ಪ್ರವೃತ್ತಿಯಲ್ಲಿ ಸಾಹಿತಿ, ಬರಹಗಾರ ಮತ್ತು ಪ್ರಖರ ವಾಗ್ಮಿ. ಉತ್ತಮ ನಾಟಕಕಾರರೂ ಮತ್ತು ಪ್ರವಚನಕಾರರೂ ಆಗಿದ್ದ ಅವರು ‘ನುಡಿಗಾರುಡಿಗ’ ಎಂದೇ ಖ್ಯಾತರಾಗಿದ್ದರು. ಸರಳ, ಸಜ್ಜನಿಕೆಯ ಸಾಕಾರಮೂರ್ತಿಯಂತಿದ್ದ ಅವರು ಕುತೂಹಲ ಕೆರಳಿಸುವಂತೆ ಕಥಾ ಕಾಲಕ್ಷೇಪ ಮಾಡುವುದರಲ್ಲಿಯೂ ಸಿದ್ಧಹಸ್ತರಾಗಿದ್ದರು. ಇಂದು ಅವರ ಸಂಸ್ಮರಣೆ ದಿನ.ಚನ್ನಪ್ಪ ಎರೇಸೀಮೆ ಅವರು 1919 ವರ್ಷದ ಸೆಪ್ಟೆಂಬರ್ 3ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹರವಿ ಗ್ರಾಮದಲ್ಲಿ ಜನಿಸಿದರು. ಅವರು ಮುಲ್ಕಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು. ಶಿಕ್ಷಕರಾಗಿದ್ದುಕೊಂಡೇ ನಾಟಕ ಬರೆದರು, ಕೀರ್ತನೆ ಹೇಳಿದರು ಮತ್ತು ಪ್ರವಚನಗಳನ್ನೂ ಮಾಡಿದರು. ಶಿಕ್ಷಕ ತರಬೇತಿ ಕಾಲೇಜಿನಲ್ಲಿ ಭಾಷಾ ಸಾಹಿತ್ಯದ ಶಿಕ್ಷಕರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಎರೇಸೀಮೆ ಅವರು ವಿದ್ಯಾರ್ಥಿಗಳ ಪಾಲಿಗೆ ಎಂದೆಂದೂ ‘ಪ್ರೀತಿಯ ಮೇಷ್ಟ್ರು’. ಒಂಭತ್ತು ರೂಪಾಯಿ ಪಗಾರದ ಒಬ್ಬ ಗಾಂವಠೀ ಶಾಲೆಯ ಮೇಷ್ಟರು ಕಡುಬಡತನ, ನಿರುತ್ಸಾಹದ ಸನ್ನಿವೇಶದಲ್ಲೂ ಧೈರ್ಯ, ಸಾಹಸ, ಶ್ರದ್ಧಾಸಕ್ತಿಗಳಿಂದ ಹಂತಹಂತವಾಗಿ ಮೇಲೇರಿ ಹೈಸ್ಕೂಲು, ತರಬೇತಿ ಕಾಲೇಜುಗಳಲ್ಲಿ ಭಾಷಾಬೋಧಕರಾಗಿ ಕೀರ್ತಿಗಳಿಸುವ ಹಂತಕ್ಕೆ ಏರಿದ ವೀರಗಾಥೆಯನ್ನು ಅವರ ಆತ್ಮಕಥೆಯಲ್ಲಿ ಕಾಣಬಹುದಾಗಿದೆ.
ಪಂಡಿತ ಚನ್ನಪ್ಪ ಎರೇಸೀಮೆ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅಮೂಲ್ಯ ಕೃತಿಗಳನ್ನು ನೀಡಿದ್ದಾರೆ. ಹೊಸಗನ್ನಡ ಸರಳ ವ್ಯಾಕರಣ ಪಾಠಗಳು, ಅರವಿಂದ, ಬಸವಣ್ಣನವರ ಕ್ರಾಂತಿ ಕಹಳೆ, ಬಸವಣ್ಣನವರ ಪಂಚಪರುಷ, ಅಜಗಣ್ಣ-ಮುಕ್ತಾಯಕ್ಕ, ಸಿದ್ಧರಾಮನ ಲಿಂಗತಪಸ್ಸು, ಸಿದ್ಧಗಂಗಾ ಕ್ಷೇತ್ರದ ಇತಿಹಾಸ-ಪರಂಪರೆ, ಚನ್ನಮಲ್ಲಿಕಾರ್ಜುನ, ಉದ್ದಾನ ಶಿವಯೋಗಿ, ರಾಜಶೇಖರ ವಿಳಾಸ ಸೇರಿದಂತೆ ಹದಿನೆಂಟು ಮೌಲಿಕ ಕೃತಿಗಳನ್ನು ನೀಡಿದ್ದಾರೆ. ಹಿರಿಯ ವಿದ್ವಾಂಸರ ಜತೆ ಸೇರಿ ಒಂಬತ್ತು ಶ್ರೇಷ್ಠ ಪ್ರೌಢ ಗ್ರಂಥಗಳನ್ನು ಸಂಪಾದಿಸಿದ್ದಾರೆ. ಎಂಬತ್ತಕ್ಕೂ ಹೆಚ್ಚು ಮೌಲಿಕ ಲೇಖನಗಳನ್ನು ಪ್ರಕಟಿಸಿದ್ದಾರೆ. ಅವರು ಮಕ್ಕಳಿಗೆ ಸಂಬಂಧಿಸಿದಂತೆಯೂ ಅನೇಕ ಕೃತಿಗಳನ್ನು ಪ್ರಕಟಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನಪರ ಕಾರ್ಯಕ್ರಮ ನೀಡುವ 'ಕೈ' ಜೊತೆ‌ ಕೈ‌ಜೋಡಿಸಿ!

Wed Mar 1 , 2023
ಹಾಸನ: ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯದಂತಹ ಜನಪರ ಕಾರ್ಯಕ್ರಮ ನೀಡುವ ಕೈಗೆ ನೀವು ಅಧಿಕಾರ ನೀಡಬೇಕು. ದಾನ ಧರ್ಮ ಮಾಡುವ ಕೈ ಜತೆ ಕೈ ಜೋಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಸಕಲೇಶಪುರದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ‌ ಅವರು, ಕಳೆದ ಬಾರಿ ನಮ್ಮ ಸರ್ಕಾರ ಇದ್ದಾಗ ಎತ್ತಿನಹೊಳೆ ಯೋಜನೆ ಮಾಡಿದೆವು. ಅನ್ನಭಾಗ್ಯ ಯೋಜನೆ ನೀಡಿದೆವು. ರೈತರಿಗೆ 7 ತಾಸು ವಿದ್ಯುತ್ ನೀಡಿದೆವು. ಹಾಲು ಉತ್ಪಾದಕರಿಗೆ 5 ರೂ. […]

Advertisement

Wordpress Social Share Plugin powered by Ultimatelysocial