ಪಂಜಾಬ್ ನೂತನ ಸಿಎಂ ಭಗವಂತ್ ಮಾನ್ ರಿಂದ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮಾರ್ಚ್ 16ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಮಾನ್ ಅವರು ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿದರು.ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಬದಲಾವಣೆಯ ಅಲೆಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳನ್ನು ಗೆದ್ದುಕೊಂಡಿದೆ.ಮಾನ್ ಅವರು ಇಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಕಚೇರಿಯಲ್ಲಿ ಭೇಟಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮರಾಠಿ ಕಡ್ಡಾಯಕ್ಕೆ ಮಸೂದೆ ಅಂಗೀಕಾರ

Thu Mar 24 , 2022
ಮುಂಬೈ: ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮರಾಠಿ ಬಳಕೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಮಹಾರಾಷ್ಟ್ರದ ವಿಧಾನಸಭೆ ಹಾಗೂ ಪರಿಷತ್‌ನಲ್ಲಿ ಅವಿರೋಧವಾಗಿ ಗುರುವಾರ ಅಂಗೀಕರಿಸಲಾಯಿತು.   ವಿಧಾನ ಪರಿಷತ್‌ನಲ್ಲಿ ಈ ವಿಷಯ ಕುರಿತು ಮಾತನಾಡಿದ ಸಚಿವ ಸುಭಾಷ್‌ ದೇಸಾಯಿ, ‘ಮಹಾರಾಷ್ಟ್ರ ಆಡಳಿತ ಭಾಷೆ ಕಾಯ್ದೆ-1964’ರ ಪ್ರಕಾರ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮರಾಠಿ ಭಾಷೆ ಬಳಕೆ ಕಡ್ಡಾಯ ಇರಲಿಲ್ಲ. ಈ ಲೋಪವನ್ನು ಸರಿಪಡಿಸುವ ಪ್ರಯತ್ನದ ಭಾಗವಾಗಿ ಮಸೂದೆಯನ್ನು ಅಂಗೀಕರಿಸಲಾಗಿದೆ’ ಎಂದರು. ‘ವಿದೇಶಗಳ ರಾಯಭಾರಿಗಳ ಜೊತೆ ಸಂವಹನ ಹಾಗೂ […]

Advertisement

Wordpress Social Share Plugin powered by Ultimatelysocial